ಚಿಕ್ಕಮಗಳೂರು

ಚಿಕ್ಕಮಗಳೂರು | ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿ, ಒತ್ತುವರಿ ತೆರವು ಕೈಬಿಡಿ: ಭೂ ಸಾಗುವಳಿ ಹೋರಾಟ ಸಮಿತಿ ಆಗ್ರಹ

ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಅರಣ್ಯ ಭೂಮಿ ಒತ್ತುವರಿ ತೆರವು ಕೈಬಿಡುವಂತೆ ಭೂ ಸಾಗುವಳಿ ಹೋರಾಟ ಸಮಿತಿಯಿಂದ ಮಂಗಳವಾರದಂದು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಕಡವಂತಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದಪ್ರತಿಭಟನಾಕಾರರು ಗ್ರಾ.ಪಂ. ಅಧ್ಯಕ್ಷರು,...

ಚಿಕ್ಕಮಗಳೂರು | ಮಲೆನಾಡಿಗರ ಬದುಕಿನ ಪ್ರಶ್ನೆಯಾದ ಒತ್ತುವರಿ ತೆರವು : ಕಾನೂನು ಹೋರಾಟಕ್ಕೆ ಮುಖಂಡರ ಚಿಂತನೆ

ಮಲೆನಾಡಿನಲ್ಲಿ ಬದುಕು ಕಟ್ಟಿಕೊಂಡು ವಾಸವಾಗಿರುವ ಜನರನ್ನು ಹಾಗೂ ರೈತಾಪಿ ಕುಟುಂಬದವರನ್ನು ಒತ್ತುವರಿ ಆರೋಪಿಸಿ ಒಕ್ಕಲೆಬ್ಬಿಸುವುದು ಖಂಡನೀಯ ಎಂದು ಮಲೆನಾಡು ಕರಾವಳಿ ಒಕ್ಕೂಟ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ...

ಚಿಕ್ಕಮಗಳೂರು | ಗೂಗಲ್‌ನಲ್ಲಿ ತಪ್ಪು ಮಾಹಿತಿ: ‘ರಾಣಿಝರಿ’ ಬಿರುಕು ಬಿಟ್ಟಿತ್ತೆಂದು ಅಧಿಕಾರಿಗಳ ದೌಡು!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ...

ಬಡವರನ್ನು ಬಿಟ್ಟು, ನೂರಾರು ಎಕರೆಯ ಭೂ ಮಾಲೀಕರನ್ನು ಒಕ್ಕಲೆಬ್ಬಿಸಿ: ಸರ್ಕಾರಕ್ಕೆ ಹೋರಾಟಗಾರರ ಆಗ್ರಹ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಡವರು ಜೀವನಕ್ಕಾಗಿ ಬದುಕಿಗಾಗಿ ಒಂದು ಹಾಗೂ ಎರಡು ಎಕರೆ ಭೂಮಿ ಸಾಗುವಳಿ ಮಾಡಿ ಬದುಕನ್ನು ಕಟ್ಟಿಕೊಂಡಿರುವ ಕುಟುಂಬಗಳನ್ನು ಅದೆಷ್ಟೋ ಇದೆ. ಸುಮಾರು 30-40 ವರ್ಷಗಳಿಂದ ಆ ಜಾಗದಲ್ಲಿ...

ಚಿಕ್ಕಮಗಳೂರು | ಭೂಮಿ-ವಸತಿ ಇಲ್ಲದವರಿಗೆ ಸರ್ಕಾರ ನ್ಯಾಯ ದೊರಕಿಸಲು ಚಿಂತಿಸಲಿ: ಕೆ ಎಲ್ ಅಶೋಕ್

ಅರಣ್ಯ ರಾಷ್ಟ್ರೀಯ ಸಂಪತ್ತಾಗಿದ್ದು ಜನರನ್ನು ಹೊರಗಿಟ್ಟು ಪರಿಸರ ರಕ್ಷಣೆ ಮಾಡುವುದು ಕಷ್ಟಸಾಧ್ಯ, ಬಡವರನ್ನು ಬೀದಿಗೆ ತಳ್ಳಿ ಶ್ರೀಮಂತರನ್ನು ರಕ್ಷಿಸುವ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಹೊಂದಾಣಿಕೆ ಖಂಡನೀಯ. ಭೂಮಿ-ವಸತಿ ಇಲ್ಲದವರಿಗೆ ನ್ಯಾಯ ದೊರಕಿಸಿ...

ಚಿಕ್ಕಮಗಳೂರು | ಮಾಧವ ಗಾಡ್ಗೀಳ್ ವೈಜ್ಞಾನಿಕ ವರದಿ ಜಾರಿಗೆ ಪ್ರಗತಿಪರ ಸಂಘಟನೆ ಆಗ್ರಹ

ಜೀವನೋಪಾಯಕ್ಕಾಗಿ 2ರಿಂದ 3 ಎಕರೆ ಸಾಗುವಳಿ ಮಾಡಿಕೊಂಡಿರುವ ಬಡ ಸಾಗುವಳಿದಾರರನ್ನು ಹೊರತುಪಡಿಸಿ ಭೂಮಾಲೀಕರ ಅರಣ್ಯ ಒತ್ತುವರಿಯನ್ನು ಕಡ್ಡಾಯವಾಗಿ ತೆರವುಗೊಳಿಸಿ ಮಾಧವ ಗಾಡ್ಗೀಳ್ ವೈಜ್ಞಾನಿಕ ವರದಿ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಯಿಂದ...

ಚಿಕ್ಕಮಗಳೂರು | ಗುಡ್ಡ ಕುಸಿತ; ಚಾರ್ಮಾಡಿ ಘಾಟ್‌ ರಸ್ತೆಯೂ ಬಂದ್

ಚಿಕ್ಕಮಗಳೂರು-ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟ್‌ ರಸ್ತೆಯ ಮೇಲೆ ಗುಡ್ಡ ಕುಸಿದಿದ್ದು, ಸಂಚಾರ ಬಂದ್‌ ಆಗಿದೆ. ಇತ್ತೀಚಿಗೆ ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ಶಿರಾಡಿ ಘಾಟ್‌ನಲ್ಲಿಯೂ ಗುಡ್ಡ ಕುಸಿದಿದ್ದು,...

ಚಿಕ್ಕಮಗಳೂರು | ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆ; ಕ್ರಮಕ್ಕೆ ದಸಂಸ ಆಗ್ರಹ

ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆಮಾಡದಂತೆ ಕ್ರಮ ವಹಿಸಬೇಕು ಎಂದು ದಸಂಸ ಮುಖಂಡರು ಚಿಕ್ಕಮಗಳೂರು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಕುರಿತು ದಸಂಸ ಮಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ...

ಚಿಕ್ಕಮಗಳೂರು ಪ್ರವಾಹ : ತ್ವರಿತ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ಜಾರ್ಜ್ ನಿರ್ದೇಶನ

ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಿಕ್ಕಮಗಳೂರಿನ ಪ್ರವಾಹ ಪರಿಸ್ಥಿತಿ ಕುರಿತು ಸಮಾಲೋಚನೆ ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ಉಸ್ತುವಾರಿ ಸಚಿವರ ನಿರ್ದೇಶನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಮಾಲೋಚನೆ...

ಚಿಕ್ಕಮಗಳೂರು | ಪ್ರವಾಸಿತಾಣಕ್ಕೆ ಬರುವ ಪ್ರವಾಸಿಗರಿಗೆ ಆನ್‌ಲೈನ್ ನೋಂದಣಿ ಕಡ್ಡಾಯ; ಸ್ಥಳೀಯರ ಆಕ್ರೋಶ  

ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರಿಗೆ ಆನ್‌ಲೈನ್‌ ನೋಂದಣಿ ಕಡ್ಡಾಯ. ಹಾಗಾಗಿ ಪ್ರವಾಸಕ್ಕೆ ಬರುವವರು ಆನ್‌ಲೈನ್ ಮೂಲಕ ಕಾಯ್ದಿರಿಸಬೇಕೆಂದು ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆಯು ಗಿರಿಶ್ರೇಣಿಗಳ ಪರ್ವತಗಳಿಂದ ಕಂಗೊಳಿಸುತ್ತಿವೆ. ಇಲ್ಲಿ ನೋಡುಗರ ಸಂಖ್ಯೆಯೂ ದಿನದಿಂದ...

ಚಿಕ್ಕಮಗಳೂರು | ಡೆಂಗ್ಯೂ ಸೋಂಕಿಗೆ ಆರು ವರ್ಷದ ಬಾಲಕಿ ಬಲಿ

ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಡೆಂಘೀ ಸೋಂಕಿಗೆ ಆರು ವರ್ಷದ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸಾನಿಯಾ (6) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ...

ಚಿಕ್ಕಮಗಳೂರು | ಸಂಸ್ಕೃತ ಭಾಷೆ ಆಯ್ಕೆ ಮಾಡಿಕೊಂಡಿದ್ದ ಮುಸ್ಲಿಂ ವಿದ್ಯಾರ್ಥಿನಿ; ಎಸ್‌ಎಸ್‌ಎಲ್‌ಸಿಯಲ್ಲಿ 590 ಅಂಕ

2023-24ನೇ ಸಾಲಿನ ಎಸೆಸೆಲ್ಸಿಯ ಫಲಿತಾಂಶಗಳು ಪ್ರಕಟಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಫಾತಿಮತ್ ಸಮೀಹಾ ಸಂಸ್ಕೃತ ಭಾಷೆ ಆಯ್ಕೆ ಮಾಡಿಕೊಂಡು 590 ಅಂಕ ಗಳಿಸಿ, ಸಾಧನೆ ಮಾಡಿದ್ದಾರೆ. ಚಿಕ್ಕಮಗಳೂರು ಬಸರಿಕಟ್ಟೆಯ ಶ್ರಿ ಸದ್ಗುರು ವಿದ್ಯಾಮಂದಿರದ ವಿದ್ಯಾರ್ಥಿನಿಯಾಗಿರುವ...

ಈ ಹೊತ್ತಿನ ಪ್ರಮುಖ ಸುದ್ದಿ