ಹಾಸನ

ಹಾಸನಾಂಬ ಉತ್ಸವದ ವಿಐಪಿ ಸಂಸ್ಕೃತಿಗೆ ತೆರೆ, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣಬೈರೇಗೌಡ

ನಾಡಿನ ವಿಖ್ಯಾತ ಹಾಸನಾಂಬ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ತೆರೆ ಎಳೆದಿದ್ದು, ಜನಸ್ನೇಹಿ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಹಾಸನದಲ್ಲಿ ಸಂಸದ ಮತ್ತು ಶಾಸಕರೊಂದಿಗೆ ಸಭೆ ನಡೆಸಿದ...

ಹಾಸನ | ಶಾಲೆ, ಕಾಲೇಜುಗಳಿಗೆ ಹೋಗಿ ಬರುವುದಕ್ಕಾದರೂ ಊರಿಗೊಂದು ಬಸ್ ಕಲ್ಪಿಸಿ: ನೀಲಗಿರಿಕಾವಲು ನಿವಾಸಿಗಳ ಅಸಹಾಯಕ ನುಡಿಯಿದು!

ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕೆಂಬ ಪಾಲಕರ ಆಶಯ ಹಾಗೂ ಉನ್ನತ ಶಿಕ್ಷಣ ಪಡೆದು ಉತ್ತಮ ಸ್ಥಾನಕ್ಕೇರಬೇಕೆಂಬ ವಿದ್ಯಾರ್ಥಿಗಳ ಕನಸಿಗೆ ಸಾರಿಗೆ ವ್ಯವಸ್ಥೆ ತಣ್ಣೀರೆರಚುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾದರೂ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡದಿದ್ದರೆ ಮುಂಬರುವ ಚುನಾವಣೆಗಳಲ್ಲಿ...

ಹಾಸನ | ಅಡುಗೆ ಮಾಡಿಲ್ಲವೆಂದು ಸಿಟ್ಟಾಗಿ ತಾಯಿಯನ್ನೇ ಕೊಂದ ಮಗ

ಅಡುಗೆ ಮಾಡುವ ವಿಚಾರದಲ್ಲಿ ತಾಯಿ ಮತ್ತು ಮಗನ ನಡುವೆ ಆರಂಭವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದುರ್ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಆರೋಪಿ ಸಂತೋಷ್(19) ಎಂಬಾತನಿಂದ ತಾಯಿ...

ರಾಷ್ಟ್ರ ರಾಜಕಾರಣದಲ್ಲಿ ಹಾಸನ ಸಂಸದ ಶ್ರೇಯಸ್ ಪಟೇಲ್ ಅವರಿಗೆ ಸ್ಥಾನ

ಹಾಸನ ಲೋಕಸಭಾ ಕ್ಷೇತ್ರದ ಯುವ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಜವಾಬ್ದಾರಿಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಸಂಸತ್ತಿನ ಎರಡು ಮಹತ್ವದ ಸಮಿತಿಗಳಲ್ಲಿ ಮತ್ತು ಕಾಂಗ್ರೆಸ್ ಪಕ್ಷದ...

ಹಾಸನ | ಆಲೂರಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ: ದಂಪತಿ ಗಂಭೀರ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದ ನಿಗೂಢ ಸ್ಫೋಟ ಪ್ರಕರಣದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ...

ಹಾಸನ | ಸ್ಥಗಿತಗೊಂಡ ಎಸ್‌ ಎಲ್‌ ಭೈರಪ್ಪ ಅಧ್ಯಯನ ಕೇಂದ್ರ; ಕಾಮಗಾರಿ ಪೂರ್ಣಗೊಳಿಸಲು ಗ್ರಾಮಸ್ಥರ ಒತ್ತಾಯ

ಹಾಸನ ಜಿಲ್ಲೆಯ ಸಂತೆಶಿವರ ಗ್ರಾಮದಲ್ಲಿ ಸುಮಾರು ₹5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಬೇಕಾಗಿದ್ದ ಡಾ. ಎಸ್ ಎಲ್ ಭೈರಪ್ಪ ಕಲೆ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರದ ಕಟ್ಟಡ ಕಾಮಗಾರಿ ಕಳೆದ ಆರು ತಿಂಗಳಿನಿಂದ...

ಹಾಸನ | ಸಣ್ಣ ರೈತರಿಗೆ ಆರ್ಥಿಕ ಚೈತನ್ಯ ನೀಡುವುದೇ ನಮ್ಮ ಆದ್ಯತೆ: ರಾಂಪುರ ಶೇಖರಪ್ಪ

ಸಣ್ಣ ಹಾಗೂ ಮಧ್ಯಮ ವರ್ಗದ ರೈತರಿಗೆ ಆರ್ಥಿಕ ಚೈತನ್ಯ ತುಂಬಿ ಸಶಕ್ತರನ್ನಾಗಿ ಮಾಡುವುದೇ ನಮ್ಮ ಸಹಕಾರಿ ಕ್ಷೇತ್ರದ ಆದ್ಯ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿಯೇ ಕೆಲಸ ಮಾಡುತ್ತೇವೆ ಎಂದು ಹಾಸನದ ಡಿಸಿಸಿ ಬ್ಯಾಂಕ್ ಜಿಲ್ಲಾ...

ʼಅಡ್ಡಗೋಡೆ ಮೇಲೆ ದೀಪ ಇಟ್ಟರೆ ಏನೂ ಪ್ರಯೋಜನವಿಲ್ಲ’: ಕೃಷಿ ಇಲಾಖೆಗೆ ಕೃಷ್ಣ ಬೈರೇಗೌಡರ ಖಡಕ್ ಕ್ಲಾಸ್

ಕೇವಲ ಲೆಕ್ಕಾಚಾರಗಳು ಮತ್ತು ಅಂಕಿ-ಅಂಶಗಳ ವರದಿ ಮಂಡಿಸಿದ ಅಧಿಕಾರಿಯ ವಿರುದ್ಧ, 'ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ' ವರದಿ ಕೊಟ್ಟರೆ ಯಾವುದೇ ಪ್ರಯೋಜನವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುಡುಗಿದರು. ಹಾಸನದಲ್ಲಿ ನಡೆದ ಕೆಡಿಪಿ...

ಹಾಸನ | ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಂ ಶಿವಣ್ಣ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಂ ಶಿವಣ್ಣ (93) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಚಾಮರಾಜನಗರ ಜಿಲ್ಲೆಯ...

ಅರಕಲಗೂಡು ದಸರಾ ಮಹೋತ್ಸವ: ಬೂಕರ್ ಪ್ರಶಸ್ತಿ ವಿಜೇತ ಅನುವಾದಕಿ ದೀಪಾ ಬಸ್ತಿಗೆ ಆಹ್ವಾನ

ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರತಿವರ್ಷ ನಡೆಯುವ ಅದ್ಧೂರಿ ದಸರಾ ಮಹೋತ್ಸವ ಸೋಮವಾರದಿಂದ ಆರಂಭಗೊಂಡಿದ್ದು, ಶಾಸಕ ಎ.ಮಂಜು ಅವರು ವಿಜಯದಶಮಿ ದಿನದ ಅರಕಲಗೂಡು ದಸರಾ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಮೊದಲ...

ಹಾಸನ | ಎಡಗಾಲಿನ ರಾಡ್ ತೆಗೆಯಲು ಬಲಗಾಲಿಗೆ ಶಸ್ತ್ರಚಿಕಿತ್ಸೆ: ಹಿಮ್ಸ್ ವೈದ್ಯರ ಎಡವಟ್ಟಿಗೆ ಮಹಿಳೆ ಕಂಗಾಲು

ಎರಡೂವರೆ ವರ್ಷದ ಹಿಂದೆ ಅಪಘಾತವಾಗಿದ್ದ ಹಿನ್ನೆಲೆ ಎಡಗಾಲಿಗೆ ಅಳವಡಿಸಿದ್ದ ರಾಡ್ ತೆಗೆಯಲು ಹೋದ ವೈದ್ಯರೊಬ್ಬರು ಎಡವಟ್ಟು ಮಾಡಿದ್ದು, ಬಲಗಾಲನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿರುವ ಘಟನೆ ಹಾಸನದ ಹಿಮ್ಸ್‌ನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಬೂಚನಹಳ್ಳಿ...

ಹಾಸನ | ಎಂಸಿಇ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಪ್ರತಿಷ್ಠಿತ ಎಂಸಿಇ ಇಂಜಿನಿಯರಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ದರ್ಶನ್‌ (24) ಮೃತ ಯುವಕ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ತುರುವೇಕೆರೆ ಮೂಲದ...

ಈ ಹೊತ್ತಿನ ಪ್ರಮುಖ ಸುದ್ದಿ