ಸಕಲೇಶಪುರ

ಹಾಸನ | ರಸ್ತೆ ಅಪಘಾತ; ಯಸಳೂರು ಪೋಲಿಸ್ ಪೇದೆ ಪ್ರತಾಪ್ ನಿಧನ

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳಿಂದ ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಪೇದೆ ಸೋಮವಾರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ...

ಸಕಲೇಶಪುರದಲ್ಲಿ ಭಾರೀ ಮಳೆ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್‌ನಲ್ಲಿ ಭೂ ಕುಸಿತ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ಕೂಡ ನಿರಂತರ ಮಳೆ ಸುರಿಯುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ...

ಪೊಲೀಸ್‌ ಎನ್ನುವ ಸಮಾಜದ ಆಯುಧ ತುಕ್ಕು ಹಿಡಿಯದಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು: ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌

ಡ್ರಗ್ಸ್‌ ದಾಸರ ಕುರಿತು ಅಥವಾ ಡ್ರಗ್ಸ್‌ ಇರುವುದನ್ನು ಕಂಡವರು ತಮ್ಮ ಪಾಡಿಗೆ ತಾವು ಇರುವುದೇ ಅನಾಹುತಗಳಿಗೆ ಕಾರಣವಾಗಿದೆ. ನಮ್ಮ ಕರ್ತವ್ಯದ ಜತೆಗೆ ಸಮಾಜದ ಒಳಿತಿಗಾಗಿ ದುಡಿಯುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿದ್ದೇವೆ, ಅದರಿಂದ ಪೊಲೀಸ್‌ ಎನ್ನುವಂತಹ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ ಕೈ ಜೋಡಿಸಿರುವುದು ತುಂಬಾ ತೃಪ್ತಿದಾಯಕವಾಗಿದೆ. ಈ ನಶೆ ಎಂಬುದು ಅನಾದಿ ಕಾಲದಿಂದಲೂ ನಮ್ಮ ಜತೆಗಿರುವ ಸಂಗತಿ. ಇದನ್ನು ಹಿತ ಮಿತದಿಂದ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ ವ್ಯಸನಮುಕ್ತಕ್ಕೆ ಮುಂದಾಗಬೇಕು. ಮನೆಯಲ್ಲಿ ಶಿಕ್ಷಣವಂತ ಪೋಷಕರು ಇದ್ದಾಗ ಮಕ್ಕಳನ್ನು ಉತ್ತಮ ದಾರಿಯಲ್ಲಿ ನಡೆಸಲು ಅನುಕೂಲವಾಗುತ್ತದೆ. ಅಂತೆಯೇ ಸಮಾಜದಲ್ಲಿ ಉತ್ತಮ ವ್ಯಕ್ತಿಗಳ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು ತಡೆಯಬಹುದು. ಬಡಬಗ್ಗರ ಕುಟುಂಬಗಳು ಸೇರಿದಂತೆ ಯುವಜನರ ಭವಿಷ್ಯಕ್ಕೆ ಉತ್ತಮ ಸಮಾಜ ನಿರ್ಮಾಣವಾಗಲು ಮದ್ಯ ಸೇರಿದಂತೆ ಇತರೆ ವ್ಯಸನ ನಿಷೇಧಕ್ಕೆ ಸೂಕ್ತ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ. ಇದರ ಹಿಂದಿನ ಉದ್ದೇಶವೇನೆಂದರೆ ಮಕ್ಕಳನ್ನು ಡ್ರಗ್ಸ್‌ನಲ್ಲಿ ಮುಳುಗಿಸಿದರೆ, ಮುಂದಿನ ಉತ್ತಮ ಪ್ರಜೆಗಳು ಈ ದೇಶದಲ್ಲಿ ಇಲ್ಲದಂತಾಗುತ್ತದೆ. ಆ ನಂತರ ಭಾರತವನ್ನು...

ಭಾರೀ ಮಳೆ | ಸಕಲೇಶಪುರ, ಬೇಲೂರು, ಆಲೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಯ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಸೋಮವಾರ ಅಂದರೆ ಆಗಸ್ಟ್ 18ರಂದು ಹಾಸನ ಜಿಲ್ಲಾಧಿಕಾರಿ ಲತಾ...

ಸಕಲೇಶಪುರ | ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ, ಬದಲಿ ಮಾರ್ಗ ಬಳಕೆಗೆ ಸೂಚನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ(NH-75)ಯ ದೊಡ್ಡತಪ್ಪಲೆಯಲ್ಲಿ ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್‌ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಕಾರೊಂದರ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊಂಡಿರುವ ಘಟನೆ ನಡೆದಿದೆ,...

ಸಕಲೇಶಪುರ | ಭಾರೀ ಮಳೆಯಿಂದ ಮಂಜರಾಬಾದ್ ಕೋಟೆಯ ಒಂದು ಭಾಗ ಕುಸಿತ: ಪುರಾತತ್ವ ಇಲಾಖೆ ನಿರ್ಲಕ್ಷ್ಯ

ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿರುವ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯ ಒಂದು ಭಾಗ ಕುಸಿದಿದೆ. ಕೋಟೆಯ ಒಳಭಾಗದ ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದು...

ಸಕಲೇಶಪುರ | ಬಡ ಕುಟುಂಬವನ್ನು ಬೀದಿಗೆ ತಂದ ಅರಣ್ಯ ಇಲಾಖೆ: ಗಂಗಾಧರ್ ಬಹುಜನ್ ಖಂಡನೆ

ಡಾ. ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆಯಡಿಯಲ್ಲಿ ನಿರ್ಮಿಸಿಕೊಂಡಿದ್ದ ದಲಿತ ಶೋಭರಾಜ್ ಮನೆಯನ್ನು ಅರಣ್ಯ ಇಲಾಖೆಯು ಏಕಾಏಕಿ ಜೆಸಿಬಿಯಿಂದ ದ್ವಂಸಗೊಳಿಸಿ ನೆಲಸಮ ಮಾಡಿ ದೌರ್ಜನ್ಯ ಎಸಗಿ ಬಡದಲಿತ ಕುಟುಂಬವನ್ನು ಬೀದಿಗೆ ತಂದಿರುವುದು ಖಂಡನೀಯ...

ಹಾಸನ | ಮರಗಳ ಸಹಿತ ಗುಡ್ಡ ಕುಸಿತ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಹಾಸನದ ಸಕಲೇಶಪುರ ತಾಲೂಕಿನ ಕಡಗರವಳ್ಳಿ, ಆಲುವಳಿ ಗ್ರಾಮದಲ್ಲಿ ಭಾರಿ ಮಳೆಗೆ ಮರಗಳ ಸಮೇತ ಗುಡ್ಡ ಕುಸಿತ ಉಂಟಾಗಿದೆ. ಗುಡ್ಡ ಪ್ರದೇಶದಲ್ಲಿರುವ ಮನೆಗಳು ಸಹ ಕುಸಿಯುವ ಹಂತದಲ್ಲಿವೆ. ಅಲ್ಲಿಯ ನಿವಾಸಿಗಳು ಜೀವಭಯದಲ್ಲಿ ಜೀವನ...

ಈ ಹೊತ್ತಿನ ಪ್ರಮುಖ ಸುದ್ದಿ