ಜಿಲ್ಲೆಗಳು

ದಾವಣಗೆರೆ | ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿ ತಡೆಗೆ ಹರಿಹರ ರಾಜಕಾಲುವೆ ರಕ್ಷಣಾ ಸಮಿತಿ ಆಗ್ರಹ

ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡಿರುವ ಕಾಂಕ್ರೀಟ್ ಚರಂಡಿ ಕಾಮಗಾರಿಯು ಅವೈಜ್ಞಾನಿಕ ಹಾಗೂ ಒತ್ತುವರಿದಾರರಿಗೆ ಅನುಕೂಲವಾಗಲಿದೆ ಎನ್ನುವ ಆರೋಪ ಹೊತ್ತ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲು ಆಗ್ರಹಿಸಿ ದಾವಣಗೆರೆ...

ಬೆಳಗಾವಿ | ಮದುವೆ ಆಗದೇ ಮನನೊಂದು ಜೈಲ್ ವಾರ್ಡರ್ ಆತ್ಮಹತ್ಯೆ

ಮಲಪ್ರಭಾ ನದಿಗೆ ಹಾರಿ ಜೈಲ್ ವಾರ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ನಿವಾಸಿ ವಿನೋದ ಭೀಮಪ್ಪ ತಿಗಡಿ (31) ಮೃತ ವ್ಯಕ್ತಿ. ಅವರು ಬೆಳಗಾವಿಯ...

ಬೆಳಗಾವಿ | ಬೊಲೆರೋ-ಕಾರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಂಭೀರ ಗಾಯ

ಬೊಲೆರೋ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗಾನೂರ-ಗರಜೂರ ರಸ್ತೆಯಲ್ಲಿ ನಡೆದಿದೆ. ಗಾಯಾಳುಗಳನ್ನು ಚಿವುಟಗುಂಡಿ ಗ್ರಾಮದ ರಮೇಶ ದುಂಡಪ್ಪ ಹರಿಜನ, ಫಕೀರಪ್ಪ...

ಬೆಳಗಾವಿ | ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ದುರ್ಮರಣ

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೂದಿಗೊಪ್ಪ ಗ್ರಾಮದ ಕರೆಯಮ್ಮ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಬಸವರಾಜ ಫಕ್ಕೀರಪ್ಪ ಮಾದರ (41)...

ಚಿಕ್ಕಮಗಳೂರು | ಮಾ.11ರಂದು ಕರ್ನಾಟಕ ಸ್ವಾಭಿಮಾನ ನಡಿಗೆ

ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಸಾರ್ವಜನಿಕ ಸಭೆ | ಸಮಾನ ಮನಸ್ಕ ಸಂಘಟನೆಗಳಿಂದ ಚಿಕ್ಕಮಗಳೂರು ನಗರದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳಿಂದ ರಾಜ್ಯದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹಾಗೂ ಲಿಂಗತ್ವ ಮತ್ತು...

ದಾವಣಗೆರೆ | ಅಮೇರಿಕಾ–ಇಸ್ರೇಲ್ ಯುದ್ಧ ನೀತಿಗೆ ಖಂಡನೆ: ಎಸ್ ಕೆ ಎಂನಿಂದ ಯುದ್ಧ ವಿರೋಧಿ ದಿನಾಚರಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್ ಕೆ ಎಂ-SKM) ಕರೆಯ ಮೇರೆಗೆ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಹಾಗೂ ಕಾರ್ಯಕರ್ತರು ಮಾರ್ಚ್‌ 10ರಂದು ಯುದ್ಧ ವಿರೋಧಿ ದಿನಾಚರಣೆ ಆಚರಿಸಿ...

ಯಾದಗಿರಿ | ಕೆಕೆಆರ್‌ಡಿಬಿ ಹಣಯಿಂದ ಸರ್ಕಾರಿ ಶಾಲೆ ಮುಚ್ಚುವ ಯತ್ನ; ಶಿಲ್ಪ ಬಿ ಕೆ ಆರೋಪ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮೀಸಲಿರುವ ಕೆಕೆಆರ್‌ಡಿಬಿ ಹಣಯನ್ನು ಸರ್ಕಾರಿ ಶಾಲೆಗಳನ್ನು ಮುಚ್ಚುವ ಕಾರ್ಯಕ್ಕೆ ಬಳಸಲಾಗುತ್ತಿದೆ ಎಂದು ಎಐಡಿಎಸ್‌ಓ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,...

ಕಲಬುರಗಿ | ವಿದ್ಯಾರ್ಥಿಗಳಿಗೆ ದಂತ ಆರೋಗ್ಯ ತಪಾಸಣೆ: ಸ್ವಚ್ಛತೆ ಕುರಿತು ಜಾಗೃತಿ ಶಿಬಿರ

ದಂತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ ಹಾಗೂ ಬಾಯಿ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಮಂಗಳವಾರ ನಗರದ ತಾರಫೈಲ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ...

ಹಾವೇರಿ | ಒಳ ಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿ ಖಂಡಿಸಿ, ಮಾರ್ಚ್ 12ಕ್ಕೆ ಬೆಂಗಳೂರಲ್ಲಿ ಪ್ರತಿಭಟನೆ

"ಒಳ ಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿ ಮಾಡುವ ಕಾಂಗ್ರೆಸ್ ಸರ್ಕಾರದ ಮಹಾದ್ರೋಹವನ್ನು ಖಂಡಿಸಿ ಮಾರ್ಚ 12 ಗುರುವಾರ ಬೆಳಿಗ್ಗೆ-11 ಘಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು...

ಯಾದಗಿರಿ | ಕರ್ತವ್ಯದಲ್ಲೇ ಪೌರ ಕಾರ್ಮಿಕ ಹೃದಯಾಘಾತದಿಂದ ಮೃತ

ನಗರಸಭೆಯ ಪೌರ ಕಾರ್ಮಿಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎದೆನೋವಿನಿಂದ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಡಾ. ಬಿ ಆರ್ ಅಂಬೇಡ್ಕರ್ ನಗರದ ನಿವಾಸಿ ಪಿಲ್ಲಪ್ಪ ಬೊಮ್ಮನ್ (ಪೌರ ಕಾರ್ಮಿಕ) ಎಂದು ತಿಳಿದು...

ಬೆಳಗಾವಿ | ಮಾರಕಾಸ್ತ್ರ ತೋರಿಸಿ ದರೋಡೆ: 4 ಗಂಟೆಯಲ್ಲಿ ಆರೋಪಿಯ ಬಂಧನ

ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿದ್ದ ಆರೋಪಿಯನ್ನು ಕೇವಲ ನಾಲ್ಕು ಗಂಟೆಗಳಲ್ಲೇ ಬಂಧಿಸುವ ಮೂಲಕ ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಹೊರವಲಯದಲ್ಲಿ...

ತುಮಕೂರು | ಅಂಗನವಾಡಿ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ; ಆಕ್ಷೇಪಣೆಗೆ ಕಾಲಾವಕಾಶ : ಡಿಸಿ ಶುಭ ಕಲ್ಯಾಣ್‌

ತುಮಕೂರು ಜಿಲ್ಲೆಯಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಆಯ್ಕೆ ಪಟ್ಟಿಯನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಆಯ್ಕೆ ಸಮಿತಿ ಅಂತಿಮಗೊಳಿಸಿದೆ. ತುಮಕೂರು ಜಿಲ್ಲೆಯಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ...

ಈ ಹೊತ್ತಿನ ಪ್ರಮುಖ ಸುದ್ದಿ