ರಾಯಚೂರು

ರಾಯಚೂರು | ಆಹಾರ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಬೇಕು: ಪ್ರಗತಿಪರ ಕನ್ನಡಿಗರ ಸಮಿತಿ

ರಾಯಚೂರು ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿ ಪ್ರಕಾಶ ಪುಣ್ಯಶೆಟ್ಟಿ, ಬಾಬು ಹಾಗೂ ಅಮೃತಾ ಎಂಬುವವರು ಕರ್ತವ್ಯಲೋಪ ಎಸಗುತ್ತಿದ್ದು, ಕೂಡಲೇ ಈ ಮೂವರನ್ನು ಅಮಾನತು ಮಾಡಬೇಕು ಎಂದು ಪ್ರಗತಿಪರ ಕನ್ನಡಿಗರ ಸಮಿತಿಯ ಜಿಲ್ಲಾಧ್ಯಕ್ಷ ಎಸ್...

ರಾಯಚೂರು | ಬಿಹಾರದ ಬೋಧ್ ಗಯಾವನ್ನು ಸಂಪೂರ್ಣ ಬೌದ್ಧರಿಗೆ ನೀಡಬೇಕು: ಬೌದ್ಧ ಮಹಾಸಭಾ ಸಂಘ

ಸಂವಿಧಾನದ ದಿನಾಚರಣೆ ಪ್ರಯುಕ್ತ ಬೌದ್ಧರ ಧಾರ್ಮಿಕ ಹಕ್ಕುಗಳಿಗಾಗಿ ಬಿಹಾರದ ಬೋಧ್ ಗಯಾದ ಮಹಾಭೋದಿ, ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ರಾಯಚೂರು ಬೌದ್ಧ ಮಹಾಸಭಾ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. "ಬಿಹಾರದ...

ರಾಯಚೂರು ನಗರದ 31ನೇ ವಾರ್ಡ್‌ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಗೆಲುವು

ರಾಯಚೂರು ನಗರಸಭೆಯ 31ರಲ್ಲಿ ವಾರ್ಡ್‌ ಉಪಚುನಾವಣೆ ನಡೆದಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಅಂಜನಮ್ಮ ಶ್ಯಾಮ್ ಸುಂದರ್ ಅವರು ಗೆಲುವು ಸಾಧಿಸಿದ್ದಾರೆ. ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಮತ ಎಣಿಕೆ ಮುಕ್ತಾಯದ ನಂತರ ಚುನಾವಣಾಧಿಕಾರಿಗಳಾದ...

ರಾಯಚೂರು | ಕರಾಳ ಕಾರ್ಮಿಕ ಕಾಯ್ದೆ ರದ್ದತಿಗೆ ಸಂಯುಕ್ತ ಕಾರ್ಮಿಕ ಸಂಘಟನೆಗಳು ಒತ್ತಾಯ

ರೈತರು ಹಾಗೂ ಕಾರ್ಮಿಕರ ವಿರೋಧಿಯಾಗಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಪ್ರತಿಭಟನಾ ದಿನವನ್ನಾಗಿ ಆಚರಿಸುವ ಮೂಲಕ...

ರಾಯಚೂರು | ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯ

ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ, ಎಐಯುಟಿಯುಸಿ ನೇತೃತ್ವದಲ್ಲಿ ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು. "ಹಿಂದುಳಿದ ವರ್ಗಗಳ ಕಲ್ಯಾಣ...

ರಾಯಚೂರು | ಕೆಇಬಿ ಇಲಾಖೆ ಅಧಿಕಾರಿಯಿಂದ ಮಹಿಳೆಗೆ ಕಿರುಕುಳ; ಕಾನೂನು ಹೋರಾಟದ ಎಚ್ಚರಿಕೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆಇಬಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬ ಒಂದೂವರೆ ವರ್ಷದ ಹಿಂದೆ ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದು, ಈಗ ಮಹಿಳೆಯಿಂದ ದೂರವಾಗಿದ್ದಾನೆ. ಅಧಿಕಾರಿ ತಮ್ಮ ತಪ್ಪನ್ನು ಅರಿತು ಮಹಿಳೆಯೊಂದಿಗೆ ಜೀವನ...

ರಾಯಚೂರು | ಪರಿಶಿಷ್ಟ ಜಾತಿ ಸಮುದಾಯದ ಪ್ರತಿನಿಧಿಗಳ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣ ಜಾರಿಗಾಗಿ ಪರಿಶಿಷ್ಟ ಜಾತಿಯ ತಲಾ ಒಂದು ಸಮುದಾಯದ ಪ್ರತಿನಿಧಿಯನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಹಾಗೂ ಸದಸ್ಯರು ಸೋಮವಾರ ರಾಯಚೂರು ಡಾ.ಬಿ.ಆರ್...

ರಾಯಚೂರು | ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಕಾಂಗ್ರೆಸ್ ಪಕ್ಷದಿಂದ ಸತತವಾಗಿ 4 ಬಾರಿ ಶಾಸಕರಾಗಿ ಆಯ್ಕೆಯಾದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಸಂಘದ ಪ್ರಧಾನ ಕಾರ್ಯದರ್ಶಿ ಆದೋನಿ ಆದಿರಾಜ ಆಗ್ರಹಿಸಿದರು. ಸೋಮವಾರ...

ರಾಯಚೂರು | ಕವಿತಾಳ ಪಿ.ಎಸ್.ಐ ಅಮಾನತುಗೊಳಿಸದಿದ್ದರೆ ಸತ್ಯಾಗ್ರಹ : ಗಂಗಪ್ಪ ಎಚ್ಚರಿಕೆ

ಸಿರವಾರ ತಾಲ್ಲೂಕು ಕವಿತಾಳ ಪಿ.ಎಸ್.ಐ ವೆಂಕಟೇಶ ಅವರು ಅಸ್ಪೃಶ್ಯರ ದೂರುಗಳನ್ನು ದಾಖಲು ಮಾಡಿಕೊಳ್ಳಲು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆ ಜಿಲ್ಲಾಧ್ಯಕ್ಷ...

ರಾಯಚೂರು | ಮಹಾರಾಷ್ಟ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲು ಇವಿಎಂ ದುರ್ಬಳಕೆ: ವಸಂತ ಕುಮಾರ್

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ನೈಜ್ಯ ಮತ್ತು ಜನರ ಅಭಿಪ್ರಾಯವಲ್ಲ. ಇದು ಕೇವಲ ಬಿಜೆಪಿ, ಆರ್.ಎಸ್. ಎಸ್ ಮತಯಂತ್ರಗಳ ದುರ್ಬಳಕೆಯ ಫಲಿತಾಂಶ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ವಸಂತ ಕುಮಾರ್ ಗಂಭೀರ ಆರೋಪ ಮಾಡಿದರು. ರಾಯಚೂರು...

ರಾಯಚೂರು | ನ.27ರಿಂದ 3 ದಿನಗಳ ರಾಷ್ಟ್ರ ಮಟ್ಟದ ವಿದ್ಯಾರ್ಥಿ ಸಮ್ಮೇಳನ

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ವತಿಯಿಂದ ನವೆಂಬರ್ 27ರಿಂದ ದೆಹಲಿಯಲ್ಲಿ ಮೂರು ದಿನಗಳ ಕಾಲ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಐಡಿಎಸ್ಒ ರಾಜ್ಯ ಘಟಕದ ಕಾರ್ಯದರ್ಶಿ ಶಿಲ್ಪಾ ಬಿ...

ರಾಯಚೂರು | ವಕೀಲ ಹತ್ಯೆ; ವಕೀಲರ ಸಂಘ ಖಂಡನೆ

ತಮಿಳುನಾಡಿನ ವಕೀಲ ಹತ್ಯೆಯನ್ನು ಖಂಡಿಸಿ, ಮೃತನ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿ ರಾಯಚೂರು ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಜಿಲ್ಲಾಡಳಿತದ ಮೂಲಕ ತಮಿಳುನಾಡು ಸರ್ಕಾರಕ್ಕೆ ಮನವಿ ಸಲ್ಲಿಸಿದರು. "ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು...

ಈ ಹೊತ್ತಿನ ಪ್ರಮುಖ ಸುದ್ದಿ