ಭಟ್ಕಳ

ಭಟ್ಕಳ | ರಾಜ್ಯ ಸರ್ಕಾರದಿಂದ ‘ಭಟ್ಕಳ ನಗರಸಭೆ’ ಅಂತಿಮ ಅಧಿಸೂಚನೆ: 22.67 ಚ.ಕಿ.ಮೀ ಪ್ರದೇಶ ನಗರಸಭೆ ವ್ಯಾಪ್ತಿಗೆ

ಭಟ್ಕಳ: ರಾಜ್ಯ ಸರ್ಕಾರವು ಭಟ್ಕಳವನ್ನು ಅಧಿಕೃತವಾಗಿ ಪುರುಸಭೆಯಿಂದ ‘ನಗರಸಭೆ’ ದರ್ಜೆಗೆ ಮೇಲ್ದರ್ಜೆಗೇರಿಸಿ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ. ಹೊಸ ನಗರಸಭೆ ವ್ಯಾಪ್ತಿಯಲ್ಲಿ ಭಟ್ಕಳ ಪುರಸಭೆ, ಜಾಲಿ ಪಟ್ಟಣ ಪಂಚಾಯಿತಿ ಹಾಗೂ ಹೆಬಳೆ ಗ್ರಾಮ ಪಂಚಾಯಿತಿ...

ಗೋಕರ್ಣ | ಕುಡ್ಲೆ ಬೀಚ್‌ನಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿದ ಕಜಕಿಸ್ತಾನ ಮೂಲದ ಮಹಿಳೆ ರಕ್ಷಣೆ

ಗೋಕರ್ಣ: ಪ್ರಸಿದ್ಧ ಕುಡ್ಲೆ ಕಡಲ ತೀರದಲ್ಲಿ ಈಜಲು ಇಳಿದಿದ್ದ ಕಜಕಿಸ್ತಾನ ಮೂಲದ ಮಹಿಳೆಯೊಬ್ಬರು ಬೃಹತ್ ಅಲೆಗಳಿಗೆ ಸಿಲುಕಿ ಅಪಾಯದ ಸ್ಥಿತಿಯಲ್ಲಿ ಇದ್ದ ಸಮಯದಲ್ಲಿ, ಜೀವ ರಕ್ಷಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಹಿಳೆಯನ್ನು ದಡಕ್ಕೆ ಎಳೆದುಕೊಂಡು...

ಭಟ್ಕಳ | ಗೃಹೋಪಯೋಗಿ ವಸ್ತುಗಳನ್ನು ಕಡಿಮೆ ದರದಲ್ಲಿ ನೀಡುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿದ ಆರೋಪಿಗಳು ಪೊಲೀಸರ ವಶಕ್ಕೆ

ಭಟ್ಕಳ ಪಟ್ಟಣದಲ್ಲಿ “ಗ್ಲೋಬಲ್ ಎಂಟರ್‌ಪ್ರೈಸಸ್” ಹೆಸರಿನಲ್ಲಿ ಅಂಗಡಿ ತೆರೆದು, ಗೃಹೋಪಯೋಗಿ ವಸ್ತುಗಳ ಮೇಲೆ ಶೇಕಡಾ 40ರಷ್ಟು ರಿಯಾಯಿತಿ ನೀಡುವುದಾಗಿ ನಂಬಿಸಿ ನೂರಾರು ಜನರಿಂದ ಲಕ್ಷಾಂತರ ರೂಪಾಯಿ ಮುಂಗಡ ಹಣ ಪಡೆದು ಪರಾರಿಯಾಗಿದ್ದ ವಂಚಕರನ್ನು...

ಭಟ್ಕಳ | ಮುಂಬೈ–ಮಂಗಳೂರು ಬಸ್‌ನಲ್ಲಿ ನಗದು, ಚಿನ್ನ ಪತ್ತೆ; ಇಬ್ಬರ ಬಂಧನ, ಹವಾಲಾ ಶಂಕೆ

ಭಟ್ಕಳ: ಮುಂಬೈಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನ ಸಾಗಾಟವಾಗುತ್ತಿರುವುದು ಪತ್ತೆಯಾಗಿದ್ದು, ಭಟ್ಕಳ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಂಗಳವಾರ ಸಂಜೆ ಭಟ್ಕಳ ನಗರ ಪೊಲೀಸ್ ಠಾಣೆಯ ವಲಯ...

ಮುರುಡೇಶ್ವರ: ಚಿನ್ನದ ಸರ ಸುಲಿಗೆ ಮಾಡಿದ ನಾಲ್ವರು ಮಂಗಳಮುಖಿಯರ ಬಂಧನ

ಮುರುಡೇಶ್ವರ: ಸ್ಕೂಟಿಗೆ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಮರಳುತ್ತಿದ್ದ ಕಾಲೇಜು ಸಿಬ್ಬಂದಿಯೊಬ್ಬರನ್ನು ಅಡ್ಡಗಟ್ಟಿದ ನಾಲ್ವರು ಮಂಗಳಮುಖಿಯರ ಗುಂಪೊಂದು, ಅವರ ಮೈಮೇಲೆ ಕೈಹಾಕಿ ಅಸಭ್ಯವಾಗಿ ವರ್ತಿಸಿ, ಕುತ್ತಿಗೆಯಲ್ಲಿದ್ದ ಅಂದಾಜು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ...

ಭಟ್ಕಳ | ಮುರುಡೇಶ್ವರದಲ್ಲಿ ಯುವಕನ ಪ್ರಾಮಾಣಿಕತೆ; ಕಳೆದುಹೋದ ಬ್ಯಾಗ್‌ ಹಸ್ತಾಂತರ

ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಮೌಲ್ಯಯುತ ವಸ್ತುಗಳನ್ನು ಕಳೆದುಕೊಂಡಿದ್ದ ಹೈದರಾಬಾದ್ ಪ್ರವಾಸಿಗರಿಗೆ ಸ್ಥಳೀಯ ಯುವಕ ವಿಷ್ಣು ನಾಯ್ಕ ಅವರು ಪ್ರವಾಸಿಗರ ಕಳೆದುಹೋಗಿದ್ದ ಬ್ಯಾಗನ್ನು ಹಿಂದುರಿಗಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ದೇಗುಲದ ಬಳಿ ಸಿಕ್ಕಿದ್ದ ₹48,190...

ಭಟ್ಕಳ | ಮುರುಡೇಶ್ವರ ನೇತ್ರಾಣಿ ಬಳಿ ಪರ್ಷಿಯನ್ ಬೋಟ್ ಮುಳುಗಡೆ: 25 ಮಂದಿ ಮೀನುಗಾರರು ಅಪಾಯದಿಂದ ಪಾರು

ಮುರುಡೇಶ್ವರ ಸಮೀಪದ ನೇತ್ರಾಣಿ ದ್ವೀಪದ ಬಳಿ 'ಮಹಾ ಮುರುಡೇಶ್ವರ' ಎಂಬ ಹೆಸರಿನ ಪರ್ಷಿಯನ್ ಬೋಟ್‌ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ 25 ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದುರಂತದಲ್ಲಿ ಅಂದಾಜು 80 ಲಕ್ಷಕ್ಕೂ ಹೆಚ್ಚು...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು ಬೆದರಿಸಿ ₹20 ಲಕ್ಷ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಮೂವರು ಯುವಕರನ್ನು ಭಟ್ಕಳ ನಗರ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆಗಸ್ಟ್...

ಭಟ್ಕಳ | ಕರಾವಳಿ ಮೀನುಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿದ ಸಚಿವ ಮಂಕಾಳ ವೈದ್ಯ

ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ ಕರಾವಳಿ ಮೀನುಗಾರರ ಕಲಾಸಿಗಳ ಕ್ಷೇಮಾಭಿವೃದ್ಧಿ ಸಂಘವನ್ನು ಉದ್ಘಾಟಿಸಿ ಸಂಘಕ್ಕೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರು ಚಾಲನೆ ನೀಡಿದರು. "ಮೀನುಗಾರರ ಬದುಕು ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ....

ಉತ್ತರ ಕನ್ನಡ | ಜಾಲಿ, ಹೆಬಳೆ, ಭಟ್ಕಳ ವಿಲೀನಗೊಳಿಸಿ ನಗರಸಭೆ ರೂಪಿಸಲು ಸಚಿವ ಸಂಪುಟದಲ್ಲಿ ತೀರ್ಮಾನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಆಡಳಿತ ವ್ಯವಸ್ಥೆಗೆ ಹೊಸ ರೂಪ ನೀಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ, ಭಟ್ಕಳ ಪುರಸಭೆಯೊಂದಿಗೆ ಜಾಲಿ ಪಟ್ಟಣ ಪಂಚಾಯಿತಿ...

ಭಟ್ಕಳ | ದೋಣಿ ದುರಂತ: ನಾಲ್ವರು ಮೀನುಗಾರರು ನಾಪತ್ತೆ, ಇಬ್ಬರ ರಕ್ಷಣೆ; ಮುಂದುವರಿದ ಪತ್ತೆ ಕಾರ್ಯ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 'ಮಹಾಸತಿ' ಗಿಲ್‌ನೆಟ್ ದೋಣಿಯೊಂದು ಸಮುದ್ರದಲ್ಲಿ ಭಾರೀ ಅಲೆಗಳಿಗೆ ಸಿಲುಕಿ ಮುಳುಗಿದ ಪರಿಣಾಮ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಘಟನೆ ಬುಧವಾರ...

ಉತ್ತರ ಕನ್ನಡ | ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ; ಬೈಕ್ ಸಮೇತ ಕಳ್ಳನ ಬಂಧಿಸಿದ ಪೊಲೀಸರು

ಭಟ್ಕಳ ತಾಲೂಕಿನ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ರವಿವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ ಗ್ರಾಮೀಣ ಪೊಲೀಸರು 24 ಗಂಟೆ ಕಳೆಯುವುದರೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಕಳ್ಳತನಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ