Uncategorized

ಎಷ್ಟೇ ಸುರಕ್ಷತೆ ಇರಲಿ, ನಮ್ಮ ಒಬ್ಬ ಶೂಟರ್ ಸಾಕು: ಉದ್ಯಮಿ ಮುಖೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ

ರಿಲಾಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ಮುಖೇಶ್ ಅಂಬಾನಿಗೆ ಮೂರನೇ ಬಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದ್ದು, 400 ಕೋಟಿ ರೂಪಾಯಿ ನೀಡುವಂತೆ ಇ-ಮೇಲ್ ಸಂದೇಶ ಬಂದಿರುವುದಾಗಿ ಮುಂಬೈ ಪೊಲೀಸರು ಮಂಗಳವಾರ...

ಕೇರಳ | ಸ್ಫೋಟ ನಡೆಸಿದ ಬಳಿಕ ವಿಡಿಯೋ ಹಂಚಿಕೊಂಡಿದ್ದ ಡೊಮಿನಿಕ್ ಮಾರ್ಟಿನ್; ವೈರಲ್

ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಕ್ರಿಶ್ಚಿಯನ್ನರ ಉಪಪಂಗಡವೆನ್ನಲಾಗುವ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ 'ಬಾಂಬ್ ಇಟ್ಟಿದ್ದು ನಾನೇ' ಎಂದು ಸ್ಫೋಟದ ಹೊಣೆ ಹೊತ್ತು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. ಈತನನ್ನು...

ಕೇರಳ | ಕಳಮಶ್ಶೇರಿ ಸ್ಫೋಟ ಪ್ರಕರಣ: ‘ಬಾಂಬ್ ಇಟ್ಟಿದ್ದು ನಾನೇ’ ಎಂದು ಪೊಲೀಸರಿಗೆ ಶರಣಾದ ವ್ಯಕ್ತಿ

ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಕ್ರಿಶ್ಚಿಯನ್ನರ ಉಪಪಂಗಡವೆನ್ನಲಾಗುವ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ 'ಬಾಂಬ್ ಇಟ್ಟಿದ್ದು ನಾನೇ' ಎಂದು ಸ್ಫೋಟದ ಹೊಣೆ ಹೊತ್ತು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿರುವುದಾಗಿ...

ಕೇರಳ | ಪ್ರಾರ್ಥನಾ ಸಭೆಯಲ್ಲಿ ಸ್ಫೋಟ; ಸುಧಾರಿತ ಸ್ಫೋಟಕ ಸಾಧನ ಬಳಸಿ ಕೃತ್ಯ: ಕೇರಳ ಡಿಜಿಪಿ

ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಕೇರಳದ ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್, 'ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಕೃತ್ಯ...

ಕೇರಳ | ಪ್ರಾರ್ಥನಾ ಸಭೆಯಲ್ಲಿ ಭೀಕರ ಸ್ಫೋಟ: ಓರ್ವ ಮಹಿಳೆ ಸಾವು; ಹಲವರಿಗೆ ಗಾಯ

ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಅನುಮಾನಾಸ್ಪದ ಸ್ಫೋಟವೊಂದು ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟ ಘಟನೆ...

ಕಾಸರಗೋಡು | ಬಸ್‌ ನಿಲ್ಲಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರ ಪ್ರತಿಭಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ಬಸ್‌ ನಿಲ್ಲಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಒಟ್ಟಾಗಿ ಪ್ರತಿಭಟಿಸಿದ್ದ ವಿಡಿಯೋವೊಂದನ್ನು ತಪ್ಪಾಗಿ ಹಂಚಿಕೊಂಡು, ಬಲಪಂಥೀಯರು ಸೋಷಿಯಲ್ ಮೀಡಿಯಾದಲ್ಲಿ ಕೋಮು ಬಣ್ಣ ಹಚ್ಚಿ, ವೈರಲ್ ಮಾಡುತ್ತಿದ್ದಾರೆ. "ಕೇರಳದಲ್ಲಿ ಮುಸ್ಲಿಂ ಮಹಿಳಾ ಪ್ರಯಾಣಿಕರು ಬುರ್ಖಾ ಇಲ್ಲದೆ ಇತರ ಸಮುದಾಯದ...

ಕೇರಳ | ಪತ್ರಕರ್ತೆಯೊಂದಿಗೆ ಅನುಚಿತ ವರ್ತನೆ; ಕ್ಷಮೆ ಯಾಚಿಸಿದ ನಟ, ಬಿಜೆಪಿ ಮುಖಂಡ ಸುರೇಶ್‌ ಗೋಪಿ

ಕೇರಳದ ಬಿಜೆಪಿ ಮುಖಂಡ ಹಾಗೂ ನಟ ಸುರೇಶ್‌ ಗೋಪಿ, ಕೋಯಿಕ್ಕೋಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಪತ್ರಕರ್ತೆಯೊಬ್ಬರ ಭುಜಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಘಟನೆ ಶುಕ್ರವಾರ ನಡೆದಿದೆ. ಸುರೇಶ್ ಗೋಪಿ ಮಹಿಳಾ ಪತ್ರಕರ್ತೆಯ ಹೆಗಲನ್ನು ಎರಡೆರಡು...

ಬೆಂಗಳೂರು | ಸರಣಿ ಅಪಘಾತ; ತಾಯಿ ಮಗ ಸಾವು, ಮೂವರಿಗೆ ಗಾಯ

ಬೆಂಗಳೂರಿನ ಹೊರವರ್ತುಲ ರಸ್ತೆಯ ಹೊರಮಾವು ಕೆಳಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ತಾಯಿ–ಮಗ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆಟೋ ಚಾಲಕ, ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. "ಅಶ್ವಿನಿ (29) ಹಾಗೂ ಅವರ ಮಗ...

ಗುಜರಾತ್‌ | ಗರ್ಬಾ ನೃತ್ಯ: 24 ಗಂಟೆಗಳಲ್ಲಿ 10 ಮಂದಿ ಹೃದಯಾಘಾತದಿಂದ ಸಾವು; ಹದಿಹರೆಯದವರೇ ಹೆಚ್ಚು!

ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ನವರಾತ್ರಿ ಸಂಭ್ರಮಾಚರಣೆ ಸಂದರ್ಭದಲ್ಲಿ ಪ್ರದರ್ಶಿಸಲಾಗುವ ಗರ್ಬಾ ನೃತ್ಯದ ವೇಳೆ ಕನಿಷ್ಠ 10 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತಪಟ್ಟವರ ಪೈಕಿ ತರುಣರಿಂದ ಹಿಡಿದು ಮಧ್ಯ ವಯಸ್ಸಿನವರೇ ಇದರಲ್ಲಿ ಹೆಚ್ಚಿನವರು...

ತುಮಕೂರು | ಇಸ್ರೇಲ್ – ಹಮಾಸ್ ಸಂಘರ್ಷ ಕೊನೆಗೊಳಿಸಲು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಇಸ್ರೇಲ್ ಹುಟ್ಟುಹಾಕಿರುವ ಹಮಾಸ್ ಹಾಗೂ ಇಸ್ರೇಲ್ ದೇಶಗಳ ನಡುವಿನ ದಾಳಿ ಹಾಗೂ ಪ್ರತಿದಾಳಿಗಳ ವಿರುದ್ಧ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ಸಿಪಿಎಂ ಪಕ್ಷ ಜಂಟಿಯಾಗಿ ತುಮಕೂರಿನ ಟೌನ್‌ಹಾಲ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು. ಮೃಗೀಯ...

ಭಾರತದಿಂದ 41 ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಂಡ ಕೆನಡಾ

ಖಾಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆಯ ವಿವಾದದ ನಂತರ ಕೆನಡಾ ಭಾರತದಿಂದ 41 ರಾಜತಾಂತ್ರಿಕರನ್ನು ಹಿಂಪಡೆದಿದೆ ಎಂದು ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಗುರುವಾರ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಲಾನಿ ಜೋಲಿ,...

ಐವರನ್ನು ಥಳಿಸಿದ್ದ ನಾಲ್ವರು ಪೊಲೀಸರನ್ನು ಜೈಲಿಗಟ್ಟಿದ ಹೈಕೋರ್ಟ್‌

ಗುಜರಾತ್‌ನ ಹಳ್ಳಿಯೊಂದರಲ್ಲಿಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಐವರನ್ನು ಥಳಿಸಿದ್ದ ನಾಲ್ವರು ಪೊಲೀಸರಿಗೆ ಗುಜರಾತ್ ಹೈಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. 14 ದಿನಗಳ ಕಾಲ ಸರಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಖೇಡಾ...

ಈ ಹೊತ್ತಿನ ಪ್ರಮುಖ ಸುದ್ದಿ