ವಿದೇಶ

ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ

ರಾಜ್ಯ ನಿಧಿ ದುರುಪಯೋಗದ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿದೆ ಎಂದು ವರದಿಯಾಗಿದೆ. 2023ರಲ್ಲಿ ಶ್ರೀಲಂಕಾದ ಅಧ್ಯಕ್ಷರಾಗಿದ್ದಾಗ ರನಿಲ್ ಅವರು ತಮ್ಮ...

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ ಉಲ್ಲಂಘನೆಗಳಿವೆಯೇ ಎಂದು ಪತ್ತೆಹಚ್ಚಲು ಪರಿಶೀಲಿಸಲಾಗುತ್ತಿದೆ ಎಂದು ಟ್ರಂಪ್ ಆಡಳಿತವು ಗುರುವಾರ ಪ್ರಕಟಿಸಿದೆ. ಅಮೆರಿಕಾದಲ್ಲಿ ವಾಸಿಸಲು ಅನುಮತಿ ಪಡೆದ ವಿದೇಶಿಗರ ಮೇಲೆ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದ ಎಂಟನೇ ಪ್ರಕರಣದಲ್ಲಿ ಪಾಕಿಸ್ತಾನ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. 2023ರಲ್ಲಿ ದೇಶಾದ್ಯಂತ ನಡೆದ ಪ್ರತಿಭಟನೆಗಳು...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ' ಎಂದು ಜನಪ್ರಿಯರಾಗಿದ್ದ ಫ್ರಾಂಕ್ ಕ್ಯಾಪ್ರಿಯೊ (88) ಅವರು ಬುಧವಾರ (ಆಗಸ್ಟ್ 20) ಮೇದೋಜೀರಕ ಗ್ರಂಥಿಯ ಕ್ಯಾನ್ಸರ್‌ನಿಂದ ದೀರ್ಘಕಾಲದ ಹೋರಾಟದ ಬಳಿಕ...

ಅಫ್ಘಾನಿಸ್ತಾನ | ಭೀಕರ ಅಪಘಾತ: ಹೊತ್ತಿ ಉರಿದ ಬಸ್, 17 ಮಕ್ಕಳು ಸೇರಿ 71 ಮಂದಿ ದಾರುಣ ಸಾವು

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದ್ದು, 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ...

ಗಾಝಾದಲ್ಲಿ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡ ಹಮಾಸ್: ವರದಿ

ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ ಬಗ್ಗೆ ಚರ್ಚಿಸಲು ಒಪ್ಪಿಕೊಂಡಿರುವುದಾಗಿ ಹಮಾಸ್ ಹೇಳಿದೆ. ಗಾಝಾ, ಇಸ್ರೇಲ್ ಯುದ್ಧದಲ್ಲಿ ಈಗಾಗಲೇ 62 ಸಾವಿರಕ್ಕೂ ಅಧಿಕ ಪ್ಯಾಲೇಸ್ತಿನಿಯನ್ನರು ಬಲಿಯಾಗಿದ್ದಾರೆ. ಗಾಝಾದಲ್ಲಿ...

ನಿಮಿಷಾ ಪ್ರಿಯಾ ಜೀವಕ್ಕೆ ತಕ್ಷಣ ಬೆದರಿಕೆ ಇಲ್ಲ; ಸುಪ್ರೀಂ ಕೋರ್ಟ್‌ಗೆ ತಿಳಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್‌ನ್ಯಾಶನಲ್ ಆ್ಯಕ್ಷನ್ ಕೌನ್ಸಿಲ್’

ಕೊಲೆ ಆರೋಪದಲ್ಲಿ ಯೆಮನ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾರ ಪ್ರಾಣಕ್ಕೆ ತಕ್ಷಣದ ಬೆದರಿಕೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಗುರುವಾರ ತಿಳಿಸಲಾಯಿತು. ‘ಸೇವ್ ನಿಮಿಷಾ ಪ್ರಿಯಾ ಇಂಟರ್‌ ನ್ಯಾಶನಲ್ ಆ್ಯಕ್ಷನ್...

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ ಘೋಷಿಸಿದೆ. ಅಂತೆಯೇ, ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಮೋದಿ ಅವರು ಶಿಫಾರಸು ಮಾಡಿದರೆ, ಟ್ರಂಪ್ ತೃಪ್ತರಾಗಬಹುದೇ? ಭಾರತದ ಮೇಲೆ ಟ್ರಂಪ್...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಖಂಡಿಸಿದ್ದಾರೆ. ಇಸ್ರೇಲ್‌ ಕೃತ್ಯವನ್ನು 'ನರಮೇಧ'/'ಜನಾಂಗೀಯ ಹತ್ಯೆ' ಎಂದು ಟೀಕಿಸಿದ್ದಾರೆ. ಪ್ರಿಯಾಂಕಾ ಅವರ ಆಕ್ರೋಶವು ಇಸ್ರೇಲ್...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ ಮೋದಿ ಜೊತೆ ಫೋನ್‌ ಕರೆಯಲ್ಲಿ ಮಾತನಾಡಿದ್ದಾರೆ. ಅವರೂ ಕೂಡ, ರಷ್ಯಾ ಜೊತೆಗಿನ ಸಂಬಂಧವನ್ನು ಕಡಿತಗೊಳಿಸುವಂತೆ ಒತ್ತಡ ಹಾಕಿದ್ದಾರೆ. ರಷ್ಯಾದಿಂದ ತೈಲ ಮತ್ತು...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು ಸಾಕ್ಷಿಯಾಗಿರುವೆ. ಆತನ ತೀರ್ಪಿನಿಂದ ಸಂತೃಪ್ತನಾಗಿದ್ದೇನೆ. ಆತನನ್ನು ಭೇಟಿಯಾಗುವ ಖಾತರಿಯಿದೆ. ಮತ್ತು ದೇವರ ಬಳಿಯಿರುವುದು ಉತ್ತಮವಾದದ್ದು ಮತ್ತು ಶಾಶ್ವತವಾದದ್ದು ಎಂದು ಖಚಿತವಾಗಿದೆ....

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇಬ್ಬರು ವರದಿಗಾರರು ಮತ್ತು ಮೂವರು ಕ್ಯಾಮೆರಾಮೆನ್ ಸಾವನ್ನಪ್ಪಿದ್ದಾರೆ ಎಂದು ಅಲ್‌ಜಝೀರಾ ಹೇಳಿದೆ. ವರದಿಗಾರ ಅನಾಸ್ ಅಲ್-ಶರೀಫ್ ಅವರನ್ನು ಹಮಾಸ್ ಜೊತೆ...

ಈ ಹೊತ್ತಿನ ಪ್ರಮುಖ ಸುದ್ದಿ