ಅಲ್ಲಮನ ಅನನ್ಯ ಪದಪ್ರಯೋಗಗಳು | ಪೂರ್ವಾಚಾರಿ

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ಪೂರ್ವಾಚಾರಿ  
ಆಯತದಲ್ಲಿ ಪೂರ್ವಾಚಾರಿಯ ಕಂಡೆ
ಸ್ವಾಯತದಲ್ಲಿ ಪೂರ್ವಾಚಾರಿಯ ಕಂಡೆ
ಸನ್ನಿಹಿತದಲ್ಲಿ ಪೂರ್ವಾಚಾರಿಯ ಕಂಡೆ
ಗುಹೇಶ್ವರಲಿಂಗದಲ್ಲಿ ಪೂರ್ವಾಚಾರಿ ಸಂಗನಬಸವಣ್ಣನ,
ಶ್ರೀಪಾದಕ್ಕೆ ನಮೋ ನಮೋ ಎಂಬೆನು.

ವಚನಾರ್ಥ:
ಬಸವಣ್ಣನನ್ನು ಬಣ್ಣಿಸಿ ಅಲ್ಲಮ ಬರೆದ ವಚನವಿದು. ಆಯತ, ಸ್ವಾಯತ, ಸನ್ನಿಹಿತದಲ್ಲಿ ಪೂರ್ವಾಚಾರಿ ಸಂಗನ ಬಸವಣ್ಣನ ಕಂಡೆ ಎಂದು ಅಲ್ಲಮ ಆಡುವ ಮಾತುಗಳಿವು. ಪೂರ್ವದಲ್ಲಿ ಅಂದರೆ ಮೊದಲಿಗನಾಗಿ, ಆಚಾರ ಅಂದರೆ ಕೆಲಸವನ್ನು ಮಾಡುವವನು ಪೂರ್ವಾಚಾರಿ. ಇಂಗ್ಲಿಷಿನಲ್ಲಿ ಪಯನೀರ್ ಎಂದಂತೆ. ಆಯತ ಅಂದರೆ ಲಿಂಗ ದೀಕ್ಷೆ ಪಡೆಯುವುದು, ಸ್ವಾಯತ ಅಂದರೆ ಲಿಂಗವನ್ನು ಧ್ಯಾನಿಸುವುದು, ಸನ್ನಿಹಿತ ಅಂದರೆ ದೀಕ್ಷೆ ಪಡೆದ ಲಿಂಗವನ್ನು ತನ್ನಲ್ಲಿ ಅಂತರ್ಗತಗೊಳಿಸಿಕೊಳ್ಳುವುದು ಈ ಎಲ್ಲದರಲ್ಲಿ ಬಸವಣ್ಣನೇ ಮೊದಲಿಗ. ಬಸವಣ್ಣನೇ ಪೂರ್ವಾಚಾರಿ. ಬಸವಣ್ಣ ಪೂಜನೀಯ. ಪೂರ್ವಾಚಾರಿ ಎಂಬ ವಿಶಿಷ್ಟ ಪದ ಅಲ್ಲಮನ ಅನನ್ಯವಾದ ಪದಾನ್ವೇಷಣೆ.

ಪದಪ್ರಯೋಗಾರ್ಥ:
ಪೂರ್ವಾಚಾರಿ ಅಂದರೆ ಪ್ರವರ್ತಕ. ಯಾವುದೇ ಕೆಲಸ ಮಾಡುವಲ್ಲಿ ಎಲ್ಲರಿಗಿಂತ ಮುಂಚೂಣಿಯಲ್ಲಿ ಇರುವವ. ಶರಣ ಪರಂಪರೆಯನ್ನು ಹುಟ್ಟು ಹಾಕುವಲ್ಲಿ ಬಸವಣ್ಣನೇ ಪೂರ್ವಾಚಾರಿ. ಹಾಗಾಗಿ ಬಸವಣ್ಣ ಆಚಾರ್ಯ ಪುರುಷ. ಇದನ್ನು ಅಲ್ಲಮನಂಥ ಮೇರು ವ್ಯಕ್ತಿತ್ವದ ಅಧ್ಯಾತ್ಮ ಸಾಧಕನೇ ನಮೋ ನಮೋ ಎಂದು ಬಸವಣ್ಣನನ್ನು ಉದ್ದೇಶಿಸಿ ಹೇಳಿರುವುದು. ಬಸವಣ್ಣ ಕಾಯಕ ಸಿದ್ಧಾಂತದ ಪ್ರತಿಪಾದನೆಯಲ್ಲಿ ಪೂರ್ವಾಚಾರಿ. ಜಾತಿ, ಧರ್ಮ, ಹೆಣ್ಣು, ಗಂಡು, ಬಡತನ, ಸಿರಿತನ ಭೇದವಿಲ್ಲದೆ ಎಲ್ಲರೂ ಸಮಾನರು ಎಂದು ಹೇಳಿ ಅನುಭವ ಮಂಟಪ ಕಟ್ಟಿದ ಪೂರ್ವಾಚಾರಿ. ಧಾರ್ಮಿಕ, ಸಾಮಾಜಿಕ, ರಾಜಕೀಯ, ಆರ್ಥಿಕ, ಸಾಂಸ್ಕೃತಿಕ ರಂಗಗಳಲ್ಲಿ ಬಸವಣ್ಣ ಮಾಡಿದ ಪೂರ್ವಾಚಾರಿ ಕೆಲಸಗಳನ್ನು ಪುರಸ್ಕರಿಸಿ ಕರ್ನಾಟಕ ಸರ್ಕಾರ “ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಅಧಿಕೃತ ಘೋಷಣೆ ಮಾಡಿದೆ. ಬಸವಣ್ಣನ ಪೂರ್ವಾಚಾರಿತನವನ್ನು ಕುವೆಂಪು ಅನುಮೋದಿಸಿದ್ದು ಹೀಗೆ: “ಕಾರ್ತಿಕದ ಕತ್ತಲಲ್ಲಿ ಆಕಾಶ ದೀಪವಾಗಿ ನೀ ಬಂದೆ ಬಟ್ಟೆಗೆಟ್ಟವರಿಗೊಂದು ದೊಂದು ದಿಕ್ಕಾಗಿ ಎಂಟು ಶತಮಾನಗಳ ಹಿಂದೆ ಅಗ್ನಿ ಖಡ್ಗವನಾಂತು ಓ ಅಧ್ಯಾತ್ಮ ಕ್ರಾಂತಿ ವೀರ ದೇವ ದಯೆಯೊಂದು ಹೇ ಧೀರಾವತಾರ ಶ್ರೀ ಗುರು ಬಸವೇಶ್ವರ”.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಸಾಯದ ಸಂಚು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ತಾನಿದ್ದಲ್ಲಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಿದ್ರೆಯೆಂಬ ಕಾಳೋರಗ 

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಕೀಲು ಮಡಗಿದಾತ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾದುದು ಮಾದುದಲ್ಲ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಷ್ಟಸಂತಾನ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...