ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ಆಶಾಪಾಶವಿರಹಿತರು
ಮುಸುರೆಯ ಮಡಕೆಯ ನೊಣ ಮುತ್ತಿಕೊಂಡಿಪ್ಪಂತೆ,
ಕಸವುಳ್ಳ ಹೊಲದಲ್ಲಿ ಪಶುಗಳು ನೆರೆದಿಪ್ಪಂತೆ,
ಅನ್ನ ಉದಕ ಹೊನ್ನು ವಸ್ತ್ರವುಳ್ಳ
ದೊರೆಯ ಬಾಗಿಲಲ್ಲಿ ಬಹುಭಾಷೆಯ ಹಿರಿಯರುಗಳು ನೆರೆದುಕೊಂಡಿಪ್ಪರು.
ಗುಹೇಶ್ವರಾ, ನಿಮ್ಮ ಶರಣರು
ಆಶಾಪಾಶ ವಿರಹಿತರು

ವಚನಾರ್ಥ:
ಬಹುಭಾಷೆಯ ಹಿರಿಯರು ಅಂದರೆ ಸಕಲ ವಿದ್ಯಾ ಪಾರಂಗತರು. ಸಂಸ್ಕೃತವನ್ನೊಳಗೊಂಡಂತೆ ವಿವಿಧ ಭಾಷಾಶಾಸ್ತ್ರಗಳಲ್ಲಿ ಪರಿಣಿತರು. ಗುರು ಪರಂಪರೆಯಲ್ಲಿ ಹಿರಿಯ ಸ್ಥಾನದಲ್ಲಿರುವವರು. ಆದರೆ ಅವರು ಆಸೆಯ ಪಾಶದಲ್ಲಿ ಬಂಧಿಯಾದವರು. ಆ ಹಿರಿಯರು ಆಸೆಬುರುಕರು. ಪದವಿ ಪ್ರತಿಷ್ಠೆ ಪುರಸ್ಕಾರಗಳಿಗಾಗಿ ಆಳರಸರ ಅರಮನೆಯ ಬಾಗಿಲು ಕಾಯುತ್ತಿರುತ್ತಾರೆ. ಅದು ಹೇಗೆಂದರೆ
ಮುಸುರೆಯ ಮಡಕೆಗೆ ನೊಣ ಮುತ್ತಿಕೊಂಡಿರುವಂತೆ. ಕೃಷಿ ಮಾಡದೇ ಹಾಳು ಬಿದ್ದ ಹೊಲದಲ್ಲಿ ಬೆಳೆದ ಕಸದ ಹುಲ್ಲನ್ನು ತಿನ್ನಲು ದನಗಳು ನೆರೆದಿರುವಂತೆ. ಆದರೆ ಶರಣ ಸಜ್ಜನರು ಆ ಹಿರಿಯರಂತಲ್ಲ. ಆಸೆಗಳನ್ನು ತೊರೆದವರು. ಯಾವುದೇ ಪದವಿ ಪ್ರತಿಷ್ಠೆಗಳಿಗೆ ಆಶಿಸಿ ಆಳರಸರ ಅಂಗಲಾಚುವವರಲ್ಲ. ಶರಣರು ನಿತ್ಯ ತೃಪ್ತರು.

ಪದಪ್ರಯೋಗಾರ್ಥ:
ಆಸೆ ಎಂಬ ಪಾಶದಿಂದ ವಿರಹಿತನಾದವನು ಅಂದರೆ ಆಸೆಗಳನ್ನು ತೊರೆದವನು ಎಂದರ್ಥ.
ಶರಣರು ಆಶಾಪಾಶ ವಿರಹಿತರು ಎಂಬುದು ಅಲ್ಲಮನ ಖಡಾಖಂಡಿತವಾದ ಹೇಳಿಕೆ.
ಆಶೆಗಳ ಕೆಣಕದಿರು, ಪಾಶಗಳ ಬಿಗಿಯದಿರು
ಕ್ಲೇಶದ ಪರೀಕ್ಷೆಗಳಿಗೆನ್ನ ಕರೆಯದಿರು ಎನ್ನುತೀಶನನು ಬೇಡುತಿರು – ಮಂಕುತಿಮ್ಮ ಎಂಬ ಕಗ್ಗನುಡಿಯಿದೆ. ಇದೇ ಶರಣ ಪ್ರಾರ್ಥನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನ್ನ ಉದಕ ಹೊನ್ನು ವಸ್ತ್ರ ಅಧಿಕಾರವುಳ್ಳ ದೊರೆಯ ಬಾಗಿಲಲ್ಲಿ ಪದವಿ ಪುರಸ್ಕಾರಗಳಿಗಾಗಿ ಭಾಷಾ ಪಂಡಿತರು ಕವಿಗಳು ಸಾಹಿತಿಗಳು ಬಾಗಿಲು ಕಾಯ್ದುಕೊಂಡಿರುತ್ತಾರೆ ಎಂದು ಅಲ್ಲಮ ಹೇಳಿದ್ದು ಈ ಕಾಲಕ್ಕೂ ಅತ್ಯಂತ ಪ್ರಸ್ತುತವಾದದ್ದು. ವಿವಿಧ ಸಾಹಿತ್ಯ ಸಂಸ್ಕೃತಿ ಅಕಾಡೆಮಿಗಳ ಅಧ್ಯಕ್ಷತೆಗಾಗಿ, ಎಂಎಲ್‌ಸಿ ಪದವಿಗಾಗಿ, ರಾಜ್ಯೋತ್ಸವ ಪ್ರಶಸ್ತಿಗಾಗಿ ಮುಖ್ಯಮಂತ್ರಿಯ ಮನೆಯ ಮುಂದೆ ವಿಧಾನಸೌಧದ ಹೆಬ್ಬಾಗಿಲ ಕೆಳಗೆ ನಮ್ಮ ಬಹುಭಾಷಾ ಪಂಡಿತರು, ಸಾಹಿತಿಗಳು, ಕವಿಗಳು ನೆರೆದುಕೊಂಡಿಪ್ಪುದನ್ನು ಒಮ್ಮೆ ನೆನಪಿಸಿಕೊಳ್ಳಿ. ಬಹುಭಾಷೆಯ ಹಿರಿಯರು ಆಶಾಪಾಶಬಂಧಿತರು. ಶರಣರು ಆಶಾಪಾಶವಿರಹಿತರು.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಾರಿದ್ರ್ಯವಿದ್ದಲ್ಲಿ ನಿದ್ರೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...