ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ದಳದುಳಿ
ಕಾಡಿ ಬೇಡಿ ಉಂಬವರೆಲ್ಲರು
ಬ್ರಹ್ಮನ ಸಂಪ್ರದಾಯ.
ಕುಟ್ಟಿ ಕುಟ್ಟಿ ಉಂಬವರೆಲ್ಲರು
ವಿಷ್ಣುವಿನ ಸಂಪ್ರದಾಯ.
ದಳದುಳಿಯಲಿ ಉಂಬವರೆಲ್ಲರು
ಯಮನ ಸಂಪ್ರದಾಯ.
ಇವಾವವನೂ ಹೊದ್ದದೆ
ಭಕ್ತಿಭಿಕ್ಷವನು ಉಂಬವರೆಲ್ಲ
ನಿಮ್ಮ ಸಂಪ್ರದಾಯ
ಕಾಣಾ ಗುಹೇಶ್ವರಾ.

ಪದಾರ್ಥ:
ಉಂಬವ = ಉಣ್ಣುವವ
ದಳದುಳಿ = ಕೊಳ್ಳೆಹೊಡಿ

ವಚನಾರ್ಥ:
ಸಂಪ್ರದಾಯ ಎಂಬ ಪದವನ್ನು ವಿಡಂಬನಾತ್ಮಕವಾಗಿ ಬಿಂಬಿಸಿರುವ ಈ ವಚನದಲ್ಲಿ ಮೂರು ವಿಭಿನ್ನ ರೀತಿಯ ಮನೋಧರ್ಮಗಳನ್ನು ವಿಶ್ಲೇಶಿಸಿ ಕೊನೆಯಲ್ಲಿ ಶರಣ ಸಂಪ್ರದಾಯವನ್ನು ವ್ಯಾಖ್ಯಾನಿಸಲಾಗಿದೆ. ಈ ಜಗತ್ತಿನಲ್ಲಿ ಬ್ರಹ್ಮನಿಂದ ಸೃಷ್ಟಿಯಾಗಿ ಸಹಜ ಜೀವನ ನಡೆಸುವವರೆಲ್ಲ ತಮ್ಮ ಅಸ್ತಿತ್ವಕ್ಕಾಗಿ ತಮ್ಮ ಉಳಿವಿಗಾಗಿ ಇನ್ನೊಬ್ಬರಲ್ಲಿ ಕಾಡಿ ಬೇಡಿ ಉಣ್ಣುವವರೇ. ಕಾಡಿ ಬೇಡುವ ಪ್ರಕ್ರಿಯೆ ನ್ಯಾಯಬದ್ಧವೂ ಆಗಿರಬಹುದು ಅಥವಾ ಅಕ್ರಮವೂ ಆಗಿರಬಹುದು. ವಿಷ್ಣುವಿನ ಸಂಪ್ರದಾಯವೆಂದರೆ ತಮ್ಮ ಪಾವಿತ್ರತೆಯನ್ನು ತಮ್ಮ ಶ್ರೇಷ್ಠತೆಯನ್ನು ಮುಂದಿಟ್ಟುಕೊಂಡು ಅಧಿಕಾರಯುತವಾಗಿ ಕುಟ್ಟಿ ಕುಟ್ಟಿ ಕೇಳಿ ಪಡೆದು ಉಣ್ಣುವುದು. ಇನ್ನು ಯಮನ ಸಂಪ್ರದಾಯ. ದಳದುಳಿಯಲಿ ಅಂದರೆ ದೌರ್ಜನ್ಯ ಮಾಡಿ ಕೊಳ್ಳೆ ಹೊಡೆದು ಇನ್ನೊಬ್ಬರಿಂದ ಕಸಿದುಕೊಂಡು ಉಣ್ಣುವುದು. ಇವೆಲ್ಲದರಿಂದ ಹೊರತಾಗಿ ಭಕ್ತಿ ಭಾವದಿಂದ ಸತ್ಯ ಮಾರ್ಗದಿಂದ ಸಂಪಾದಿಸಿ ಉಣ್ಣುವುದು ಶರಣ ಸಂಪ್ರದಾಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದ ಪ್ರಯೋಗಾರ್ಥ:
ದಳದುಳಿ ಅಂದರೆ ಕೊಳ್ಳೆಹೊಡಿ ಎಂಬ ಅರ್ಥ ಬರುತ್ತದೆ. ಈ ವಚನದ ಸಂದರ್ಭದಲ್ಲಿ ಅಲ್ಲಮನು ಕೊಳ್ಳೆಹೊಡಿ, ಲೂಟಿ ಮಾಡು, ಸೂರೆ ಮಾಡು ಎಂಬ ಯಾವುದೇ ಪರಿಚಿತ ಶಬ್ದವನ್ನು ಬಳಸದೆ ದಳದುಳಿ ಎಂಬ ವಿರಳವಾದ ಪದ ಬಳಸಿರುವುದು ಅಲ್ಲಮನಿಗಿದ್ದ ಕನ್ನಡ ಭಾಷಾ ಪ್ರೌಢಿಮೆಗೆ ನಿದರ್ಶನವಾಗಿದೆ. ದಳದುಳಿ ಇತ್ತೀಚಿನ ಕನ್ನಡ ಬರವಣಿಗೆಯಲ್ಲಿ ಅಷ್ಟಾಗಿ ಬಳಕೆ ಆಗದಿರುವ ಪದ. ಈ ವಚನದಲ್ಲಿ ಅಲ್ಲಮ ಬಳಸಿರುವ ಬೇರೆ ಎಲ್ಲಾ ಪದಗಳು ಸುಲಭದಲ್ಲಿ ಅರ್ಥವಾಗುವಂತಹ ಪದಗಳೇ. ಆದರೆ ದಳದುಳಿ ಎಂಬ ಪದ ಮಾತ್ರ ಕ್ಲಿಷ್ಟವಾದದ್ದು ಮತ್ತು ಅನನ್ಯವಾದದ್ದು.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ತಾನಿದ್ದಲ್ಲಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಿದ್ರೆಯೆಂಬ ಕಾಳೋರಗ 

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಕೀಲು ಮಡಗಿದಾತ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾದುದು ಮಾದುದಲ್ಲ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...