ಅಲ್ಲಮನ ಅನನ್ಯ ಪದಪ್ರಯೋಗಗಳು | ಲಿಂಗದ ಸೊಮ್ಮು

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ಲಿಂಗದ ಸೊಮ್ಮು
ಮೇರುಗಿರಿಗಳೆಲ್ಲವೂ ಪ್ರಮಥರೊಡವೆ.
ರಜತಗಿರಿಗಳೆಲ್ಲವೂ ಪುರಾತರೊಡವೆ.
ಚತುರ್ದಶ ಭುವನವೆಲ್ಲವೂ ಲಿಂಗದೊಡವೆ.
ಪೃಥ್ವಿ ಎಂಬುದು ಕರ್ತಾರನ ಕಮ್ಮಟ
ಅಚ್ಚಿನ ಮೊಳೆ ಬಾಣಸದ ಮನೆ.
ತನುಮನಧನಂಗಳೆಲ್ಲವು
ನಮ್ಮ ಗುಹೇಶ್ವರ ಲಿಂಗದ ಸೊಮ್ಮು.
ನೀನೇನ ಕೊಟ್ಟು ಭಕ್ತನಾದೆ ಹೇಳಾ ಬಸವಣ್ಣಾ?

ಪದಾರ್ಥ:
ಪ್ರಮಥರು  =  ಶಿವ ಕಿಂಕರರು
ಪುರಾತರು  =  ಪೂರ್ವಜರು
ಕಮ್ಮಟ  =  ಕಾರ್ಯಾಗಾರ
ಬಾಣಸ  = ಅಡುಗೆ

ವಚನಾರ್ಥ:
ಈಶಾವಾಸ್ಯಮಿದಂ ಸರ್ವಂ ಯತ್ಕಿಂಚ ಜಗತ್ಯಾಂ ಜಗತ್ ಎಂದು ಈಶೋಪನಿಷತ್ತಿನ ಪ್ರಥಮ ಶ್ಲೋಕ ಹೇಳುತ್ತದೆ. ಅಂದರೆ ಯಾವುದು ಇದೆಲ್ಲ ಇದೆಯೊ ಎಲ್ಲವೂ ಈಶ್ವರನ ಆವಾಸ ಎಂದು ಭಾವಿಸಿ ಈ ಜಗತ್ತು ಎಲ್ಲರದ್ದು ಎಂದರಿಯಬೇಕು. ಇಲ್ಲಿರುವ ಗಿರಿ ಪರ್ವತ ಶ್ರೇಣಿ ಸಾಲುಗಳು ಪ್ರಮಥರಿಗೆ ಅಂದರೆ ಶಿವ ಕಿಂಕರರಿಗೆ ಸೇರಿದವು. ಹಿಮಾಲಯದಂತ ಬಿಳಿ ಬಣ್ಣದ ಮಂಜಿನ ಪರ್ವತಗಳು ನಮ್ಮ ಪೂರ್ವಜರು ನಮಗೆ ಕೊಟ್ಟು ಹೋದವುಗಳು. ಭೂಮಿ, ಸ್ವರ್ಗ, ಪಾತಾಳ, ವಿತಳಗಳೆಂಬ ನಾಲ್ಕು ಲೋಕಗಳು ಆ ಸೃಷ್ಟಿಕರ್ತನು ಧರಿಸಿಕೊಂಡಿರುವ ಆಭರಣ. ಈ ಭೂಮಿ ಎಂಬುದು ಸೃಷ್ಟಿಕರ್ತನು ದಿನನಿತ್ಯ ತನ್ನ ಸೃಷ್ಟಿ-ಸ್ಥಿತಿ-ಲಯಗಳನ್ನು ನಿರ್ವಹಣೆ ಮಾಡಲು ಇಟ್ಟುಕೊಂಡಿರುವ ಕಾರ್ಯಾಗಾರ. ಅಂತಹ ಕಾರ್ಯಾಗಾರದಲ್ಲಿ ಎಲ್ಲಾ ಬಗೆಯ ಸಲಕರಣೆಗಳು. ವರ್ಷದಾದ್ಯಂತ ಹಗಲಿರುಳು ಉರಿಯುವ ಒಲೆ, ನಿರಂತರ ಉಣಬಡಿಸುವ ಅಡುಗೆಯ ಮನೆ. ಅಂತಹ ಆಹಾರವನ್ನು ತಿಂದುಂಡು ಬೆಳೆದ ತನು, ಆ ತನುವಿನಲ್ಲಿ ಆಶ್ರಯಿಸಿದ ಮನ, ಅರ್ಜಿಸಿದ ಧನ ಧಾನ್ಯ ಇವೆಲ್ಲವೂ ಆ ಸೃಷ್ಟಿಕರ್ತನ ಸಿರಿ ಸಂಪತ್ತು. ನಮ್ಮದೇನೆನ್ನುವುದೇನಿಲ್ಲ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದ ಪ್ರಯೋಗಾರ್ಥ:
ಸೊಮ್ಮು ಎಂದರೆ ಸಿರಿ ಸಂಪತ್ತು, ಸೊತ್ತು ಎಂಬ ಅರ್ಥ ಬರುತ್ತದೆ. ಅಲ್ಲಮ ಮತ್ತು ಬಸವಣ್ಣನ ಸಂಭಾಷಣೆಯಲ್ಲಿ ಮೂಡಿಬಂದ ವಚನವಿದು. ಅನುಭವ ಮಂಟಪದ ಅಧ್ಯಕ್ಷತೆ ವಹಿಸಿಕೊಳ್ಳಿ ಎಂದು ಬಸವಣ್ಣ ಅಲ್ಲಮನನ್ನು ವಿನಂತಿಸಿದಾಗ ಬಸವಣ್ಣನ ವಿನಂತಿಯ ಹಿಂದಿರುವ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಲು ಅಲ್ಲಮಪ್ರಭು ಬಸವಣ್ಣನೊಂದಿಗೆ ವಾಗ್ವಾದಕ್ಕಿಳಿಯುವ ಸಂದರ್ಭ. ನಾನು ಅಧ್ಯಕ್ಷತೆ ವಹಿಸಿಕೊಂಡರೆ ನೀನೇನು ಕೊಡುವೆ ಬಸವಣ್ಣ ಎಂದು ಅಲ್ಲಮನ ಪ್ರಶ್ನೆ. “ತನುವ ಬೇಡಿದಡೀವೆ, ಮನವ ಬೇಡಿದಡೀವೆ, ಧನವ ಬೇಡಿದಡೀವೆ” ಎಂದ ಬಸವಣ್ಣನಿಗೆ ಉತ್ತರವಾಗಿ ಅಲ್ಲಮ ಹೇಳಿದ್ದು: ತನು ಮನ ಧನಂಗಳೆಲ್ಲವು ನಮ್ಮ ಗುಹೇಶ್ವರ ಲಿಂಗದ ಸೊಮ್ಮು. ಮೇರುಗಿರಿ, ರಜತಗಿರಿ, ಚತುರ್ದಶ ಭುವನ, ಈ ಭೂಮಿ ಎಲ್ಲವೂ ಗುಹೇಶ್ವರ ಲಿಂಗದ ಸೊಮ್ಮು ಆಗಿದ್ದರಿಂದ ನೀನೇನ ಕೊಟ್ಟು ಭಕ್ತನಾದೆ ಹೇಳಾ ಎಂದು ಕೇಳುತ್ತಾ ಅಲ್ಲಮನು ಬಸವಣ್ಣನನ್ನು ವಿನೀತಗೊಳಿಸಿದ್ದು, ನಂತರ ಅಲ್ಲಮಪ್ರಭು ಅಸ್ತು ಅಂದು ಅನುಭವ ಮಂಟಪದ ಶೂನ್ಯ ಸಿಂಹಾಸನಾಧೀಶ್ವರನಾದದ್ದು ಇತಿಹಾಸ. ವಚನ ಸಂಭಾಷಣೆಯಲ್ಲಿ ಲಿಂಗದ ಸೊಮ್ಮು ಎಂಬ ಪದಪ್ರಯೋಗವಾಗಿರುವುದು ಅನನ್ಯವಾಗಿದೆ.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಸಾಯದ ಸಂಚು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ತಾನಿದ್ದಲ್ಲಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಿದ್ರೆಯೆಂಬ ಕಾಳೋರಗ 

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಕೀಲು ಮಡಗಿದಾತ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾದುದು ಮಾದುದಲ್ಲ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಷ್ಟಸಂತಾನ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...