ಅಲ್ಲಮನ ಅನನ್ಯ ಪದಪ್ರಯೋಗಗಳು | ಲಿಂಗಸಾರಾಯ 

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ಲಿಂಗಸಾರಾಯ
ಹುಟ್ಟಿದ ನೆಲೆಯ ತೃಷ್ಣೆ ಬಿಡದವರಿಗೆ
ಲಿಂಗದ ಅನುಭಾವದ ಮಾತೇಕೊ?
ಮಾತಿನ ಮಾತಿನ ಮಹಂತರು ಹಿರಿಯರು!
ಗುಹೇಶ್ವರನೆಂಬ ಲಿಂಗಸಾರಾಯ
ಬಹುಮುಖಿಗಳಿಗೆ ತೋರದು, ತೋರದು!

ಪದಾರ್ಥ:
ತೃಷ್ಣೆ  =  ಲಾಲಸೆ
ಸಾರಾಯ  =  ಸತ್ವ
ಬಹುಮುಖಿ  =  ಚಂಚಲಚಿತ್ತ

ವಚನಾರ್ಥ:
ಈ ಜಗತ್ತಿನಲ್ಲಿ ಸಾಮಾನ್ಯವಾಗಿ ಎಲ್ಲರದೂ ಸಾಂಸಾರಿಕ ಮನಸ್ಸು. ಅವರು ಕಾಮ – ಮೋಹಗಳಿಂದ, ದೈಹಿಕ ಆಕರ್ಷಣೆಗಳಿಗೆ  ಒಳಗಾಗಿರುತ್ತಾರೆ. ಇದನ್ನೇ ಅಲ್ಲಮ ಹುಟ್ಟಿದ ನೆಲೆಯ ತೃಷ್ಣೆ ಎಂದು ಕರೆದದ್ದು. ಹುಟ್ಟಿದ ನೆಲೆಯ ತೃಷ್ಣೆ ಬಿಡದವರಿಗೆ  ಲಿಂಗಸಾಧನೆಯಾಗದು. ಲಿಂಗದ ಅನುಭಾವ ಸಾಧ್ಯವಾಗದು. ರಾಮಕೃಷ್ಣ ಪರಮಹಂಸರು ತಮ್ಮ ಸಂಸಾರಿ ಶಿಷ್ಯರನ್ನು ಉದ್ದೇಶಿಸಿ ಹೇಳುತ್ತಿದ್ದರು. “ನಿಮ್ಮ ಯೌವನದಲ್ಲಿ ವೈವಾಹಿಕ ಜೀವನ ನಡೆಸಿ ಮಕ್ಕಳಾದ ನಂತರ ದೈಹಿಕ ಆಕರ್ಷಣೆಗಳಿಂದ ದೂರಾಗಿ ದೈವ ಚಿಂತನೆಯೆಡೆಗೆ ಮುಖ ಮಾಡಿ” ಎಂದು. ಹಾಗೆ ಮಾಡದೇ ಬರೀ ಮಾತುಗಳಲ್ಲಿ ಅವರು ಯಥೇಚ್ಛವಾಗಿ ಲಿಂಗದ ಮಾತುಗಳನ್ನು ಆಡಬಹುದು. ಅಧ್ಯಾತ್ಮಾನುಭವದ ಸುಂದರ ವರ್ಣನೆಯನ್ನು ಮಾಡಬಹುದು. ಮಾತಿನಲ್ಲೇ ಮನೆ ಕಟ್ಟಬಹುದು. ಅವರು ಬರೀ ಮಾತಿನಲ್ಲಿ ಹಿರಿಯರು, ಮಾತಿನ ಮಹಂತರು, ಅಷ್ಟೆ. ಯಾರ ಮನಸ್ಸು ನಿಶ್ಚಲವೋ, ಚಂಚಲವಿಲ್ಲವೋ ಅವರಿಗೆ ಲಿಂಗಸಾರಾಯದ ದರ್ಶನವಾಗುತ್ತದೆ. ಬಹುಮುಖಿಗಳಿಗೆ ಅದು ಅಸಾಧ್ಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದ ಪ್ರಯೋಗಾರ್ಥ:
ಲಿಂಗಸಾರಾಯ ಎಂದರೆ ಲಿಂಗ ಸತ್ವ.

ಗುಹೇಶ್ವರನೆಂಬ ಲಿಂಗದ ಸತ್ವ ಎಲ್ಲರಿಗೂ ಸುಲಭವಾಗಿ ಗೋಚರಿಸುವುದಿಲ್ಲ ಎಂದು ಹೇಳುವಲ್ಲಿ ಬಳಸಿರುವ ಪದವೇ ಲಿಂಗಸಾರಾಯ. ಸಾರಾಯ ಎಂಬ ಪದಕ್ಕೆ ಸತ್ವ, ತತ್ವ, ಸಾರ, ತಿರುಳು, ಅಮೂಲ್ಯವಾದದ್ದು ಎಂಬ ವಿವಿಧ ಅರ್ಥಗಳಿವೆ. ಹಾಗೆಯೇ ಮದ್ಯ, ಸಾರಾಯಿ ಎಂಬ ಅರ್ಥವೂ ಇದೆ. ಅದು ಇಲ್ಲಿ ಪ್ರಸ್ತುತವಲ್ಲ. ಸಾರಾಯ ಎಂಬ ಪದ ಅಲ್ಲಮನಿಗೆ ಪ್ರಿಯವಾದದ್ದು ಅನಿಸುತ್ತದೆ. ಅಲ್ಲಮನ ಬೇರೆ ವಚನಗಳಲ್ಲೂ “ಸಾರಾಯ” ಧಾರಾಳವಾಗಿ ಪ್ರಯೋಗವಾಗಿದೆ. ಉದಾಹರಣೆಗೆ:

ಮಣ್ಣಿನ ಸಾರಾಯದಿಂದ ಮರನುತ್ಪತ್ಯ. ಮರದ ಸಾರಾಯದಿಂದ ಎಲೆಯುತ್ಪತ್ಯ. ಎಲೆಯ ಸಾರಾಯದಿಂದ ಹೂವ ಉತ್ಪತ್ಯ. ಹೂವ ಸಾರಾಯದಿಂದ ಕಾಯಿ ಉತ್ಪತ್ಯ. ಕಾಯ ಸಾರಾಯದಿಂದ ಹಣ್ಣು ಉತ್ಪತ್ಯ. ಹಣ್ಣಿನ ಸಾರಾಯದಿಂದ ರುಚಿ ಉತ್ಪತ್ಯ ಎಂಬ ಅಲ್ಲಮ ವಚನವಿದೆ. ಸತ್ವ ಎಂಬ ಅರ್ಥದಲ್ಲಿ ಪದ ಬಳಸಬೇಕಾದ ಸಂದರ್ಭದಲ್ಲಿ ಸತ್ವ ಎಂದು ಹೇಳದೆ ಸಾರಾಯ ಎಂದಿರುವುದು ಅನನ್ಯ ಪದ ಪ್ರಯೋಗ. ಲಿಂಗಸಾರಾಯ ಎಂಬ ಪದ ಜೋಡಣೆ ಅಂತಹ ಅನನ್ಯತೆಯನ್ನು ಇಮ್ಮಡಿಗೊಳಿಸಿದೆ.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಸಾಯದ ಸಂಚು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ತಾನಿದ್ದಲ್ಲಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಿದ್ರೆಯೆಂಬ ಕಾಳೋರಗ 

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಕೀಲು ಮಡಗಿದಾತ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾದುದು ಮಾದುದಲ್ಲ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಷ್ಟಸಂತಾನ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...