ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

Date:

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ ದಾಖಲೆಯ ಮಟ್ಟದಲ್ಲಿ ಇಳಿಕೆಯಾಗುತ್ತಿದೆ. ಈ ಪ್ರೈಸ್‌ ಡ್ರಾಪ್‌ ಟ್ರೆಂಡ್‌ ಇನ್ನೂ ಕೆಲ ದಿನಗಳವರೆಗೆ ಮುಂದುವರೆದು 1 ಗ್ರಾಂ ಚಿನ್ನ ₹8-10 ಸಾವಿರಕ್ಕೆ ಇಳಿಯುವ ನಿರೀಕ್ಷೆ ಇದೆ ಎನ್ನುತ್ತಿದ್ದಾರೆ ತಜ್ಞರು. ಮದುವೆ, ಶುಭ ಸಮಾರಂಭದ ಸೀಸನ್‌ ಆಗಿರುವುದರಿಂದ ಗ್ರಾಹಕರಿಗೆ ಬಂಪರ್‌ ಆಫರ್‌ ಆದರೂ ಹೂಡಿಕೆದಾರರು ಆತಂಕದಲ್ಲಿದ್ದಾರೆ.

ಕಳೆದ ಏಳು ದಿನಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ (10 ಗ್ರಾಂಗೆ) ಬರೋಬ್ಬರಿ 13,690ಗಳಷ್ಟು ಕುಸಿತ ಕಂಡಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಪಾತಾಳಕ್ಕೆ ಕುಸಿದಿದೆ. ಕೇವಲ ಒಂದು ವಾರದಲ್ಲಿ ಕೆಜಿಗೆ ಬರೋಬ್ಬರಿ 30,000ಗಳಷ್ಟು ಇಳಿದಿದೆ. ಜನವರಿಯಲ್ಲಿ ಕೆಜಿಗೆ 4 ಲಕ್ಷ ದಾಟಿದ್ದ ಬೆಳ್ಳಿ, ಇಂದು (ಮಾ.23) 2.5 ಲಕ್ಷದ ಆಸುಪಾಸಿಗೆ ಬಂದಿದೆ. ಹೈ-ರೇಟ್ ಇದ್ದಾಗ ಬೆಳ್ಳಿ ಕೊಂಡುಕೊಂಡವರಿಗೆ ಇದು ದೊಡ್ಡ ಶಾಕ್‌ ಅಂತೂ ನೀಡಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಬಲಗೊಳ್ಳುತ್ತಿರುವುದು ಹಾಗೂ ಜಾಗತಿಕ ಬ್ಯಾಂಕ್‌ಗಳ ಬಡ್ಡಿದರ ನಿಯಮಗಳ ಅನಿಶ್ಚಿತತೆಯೇ ಚಿನ್ನ ಬೆಳ್ಳಿಯ ದಿಢೀರ್ ಕುಸಿತಕ್ಕೆ ಕಾರಣ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 2026 03 23T180416.462

ಪ್ರಮುಖವಾಗಿ ಆಭರಣ ತಯಾರಿಕೆಗೆ ಬಳಸುವ 22 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತಿ 1 ಗ್ರಾಂಗೆ 12,435 ತಲುಪಿದ್ದು, 10 ಗ್ರಾಂ ಚಿನ್ನದ ಬೆಲೆ 1,24,350 ಗಳಲ್ಲಿ ವಹಿವಾಟು ನಡೆಸುತ್ತಿದೆ. ಹೂಡಿಕೆದಾರರ ನೆಚ್ಚಿನ ಶುದ್ಧ ಚಿನ್ನ ಅಂದರೆ, 24 ಕ್ಯಾರೆಟ್ ಬೆಲೆ ಇಂದು ಪ್ರತಿ 1 ಗ್ರಾಂಗೆ 13,565ಗಳಾಗಿದ್ದು, 10 ಗ್ರಾಂಗೆ 1,35,650 ನಿಗದಿಯಾಗಿದೆ. ಇನ್ನು ಬಜೆಟ್ ಸ್ನೇಹಿ ಎನ್ನಲಾಗುವ 18 ಕ್ಯಾರೆಟ್ ಚಿನ್ನದ ದರದಲ್ಲಿ ಇಂದು ಪ್ರತಿ 1 ಗ್ರಾಂಗೆ 10,174 ಹಾಗೂ 10 ಗ್ರಾಂಗೆ 1,01,740 ಗಳ ಆಸುಪಾಸಿನಲ್ಲಿದೆ. ಇನ್ನು ಬೆಳ್ಳಿ ಗ್ರಾಂಗೆ 230 ಗಳಿದ್ದು ಕೆಜಿಗೆ 2,30,000ಕ್ಕೆ ಮಾರಾಟವಾಗುತ್ತಿದೆ. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ದರದಲ್ಲಿ ಕಂಡುಬರುತ್ತಿರುವ ಈ ಇಳಿಕೆಯು ಗ್ರಾಹಕರಿಗೆ ನಿರಾಳ ತಂದಿದೆ.

ಇದನ್ನೂ ಓದಿ: ಭಗತ್‌ ಸಿಂಗ್‌, ಸುಖ್‌ದೇವ್‌, ರಾಜ್‌ಗುರು |95 ವರ್ಷಗಳ ಹಿಂದೆ ಇಂದು ನೇಣುಗಂಬ ಏರಿದ್ದ ಸಿಡಿಲಮರಿಗಳು!

ಜಾಗತಿಕ ಮಾರುಕಟ್ಟೆಗಳು ಅನಿಶ್ಚಿತವಾದ್ದರಿಂದ ಇಂದು ಇರುವ ಬೆಲೆ ಬೆಳಗಾಗುವುದರೊಳಗೆ ಏರಿದ್ದರೆ ಅಚ್ಚರಿ ಪಡುವಂತಿಲ್ಲ, ಹಾಗೇ ಮತ್ತಷ್ಟು ಕಡಿಮೆಯಾದರೆ ಮಧ್ಯಮ ವರ್ಗ ಹಾಗೂ ಬಡವರ ಆಭರಣ ಕೊಳ್ಳುವ ಕನಸು ಒಂದಿಷ್ಟು ಚಿಗುರಬಹುದು ಎನ್ನುತ್ತಿದ್ದಾರೆ ಮಾರುಕಟ್ಟೆ ತಜ್ಞರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....