ಈ ದಿನ ಸಂಪಾದಕೀಯ | ಸರ್ಕಾರಿ ಹುದ್ದೆಗಳನ್ನು ಹರಾಜು ಹಾಕಿ, ಇಲ್ಲ ಕೆಪಿಎಸ್‌ಸಿಯನ್ನು ಮುಚ್ಚಿ

Date:

ಕಳೆದ ವರ್ಷ ಇದೇ ಸಂದರ್ಭದಲ್ಲಿ, ಇದೇ ಕೆಪಿಎಸ್‌ಸಿ ಬಗ್ಗೆ ಇಂಥದ್ದೇ ಗಂಭೀರ ಆರೋಪಗಳು ಕೇಳಿಬಂದಿದ್ದವು. ಆಗ ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, 12.3.25ರಂದು ನಡೆದ ಬಜೆಟ್ ಅಧಿವೇಶನದಲ್ಲಿ, 'ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ಉಪ್ಪು ತಿಂದವರು ನೀರು ಕುಡಿಯಲೇಬೇಕು' ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದರು. 

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದಿಂದ 2023-24ನೇ ಸಾಲಿನ ಕೆಎಎಸ್ (ಗ್ರೂಪ್ ‘ಎ’ ಮತ್ತು ‘ಬಿ’) ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಅದರ ಹಿಂದೆಯೇ, ಬೃಹತ್ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪವೂ ಕೇಳಿಬರುತ್ತಿದೆ.

ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಗ್ರಾಮೀಣ–ನಗರ, ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಒದಗಿಸುತ್ತದೆ. ಆಯ್ಕೆಯಲ್ಲಿ ಸಾಮಾಜಿಕ ನ್ಯಾಯವನ್ನು ಅಳವಡಿಸಿಕೊಳ್ಳುತ್ತದೆ. ಗುಣಮಟ್ಟದ ಅಧಿಕಾರಿಗಳನ್ನು ರಾಜ್ಯಾಡಳಿತಕ್ಕೆ ನೀಡುತ್ತದೆ. ಇಂತಹ ಪ್ರಮುಖ ಮತ್ತು ಜವಾಬ್ದಾರಿಯುತ ಸಂಸ್ಥೆ ಕೆಪಿಎಸ್‌ಸಿ ಎಂಬುದು ನಾಡಿನ ಜನರ ನಂಬಿಕೆಯಾಗಿದೆ.

ಶತಾಯಗತಾಯ ಸರಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಲೇಬೇಕೆಂಬ ಛಲ, ಮಹದಾಸೆ ಹೊತ್ತ ಅಭ್ಯರ್ಥಿಗಳು, ವರ್ಷಗಟ್ಟಲೆ ಕಷ್ಟಪಟ್ಟು ಓದಿ ಪರೀಕ್ಷೆ ಎದುರಿಸುತ್ತಾರೆ. ಫಲಿತಾಂಶ, ಆಯ್ಕೆ ಪಟ್ಟಿ ಪ್ರಕಟ, ನೇಮಕಾತಿ ಆದೇಶ ಪತ್ರಕ್ಕಾಗಿ ಚಾತಕಪಕ್ಷಿಗಳಂತೆ ಕಾಯುತ್ತಾರೆ. ಆದರೆ ಅವರಿಟ್ಟ ನಂಬಿಕೆಗೆ ವ್ಯತಿರಿಕ್ತವಾಗಿ ಫಲಿತಾಂಶಗಳು, ಪ್ರಕಟಣೆಗಳು ಹೊರಬೀಳುತ್ತವೆ. ಅಕ್ರಮ, ಅವ್ಯವಹಾರಗಳು ಮೇಳೈಸುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಇರಾನ್ ಅಣ್ವಸ್ತ್ರ ಹೊಂದುವುದು ಅಪಾಯಕಾರಿಯೇ?

ಕೆಪಿಎಸ್‌ಸಿ ಮೇಲಿನ ಈ ಆರೋಪ ಹೊಸದಲ್ಲ. ಸಾಂವಿಧಾನಿಕ ಸಂಸ್ಥೆ ಕೆಟ್ಟಿರುವುದನ್ನು ಕಂಡ ಹೈಕೋರ್ಟ್ ಈ ಹಿಂದೆಯೇ, ‘ನೇಮಕಾತಿ ಪರೀಕ್ಷೆಗಳ ಪರಿಶುದ್ಧತೆಯನ್ನು ಮರಳಿ ತರಬೇಕಾದರೆ ಕೆಪಿಎಸ್‌ಸಿಯನ್ನು ಸಂಪೂರ್ಣವಾಗಿ ‍ಪುನರ್‌ ರಚಿಸಬೇಕು, ಗರಿಷ್ಠ ಬದ್ಧತೆ ಉಳ್ಳವರನ್ನು ನೇಮಿಸಬೇಕು’ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಿದೆ. ಅಷ್ಟೇ ಅಲ್ಲ, ನ್ಯಾಯಕ್ಕಾಗಿ ಅಭ್ಯರ್ಥಿಗಳು ಪದೇ ಪದೆ ಕೋರ್ಟ್ ಮೆಟ್ಟಿಲು ಹತ್ತುವುದು ಮುಂದುವರೆದಾಗ, ‘ಕರ್ನಾಟಕದ ಮರ್ಯಾದೆ ಕಾಪಾಡಲು, ಘನತೆ ಉಳಿಸಲು, ನ್ಯಾಯಯುತವಾಗಿ ನೇಮಕಾತಿ ಪ್ರಕ್ರಿಯೆ ನಡೆಯಲು ಕೇಂದ್ರ ಲೋಕಸೇವಾ ಆಯೋಗದ ಮಾದರಿಯ ಹೊಸ ಪದ್ಧತಿ ಅನುಷ್ಠಾನಕ್ಕೆ ತರಬೇಕು. ಲೋಪಗಳನ್ನು ಸರಿಪಡಿಸಲು ಸಾಧ್ಯವಿಲ್ಲದಿದ್ದರೆ, ಕೆಪಿಎಸ್‌ಸಿಯನ್ನು ರದ್ದು ಮಾಡಬೇಕು’ ಎಂದು ಹೈಕೋರ್ಟ್ ಕಟುವಾಗಿ ಹೇಳಿದ್ದೂ ಇದೆ.

ಆದರೂ, ಕೆಪಿಎಸ್‌ಸಿಗೆ ಕಾಲಕಾಲಕ್ಕೆ ಅಧ್ಯಕ್ಷರಿಂದ ಹಿಡಿದು ಸದಸ್ಯರವರೆಗೆ ನಡೆಯುವ ಆಯ್ಕೆ ಪ್ರಕ್ರಿಯೆ ನಿಂತಿಲ್ಲ. ಆ ಆಯ್ಕೆಯೂ ನ್ಯಾಯಸಮ್ಮತವಾಗಿಲ್ಲ. ಭ್ರಷ್ಟಾಚಾರ, ರಾಜಕೀಯ, ಜಾತಿ, ಲಾಬಿಗಳಿಂದ ಮುಕ್ತವಾಗಿಲ್ಲ. ಇದೆಲ್ಲವೂ ವ್ಯವಸ್ಥೆಯ ಭಾಗವಾಗಿರುವಾಗ, ಎದುರಾಗುವ ಆರೋಪಗಳಿಗೆ ಕೆಪಿಎಸ್‌ಸಿ ಕೂಡ ತಲೆಕೆಡಿಸಿಕೊಳ್ಳುತ್ತಿಲ್ಲ.

ಪ್ರಿಲಿಮ್ಸ್‌ನಲ್ಲಿ 1ರಿಂದ 300 ಸೀರಿಯಲ್ ನಂಬರ್‍‌ವರೆಗಿನ ಯಾವ ಅಭ್ಯರ್ಥಿಯೂ ಆಯ್ಕೆಯಾಗಿಲ್ಲ ಎಂಬ ಗಂಭೀರ ಆರೋಪದ ನಡುವೆಯೇ ಆಯೋಗವು 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿ ಕೂಡ ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ 15 ಮಂದಿ ಸಂದರ್ಶನಕ್ಕೆ ಆಯ್ಕೆಯಾಗಿರುವುದು ಅಕ್ರಮಕ್ಕೆ ಪುರಾವೆ ಒದಗಿಸುತ್ತಿದೆ. ಅವಕಾಶವಂಚಿತ ವಿದ್ಯಾರ್ಥಿಗಳಿಂದ, ತನಿಖೆ ನಡೆಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಜೊತೆಗೆ ಒಂದೇ ಕುಟುಂಬದ ಮೂವರು ಅಭ್ಯರ್ಥಿಗಳು ಸಂದರ್ಶನಕ್ಕೆ ಆಯ್ಕೆಯಾಗಿದ್ದು, ಪ್ರಭಾವಿಗಳ ಮಕ್ಕಳಿಗೆ ಹುದ್ದೆ ಕೊಡಿಸಲು ತೆರೆಯ ಹಿಂದೆ ಷಡ್ಯಂತ್ರ ನಡೆದಿದೆ. ಇದು ಕೇವಲ ಕಾಕತಾಳೀಯವಲ್ಲ, ಇದರ ಹಿಂದೆ ದೊಡ್ಡ ಜಾಲವೇ ಅಡಗಿದೆ ಎಂಬುದು ಅವಕಾಶವಂಚಿತ ಅಭ್ಯರ್ಥಿಗಳ ದೂರಾಗಿದೆ. ಮುಂದುವರೆದು, ಒಂದು ವೇಳೆ, ಆ ಹದಿನೈದು ವಿದ್ಯಾರ್ಥಿಗಳ ರ್‍ಯಾಂಕ್ ಕ್ರಮಬದ್ಧವಾಗಿದ್ದರೆ, ಅವರೆಲ್ಲರ ಉತ್ತರ ಪತ್ರಿಕೆಗಳ ಪ್ರತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಅವರು ತೆಗೆದುಕೊಂಡಿರುವ ಮಾಧ್ಯಮವನ್ನು ಕೂಡ ತಿಳಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಇದನ್ನು ಓದಿದ್ದೀರಾ?: ವಿವಿ ಕ್ಯಾಂಪಸ್‌ಗಳಿಗೆ ಕೇಸರಿ ಗರ ಬಡಿದಿದೆ; ದೊಡ್ಡರೋಗದ ಅಪಾಯವಿದು! 

ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳು ಇಂತಹ ಸಮಯದಲ್ಲಿ ಸಾಮಾನ್ಯವಾಗಿ ಎಡತಾಕುವುದು ವಿರೋಧ ಪಕ್ಷಗಳನ್ನು. ಆದರೆ, ಆಡಳಿತ ಪಕ್ಷಕ್ಕಿಂತ ಹಳ್ಳ ಹಿಡಿದು ಕೂತಿರುವ ವಿರೋಧ ಪಕ್ಷಗಳಿಂದ ಕಣ್ಣೊರೆಸುವ ಪತ್ರಿಕಾ ಹೇಳಿಕೆಗಳಷ್ಟೇ ಬಿಡುಗಡೆಯಾಗಿವೆ. ಆಡಳಿತ ಮತ್ತು ವಿರೋಧ ಪಕ್ಷಗಳನ್ನು ನಂಬಿ ನಿರಾಶರಾದ ಹತಾಶ ಉದ್ಯೋಗಾಕಾಂಕ್ಷಿಗಳು, ಈಗ ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾರೆ. #KPSCScam ಎಂಬ ಹ್ಯಾಶ್‌ಟ್ಯಾಗ್ ಮೂಲಕ ತಮ್ಮೆಲ್ಲ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಅದು ಈಗ ಟ್ರೆಂಡ್ ಆಗುತ್ತಿದೆ. ಕೆಲವರು ಕೆಪಿಎಸ್‌ಸಿಯನ್ನು ಭ್ರಷ್ಟಾಚಾರದ ಕೂಪ ಎಂದು ಲೇವಡಿ ಮಾಡಿದ್ದಾರೆ. ಹಲವರು ರಾಜ್ಯಪಾಲರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ. ಅಗತ್ಯವಿದ್ದರೆ ಪ್ರತಿಭಟನೆ ನಡೆಸುವುದಾಗಿ, ಕೋರ್ಟ್‌ ಮೆಟ್ಟಿಲು ಹತ್ತುವುದಾಗಿ ಎಚ್ಚರಿಸಿದ್ದಾರೆ.

ಹಾಗೆಯೇ ಈ ಭ್ರಷ್ಟ ವ್ಯವಸ್ಥೆಯಲ್ಲಿ ನಮ್ಮ ಶ್ರಮ, ಸಮಯ ವ್ಯರ್ಥವಾಗಿದೆ. ಬಡವರ ಮಕ್ಕಳು ಸರ್ಕಾರಿ ನೌಕರಿಯ ಕನಸು ಕಾಣವುದೇ ಅಪರಾಧವಾಗಿದೆ. ಭವಿಷ್ಯ ಬರಿದಾಗಿದೆ ಎಂದು ಅಭ್ಯರ್ಥಿಗಳು ಅಸಹಾಯಕತೆ ತೋಡಿಕೊಂಡಿದ್ದಾರೆ.

ಆದರೆ ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿಯವರು, ‘ಭ್ರಷ್ಟಾಚಾರ ನಡೆದಿಲ್ಲ, ಇದಕ್ಕಾಗಿ ಯಾವುದೇ ಪ್ರತ್ಯೇಕ ಸಮಿತಿ ರಚಿಸುವುದಿಲ್ಲ’ ಎಂದು ಹೇಳಿದ್ದಾರೆ. ಸುಮಾರು 5,700ಕ್ಕೂ ಅಧಿಕ ಅಭ್ಯರ್ಥಿಗಳು ಕೆಎಎಸ್ ಪರೀಕ್ಷೆ ಬರೆದಿದ್ದಾರೆ. ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳು ಇರುತ್ತಾರೆ. ಅದರಲ್ಲಿ 10ರಿಂದ 12 ಅಭ್ಯರ್ಥಿಗಳು ಆಯ್ಕೆಯಾಗುವುದು ಸಂಭವನೀಯ. ಆದರೆ, ಕೆಪಿಎಸ್‌ಸಿ ಇತಿಹಾಸದಲ್ಲಿ ಒಂದೇ ರೂಮ್‌ನಲ್ಲಿ ಇಷ್ಟು ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಪಾಸ್ ಆಗಿರುವುದು ಇದೇ ಮೊದಲು. ಇದಕ್ಕೆ ಕೆಪಿಎಸ್‌ಸಿ ಕಾರ್ಯದರ್ಶಿಗಳಿಂದ ಉತ್ತರವಿಲ್ಲ.

ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ ಎಂಬ ನಂಬಿಕೆ ಹೋಗಿ ಯಾವುದೋ ಕಾಲವಾಗಿದೆ. ಅದಕ್ಕೆ ಪೂರಕವಾಗಿ ಅಧಿಸೂಚನೆ, ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ವಿಳಂಬಗಳು, ಆಯ್ಕೆ ವಿಧಾನಗಳು, ನೇಮಕಾತಿ ಪ್ರಕ್ರಿಯೆಗಳ ವಿರುದ್ಧ ನ್ಯಾಯಾಲಯಕ್ಕೆ ದೂರು… ಎಲ್ಲವೂ ಜೊತೆಯಾಗಿವೆ. ಉದ್ಯೋಗಾಕಾಂಕ್ಷಿಗಳ ವಿಶ್ವಾಸವೇ ಕಮರಿಹೋಗಿದೆ.  

ಕೆಪಿಎಸ್ಸಿ ಸಂಸ್ಥೆ ಜೀವಂತವಾಗಿದೆಯೇ ಅಥವಾ ಸತ್ತುಹೋಗಿದೆಯೇ ಎಂಬ ಸಂಶಯ, ಅನುಮಾನ ಮತ್ತು ಆಕ್ರೋಶ ಉದ್ಯೋಗಾಕಾಂಕ್ಷಿಗಳಲ್ಲಿ ಮೂಡಿದೆ. ನ್ಯಾಯಾಲಯ, ಕಾನೂನು ಮತ್ತು ಸರಕಾರದ ಭಯವೇ ಇಲ್ಲದ ಈ ನಿಷ್ಕ್ರಿಯ, ಲಂಚಬಾಕ ಸಂಸ್ಥೆಯಿಂದ ಪ್ರತಿಭಾವಂತರಿಗೆ ಕೆಲಸ ಸಿಗುವುದು ಸಾಧ್ಯವೇ ಇಲ್ಲ ಎನಿಸಿದೆ. ಹೀಗಾಗಿ ತೆರೆಮರೆಯಲ್ಲಿ ನಡೆಯುತ್ತಿರುವ ‘ವ್ಯವಹಾರ’ವನ್ನು ಕೆಪಿಎಸ್‌ಸಿ ಕಾನೂನುಬದ್ಧಗೊಳಿಸಿ, ಇಂತಿಂತಹ ಹುದ್ದೆಗೆ ಇಂತಿಷ್ಟು ಎಂದು ಬಹಿರಂಗ ಹರಾಜು ನಡೆಸಲಿ, ಇಲ್ಲ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಲಿ ಎಂಬುದು ಉದ್ಯೋಗಾಕಾಂಕ್ಷಿಗಳ ಹತಾಶೆಯ ನುಡಿಗಳಾಗಿವೆ.

ಇದನ್ನು ಓದಿದ್ದೀರಾ?: ಅಮೆರಿಕ ಕೈಯಿಟ್ಟ ಕಡೆಯೆಲ್ಲ ವಿನಾಶವೇ ಎಂಬುದು ಚಾರಿತ್ರಿಕ ಸತ್ಯ!

ಕಳೆದ ವರ್ಷ ಇದೇ ಸಂದರ್ಭದಲ್ಲಿ, ಇದೇ ಕೆಪಿಎಸ್‌ಸಿ ಬಗ್ಗೆ ಇಂಥದ್ದೇ ಗಂಭೀರ ಆರೋಪಗಳು ಕೇಳಿಬಂದಿದ್ದವು. ಆಗ ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, 12.3.25ರಂದು ನಡೆದ ಬಜೆಟ್ ಅಧಿವೇಶನದಲ್ಲಿ, ‘ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ಉಪ್ಪು ತಿಂದವರು ನೀರು ಕುಡಿಯಲೇಬೇಕು’ ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದರು. ಮುಂದುವರೆದು ಕೆಪಿಎಸ್ಸಿಗೆ ಕಾಯಕಲ್ಪ ತರುವ ನಿಟ್ಟಿನಲ್ಲಿ, ‘ಕೆಪಿಎಸ್‌ಸಿ ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂಬ ಭರವಸೆಯನ್ನು ಸರ್ಕಾರದ ಪರವಾಗಿ ನಾಡಿಗೆ ನೀಡಿದ್ದರು.

ಇದಾಗಿ ಒಂದು ವರ್ಷ ಕಳೆದಿದೆ. ಇದೇ ಶುಕ್ರವಾರದಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿ ಮುಂದುವರೆದಿದ್ದಾರೆ. ಅದೇ ಕೆಪಿಎಸ್‌ಸಿ ಬಗ್ಗೆ ಅಂಥದ್ದೇ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಇದು ಏನನ್ನು ಸೂಚಿಸುತ್ತದೆ? ಇದು ಪ್ರಜೆಗಳು ಆಯ್ಕೆ ಮಾಡಿದ ಪ್ರಜಾಸತ್ತಾತ್ಮಕ ಸರ್ಕಾರವೇ?

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....