ಈ ದಿನ ಸಂಪಾದಕೀಯ | ರಾಜ್ಯ ಸರ್ಕಾರದ ‘ಗೃಹ ಆರೋಗ್ಯ’ ಮತ್ತೊಂದು ಗ್ಯಾರಂಟಿ ಯೋಜನೆಯೇ?

Date:

ಮನೆ ಬಾಗಿಲಿಗೆ ಉಚಿತ ಆರೋಗ್ಯ ಸೇವೆ ಮತ್ತು ಔಷಧ ತಲುಪಿಸುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರಿಂದ ಹಿಡಿದು ಸಚಿವ ದಿನೇಶ್ ಗುಂಡೂರಾವ್‌ವರೆಗೆ, ಮನಸ್ಸಿಟ್ಟು ಮಾಡಿದರೆ 'ಗೃಹ ಆರೋಗ್ಯ' ಯೋಜನೆ ರಾಜ್ಯಕ್ಕೆ ಹೆಸರು ತರಲಿದೆ.

ಆಧುನಿಕ ಜೀವನ ಶೈಲಿ, ಹವಾಮಾನ ವೈಪರೀತ್ಯ, ಅವಧಿಗೆ ಮುನ್ನವೇ ಬಂದ ಮಾನ್ಸೂನ್ ಮಳೆ ಸೇರಿದಂತೆ ಅನೇಕ ಕಾರಣಗಳಿಂದ ಆರೋಗ್ಯ ಸಮಸ್ಯೆಗಳು ಇತ್ತೀಚೆಗೆ ಗಂಭೀರವಾಗುತ್ತಿವೆ. ಅದರಲ್ಲೂ ಕೋವಿಡ್ ಬಳಿಕ ಜನರ ಆರೋಗ್ಯದಲ್ಲಿ ಬಹಳ ದೊಡ್ಡ ಮಟ್ಟದ ಏರುಪೇರು ಉಂಟಾಗಿದೆ. ಕೋವಿಡ್‌ನಿಂದ ಪಾರಾಗಿದ್ದು ಒಂದು ರೀತಿಯ ಬಿಡುಗಡೆಯಾದರೆ, ಆ ನಂತರದ ಆರೋಗ್ಯ ಸಮಸ್ಯೆಗಳು ಬೇರೆ ಬಗೆಯಲ್ಲಿ ಬಾಧಿಸತೊಡಗಿವೆ. ವಯಸ್ಸನ್ನೂ ಲೆಕ್ಕಿಸದೆ ಜನರ ಜೀವ ತೆಗೆಯುತ್ತಿವೆ.

ಆರೋಗ್ಯವೇ ಭಾಗ್ಯ ಎಂದು ಎಷ್ಟೇ ಹೇಳಿದರೂ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಷ್ಟು ಸುಲಭದ ವಿಷಯವಲ್ಲ. ಅದರಲ್ಲಿಯೂ ಹಳ್ಳಿಗಾಡಿನ ಜನರಿಗೆ, ಬಡವರಿಗೆ ಇವತ್ತಿಗೂ ಆರೋಗ್ಯಭಾಗ್ಯ ಎನ್ನುವುದು ಗಗನ ಕುಸುಮವೇ. ಇತ್ತೀಚಿನ ದಿನಗಳಲ್ಲಿ ಈ ಜನರಲ್ಲಿ ತಿಳಿವಳಿಕೆಯ ತೊಂದರೆಯಿಂದಲೋ, ಹಣಕಾಸಿನ ಸಮಸ್ಯೆಯಿಂದಲೋ ಮಧುಮೇಹ, ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ಸಾಮಾನ್ಯವಾಗಿದೆ. ನಿಯಮಿತ ತಪಾಸಣೆ, ಚಿಕಿತ್ಸೆ, ಔ‍ಷಧ ತೆಗೆದುಕೊಳ್ಳುವವರಿಗಿಂತ ನಿರ್ಲಕ್ಷ್ಯ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ.

ದೇಶದಲ್ಲಿನ ಸಾವುಗಳಲ್ಲಿ ಸರಿಸುಮಾರು ಶೇ. 63ರಷ್ಟು ಸಾಂಕ್ರಾಮಿಕವಲ್ಲದ ರೋಗಗಳಿಂದ ಆಗುತ್ತವೆ ಎಂಬ ಮಾಹಿತಿ ಇದೆ. ರಾಜ್ಯದಲ್ಲಿ ಶೇ. 26.9ರಷ್ಟು ಜನರು ಅಧಿಕ ರಕ್ತದೊತ್ತಡದಿಂದ, ಶೇ. 15.6ರಷ್ಟು ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಶೇ. 11.5ರಷ್ಟು ಜನರು ಬಾಯಿಯ ಕ್ಯಾನ್ಸರ್, ಶೇ. 26ರಷ್ಟು ಜನರು ಸ್ತನ ಕ್ಯಾನ್ಸರ್ ಮತ್ತು ಶೇ. 18.3ರಷ್ಟು ಜನರು ಗರ್ಭಕಂಠದ ಕ್ಯಾನ್ಸರ್‍‌ನಿಂದ ಬಳಲುತ್ತಿದ್ದಾರೆ. ಅದರಲ್ಲೂ ಗ್ರಾಮೀಣ ಭಾಗದ ಬಡವರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡ ರಾಜ್ಯ ಸರ್ಕಾರ, ಸಾಂಕ್ರಾಮಿಕವಲ್ಲದ ರೋಗಗಳಿಂದ ಉಂಟಾಗುವ ತೊಂದರೆಗಳು ಮತ್ತು ಅಕಾಲಿಕ ಮರಣವನ್ನು ಕಡಿಮೆ ಮಾಡುವ, ತಡೆಗಟ್ಟುವ ಕ್ರಮವಾಗಿ ರಾಜ್ಯದಲ್ಲಿ ‘ಗೃಹ ಆರೋಗ್ಯ’ ಯೋಜನೆಯನ್ನು ಪ್ರಾರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಸ್ಥಳೀಯ ಸರ್ಕಾರಗಳ ಚುನಾವಣೆ ವಿಳಂಬ; ಕಾಂಗ್ರೆಸ್ ನಡೆ ಸಂವಿಧಾನ ವಿರೋಧಿಯಲ್ಲವೇ?

ಈ ಯೋಜನೆಯು ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್, ಡಯಾಬಿಟಿಕ್ ಫೂಟ್ ಮತ್ತು ರೆಟಿನೋಪತಿ, ಮಾನಸಿಕ ಆರೋಗ್ಯ ಅಸ್ವಸ್ಥತೆಗಳು, ನರವೈಜ್ಞಾನಿಕ ಅಸ್ವಸ್ಥತೆಗಳು, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ದೀರ್ಘಕಾಲದ ಮೂತ್ರಪಿಂಡದ ಕಾಯಿಲೆ, ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ, ಅಲೋಹಾಲ್ ರಹಿತ ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ ಮತ್ತು ರಕ್ತಹೀನತೆ(19-29 ವರ್ಷ ವಯಸ್ಸಿನವರಿಗೆ)ಯಂತಹ 14 ಬಗೆಯ ಆರೋಗ್ಯ ತಪಾಸಣೆಯನ್ನು ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ (AAM) ಉಚಿತವಾಗಿ ನಡೆಸಲಾಗುತ್ತದೆ.

‌ಆ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಮೂವತ್ತು ವರ್ಷ ಮೇಲ್ಪಟ್ಟ ಜನರಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ಕುರಿತು ಜಾಗೃತಿ ಮೂಡಿಸುತ್ತಾರೆ. ರೋಗಗಳನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ಜೀವನಶೈಲಿ ಮಾರ್ಪಾಡು ಕ್ರಮಗಳ ಕುರಿತು ತಿಳಿವಳಿಕೆ ತುಂಬುತ್ತಾರೆ. ರೋಗನಿರ್ಣಯವಾದ ನಂತರ, ವ್ಯಕ್ತಿಗಳನ್ನು ಹತ್ತಿರದ ಆಯುಷ್ಮಾನ್ ಆರೋಗ್ಯ ಮಂದಿರಗಳಿಗೆ ಕಳುಹಿಸಿಕೊಡಲಾಗುತ್ತದೆ. ಅಲ್ಲಿ ಅವರು ಆರೋಗ್ಯ ತಪಾಸಣೆ, ನಿರ್ವಹಣೆ ಮತ್ತು ಉಚಿತವಾಗಿ ಸಾಂಕ್ರಾಮಿಕವಲ್ಲದ ರೋಗಗಳ ಶಿಷ್ಟಾಚಾರದ ಔಷಧಿಗಳನ್ನು ಪಡೆಯಬಹುದಾಗಿದೆ.

ಇದು ನಿಜಕ್ಕೂ ರಾಜ್ಯ ಸರಕಾರದ ಮತ್ತೊಂದು ಜನಸ್ನೇಹಿ ಯೋಜನೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಆರನೇ ಗ್ಯಾರಂಟಿ ಎಂದರೂ ತಪ್ಪಲ್ಲ. ಗೃಹ ಆರೋಗ್ಯ ಯೋಜನೆಗಾಗಿಯೇ ಸರ್ಕಾರ ರೂ. 100 ಕೋಟಿಯನ್ನು ಎತ್ತಿಡಲಾಗಿದೆ. ಜೊತೆಗೆ 2025-26ರ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ರೂ. 17,473 ಕೋಟಿ ಮೀಸಲಿಡಲಾಗಿದೆ.

ಆರೋಗ್ಯ ಇಲಾಖೆಗಾಗಿಯೇ ಸಚಿವರು, ಉನ್ನತ ಅಧಿಕಾರಿಗಳನ್ನೊಳಗೊಂಡ ಸಚಿವಾಲಯ, ರಾಜ್ಯಾದ್ಯಂತ ಆಸ್ಪತ್ರೆಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿವರ್ಗ ಎಲ್ಲವೂ ಇದೆ. ಇಷ್ಟೆಲ್ಲ ಇದ್ದರೂ ರಾಜ್ಯದ ಜನತೆಗೆ ಸಮರ್ಪಕವಾಗಿ ಆರೋಗ್ಯ ಸೇವೆ ದೊರಕುತ್ತಿದೆಯೇ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಇವೆಲ್ಲವುಗಳ ನಡುವೆಯೇ ಈಗ ಜಾರಿ ಮಾಡಿರುವ ಗೃಹ ಆರೋಗ್ಯ ಯೋಜನೆಯ ಹೊಸ ಹೊರೆ ಯಾರ ಮೇಲೆ ಬೀಳಲಿದೆ, ಅದನ್ನು ಸಮರ್ಥವಾಗಿ ನಿರ್ವಹಿಸುವವರು ಯಾರು? ಕನಿಷ್ಠ ಸಂಬಳಕ್ಕೆ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಇದಕ್ಕೆ ಸಿದ್ಧರಾಗಿದ್ದಾರೆಯೇ, ಅವರಿಗೆ ತರಬೇತಿ ನೀಡಲಾಗಿದೆಯೇ? ಮೊಬೈಲ್ ಯೂನಿಟ್, ಪ್ರತ್ಯೇಕ ಸಿಬ್ಬಂದಿ, ಹೆಚ್ಚುವರಿ ವೈದ್ಯರ ನೇಮಕಾತಿ ಆಗಿದೆಯೇ? ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಡೇಟಾ ಸೆಂಟರ್‍‌ಗಳು, ಸ್ಥಳದಲ್ಲೇ ಔಷಧಿಗಳನ್ನು ಉಚಿತವಾಗಿ ಒದಗಿಸುವ ಅಗತ್ಯ ವ್ಯವಸ್ಥೆ ಮಾಡಲಾಗಿದೆಯೇ ಎನ್ನುವ ಪ್ರಶ್ನೆಗಳು ಕೂಡ ಎದುರಾಗಿವೆ.

ಇದನ್ನೂ ಓದಿರಿ: ಈ ದಿನ ಸಂಪಾದಕೀಯ | ಸೆಣಸಾಟ ಸೇನೆಯದು, ಮೆರೆದಾಟ ಮೋದಿಯದು!

ಒಂದಂತೂ ಸತ್ಯ, ಸರ್ಕಾರ ಘೋಷಿಸುವ ಯೋಜನೆಗಳು ಉತ್ತಮವಾಗಿರುತ್ತವೆ. ಜನಪರವಾಗಿರುತ್ತವೆ. ಅವುಗಳಿಗೆ ಕೋಟಿಗಟ್ಟಲೆ ಹಣವೂ ಹರಿಯುತ್ತದೆ. ಅವುಗಳ ಅನುಷ್ಠಾನಕ್ಕೆ ಅಧಿಕಾರಿ-ನೌಕರವರ್ಗವೂ ಸಿದ್ಧವಾಗಿರುತ್ತದೆ. ಆದರೆ ಜನರಿಗೆ ತಲುಪುವುದು ಎಷ್ಟು; ಜನರು ಅದರಿಂದ ಅನುಕೂಲ ಪಡೆಯುವುದು ಎಷ್ಟು ಎನ್ನುವುದು ಇವತ್ತಿಗೂ ಚಿದಂಬರ ರಹಸ್ಯವಾಗಿಯೇ ಉಳಿದಿದೆ. ಗೃಹ ಆರೋಗ್ಯ ಯೋಜನೆ ಹಾಗಾಗದಿರಲಿ.

ಇದು ಗ್ರಾಮೀಣ ಭಾಗದ ಬಡವರ, ಮಹಿಳೆಯರ ಆರೋಗ್ಯ ಕಾಪಾಡುವ ಅತ್ಯವಶ್ಯಕ ಯೋಜನೆ. ಜನಸಾಮಾನ್ಯರ ಮನೆ ಬಾಗಿಲಿಗೆ ಉಚಿತ ಆರೋಗ್ಯ ಸೇವೆ ಮತ್ತು ಔಷಧ ತಲುಪಿಸುವ ಯೋಜನೆ. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರಿಂದ ಹಿಡಿದು ಸಚಿವ ದಿನೇಶ್ ಗುಂಡೂರಾವ್‌ವರೆಗೆ, ಮನಸ್ಸಿಟ್ಟು ಮಾಡಿದರೆ ರಾಜ್ಯಕ್ಕೆ ಹೆಸರು ತರುವ ಯೋಜನೆ. ಯಶಸ್ವಿಯಾಗಲಿ ಎಂದು ಆಶಿಸೋಣ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....