ಈ ದಿನ ಸಂಪಾದಕೀಯ | ಶರವೇಗದಲ್ಲಿ ಸಾವಿನತ್ತ ಧಾವಿಸಿದೆ RTI!

Date:

ಜಾರಿಯಾದ ಹೊಸತರಲ್ಲಿ ಈ ಕಾಯಿದೆಯು ಜನಸಾಮಾನ್ಯರ ಕೈಯಲ್ಲಿ ಹತಾರು ಆಗಿತ್ತು. ಅವರನ್ನು ಸಬಲರನ್ನಾಗಿಸಿತ್ತು. ಇತ್ತೀಚಿನ ವರ್ಷಗಳಲ್ಲಿ ಸರ್ಕಾರವೇ ಮುಂದಾಗಿ ಈ ಶಕ್ತಿಯನ್ನು ಗಣನೀಯವಾಗಿ ಕುಂದಿಸಿದೆ. ಇದು ಜನತಂತ್ರ ವಿರೋಧಿ ನಡೆ.


‘ಮಾಹಿತಿ ಹಕ್ಕು ಕಾಯಿದೆ
ಶರವೇಗದಲ್ಲಿ ಸಾವಿನತ್ತ ಧಾವಿಸಿದೆ’ ಎಂದು ಸುಪ್ರೀಮ್ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ದೇಶದ ಎಲ್ಲ ಮಾಹಿತಿ ಹಕ್ಕು ಆಯೋಗಗಳ ಖಾಲಿ ಸ್ಥಾನಗಳನ್ನು ಮುಂಬರುವ ಮಾರ್ಚ್ 31ರ ಒಳಗಾಗಿ ಭರ್ತಿ ಮಾಡುವಂತೆ ಗಡುವು ನೀಡಿದೆ.

ದುರಹಂಕಾರ ಭ್ರಷ್ಟಾಚಾರ, ಅದಕ್ಷತೆ, ಹಾಗೂ ಸಾರ್ವಜನಿಕಪರ ಮನೋಭಾವದ ಕೊರತೆಗಳು ಆಡಳಿತ ಮತ್ತು ಅಧಿಕಾರದ ಕೈ ಹಿಡಿದು ಜೊತೆ ಜೊತೆಗೆ ಹೆಜ್ಜೆ ಹಾಕುತ್ತವೆ. ಜನಸಾಮಾನ್ಯರನ್ನು ತುಳಿಯುತ್ತವೆ. ಪಾರದರ್ಶಕತೆಯೊಂದೇ ಈ ವ್ಯಾಧಿಗಳಿಗೆ ಪರಿಣಾಮಕಾರಿ ಮದ್ದು. ಜಾರಿಯಾದ ಹೊಸತರಲ್ಲಿ ಈ ಕಾಯಿದೆಯು ಜನಸಾಮಾನ್ಯರ ಕೈಯಲ್ಲಿ ಹತಾರು ಆಗಿತ್ತು. ಅವರನ್ನು ಸಬಲರನ್ನಾಗಿಸಿತ್ತು. ಇತ್ತೀಚಿನ ವರ್ಷಗಳಲ್ಲಿ ಸರ್ಕಾರವೇ ಮುಂದಾಗಿ ಈ ಶಕ್ತಿಯನ್ನು ಗಣನೀಯವಾಗಿ ಕುಂದಿಸಿದೆ. ಇದು ಜನತಂತ್ರ ವಿರೋಧಿ ನಡೆ.

ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಅವರ ಅರ್ಜಿಯನ್ನು ಕುರಿತು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಮಾಹಿತಿ ಹಕ್ಕು ಆಯೋಗಗಳ ಕುರಿತು ನೀಡಿರುವ ಆದೇಶ ಚಿಕಿತ್ಸಕವೂ ಸ್ವಾಗತಾರ್ಹವೂ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಮತ್ತು ರಾಜ್ಯಗಳ ಮಾಹಿತಿ ಹಕ್ಕು ಆಯೋಗಗಳ ಹಲವು ಹುದ್ದೆಗಳು ದೀರ್ಘ ಕಾಲದಿಂದ ಖಾಲಿ ಉಳಿದಿದ್ದು, ಸಾರ್ವಜನಿಕರು ಕೋರಿದ ಮಾಹಿತಿಗಳನ್ನು ಒದಗಿಸುವ ವ್ಯವಸ್ಥೆಯೇ ಕುಸಿದು ಬಿದ್ದಿದೆಯೆಂದು ನ್ಯಾಯಾಲಯ ತೀವ್ರ ಕಳವಳ ವ್ಯಕ್ತಪಡಿಸಿದೆ.
ಎಲ್ಲ ರಾಜ್ಯಗಳ ಮಾಹಿತಿ ಹಕ್ಕು ಆಯೋಗಗಳ ಒಟ್ಟು ಮಂಜೂರು ಸ್ಥಾನಗಳು ಮತ್ತು ಖಾಲಿ ಉಳಿದಿರುವ ಸ್ಥಾನಗಳು ಹಾಗೂ ಮುಂದಿನ ಮಾರ್ಚ್ ವರೆಗೆ ಖಾಲಿಯಾಗಲಿರುವ ಸ್ಥಾನಗಳ ಜೊತೆಗೆ ಈ ಆಯೋಗಗಳ ಮುಂದೆ ಬಾಕಿ ಬಿದ್ದಿರುವ ದೂರುಗಳು ಮತ್ತು ಅಪೀಲುಗಳ ಸಂಖ್ಯೆಯ ಮಾಹಿತಿಯನ್ನು ಕಲೆ ಹಾಕುವಂತೆಯೂ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಈ ಎಲ್ಲ ಮಾಹಿತಿಯನ್ನು ಒಳಗೊಂಡ ವರದಿಯೊಂದನ್ನು ಮೂರು ವಾರಗಳ ಒಳಗಾಗಿ ತನಗೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಅಧಿಸೂಚನೆ ಹೊರಡಿಸಿ ನೇಮಕದ ಪ್ರಕ್ರಿಯೆಯನ್ನು ತಕ್ಷಣವೇ ಆರಂಭಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ತಾಕೀತು ಮಾಡಿದೆ. ರಾಜ್ಯಗಳು ಖಾಲಿ ಸ್ಥಾನಗಳನ್ನು ತುಂಬದೆ ಆರ್.ಟಿ.ಐ.ಕಾಯಿದೆಯನ್ನು ನಿಷ್ಪ್ರಯೋಜಕ ಆಗಿಸಿವೆ ಎಂದು ನ್ಯಾಯಾಲಯ ಅಸಮಾಧಾನ ಪ್ರಕಟಿಸಿದೆ.

ಕೇಂದ್ರೀಯ ಮಾಹಿತಿ ಆಯೋಗವೂ ಈ ದುಸ್ಥಿತಿಯಿಂದ ಹೊರತಾಗಿಲ್ಲ. ಈ ಆಯೋಗದ ಹನ್ನೊಂದು ಆಯುಕ್ತ ಸ್ಥಾನಗಳ ಪೈಕಿ ಏಳು ಖಾಲಿ ಬಿದ್ದಿವೆ. ಮುಖ್ಯ ಆಯುಕ್ತರು ಇದೇ ನವೆಂಬರ್ ತಿಂಗಳಿನಲ್ಲಿ ನಿವೃತ್ತರಾಗಲಿದ್ದಾರೆ. ಕರ್ನಾಟಕದ ಮಾಹಿತಿ ಆಯೋಗ ಕೇವಲ ಐವರು ಆಯುಕ್ತರೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಆರು ಆಯುಕ್ತ ಹುದ್ದೆಗಳು ಖಾಲಿ ಬಿದ್ದಿವೆ. 40 ಸಾವಿರಕ್ಕೂ ಹೆಚ್ಚು ದೂರುಗಳು- ಅಪೀಲುಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ. ಇವುಗಳ ವಿಲೇವಾರಿಗೆ 23 ತಿಂಗಳುಗಳೇ ಹಿಡಿಯಲಿವೆಯಂತೆ . ಮಹಾರಾಷ್ಟ್ರ ರಾಜ್ಯ ಮಾಹಿತಿ ಆಯೋಗದ ಮುಂದೆ 1,15000 ದೂರುಗಳು ಮತ್ತು ಅಪೀಲುಗಳಿವೆ. ಆದರೆ ಈ ಆಯೋಗಕ್ಕೆ ಮುಖ್ಯಸ್ಥರೇ ಇಲ್ಲ. ನಾಲ್ವರು ಆಯುಕ್ತರು ಮಾತ್ರವೇ ಇದ್ದಾರೆ.

ಝಾರ್ಖಂಡ್ ಮಾಹಿತಿ ಆಯೋಗ 2020ರ ಮೇ ತಿಂಗಳಿನಿಂದ ಸಂಪೂರ್ಣ ನಿಷ್ಕ್ರಿಯವಾಗಿದೆ. ಯಾವುದೇ ದೂರುಗಳು ಅಥವಾ ಅಪೀಲುಗಳನ್ನು ಸ್ವೀಕರಿಸುತ್ತಿಲ್ಲ ಮತ್ತು ವಿಲೇವಾರಿಯೂ ಆಗುತ್ತಿಲ್ಲ. ತೆಲಂಗಾಣ ಮತ್ತು ತ್ರಿಪುರಾ ಮಾಹಿತಿ ಆಯೋಗಗಳ ಎಲ್ಲ ಆಯುಕ್ತರ ಸ್ಥಾನಗಳು 2021ರ ಫೆಬ್ರವರಿಯಿಂದಲೇ ಖಾಲಿ ಬಿದ್ದಿವೆ ಎಂದು ಅರ್ಜಿದಾರೆ ಅಂಜಲಿ ಪರವಾಗಿ ನ್ಯಾಯವಾದಿ ಪ್ರಶಾಂತ್ ಭೂಷಣ್ ವಾದ ಮಂಡಿಸಿದರು.

ಸಾರ್ವಜನಿಕ ಪ್ರಾಧಿಕಾರಗಳ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲೆಂದು 2005ರ ಜೂನ್ 15ರಂದು ಈ ಕಾಯಿದೆಯನ್ನು ಜಾರಿಗೊಳಿಸಲಾಗಿತ್ತು ಕೇಂದ್ರ ಸರ್ಕಾರದಲ್ಲಿ ಮಾತ್ರವಲ್ಲದೆ, ಪ್ರತಿಯೊಂದು ರಾಜ್ಯದಲ್ಲಿಯೂ ಮಾಹಿತಿ ಹಕ್ಕು ಆಯೋಗಗಳನ್ನು ರಚಿಸಲಾಯಿತು. ಈ ಕಾಯಿದೆಯ ಪ್ರಕಾರ ಸಾರ್ವಜನಿಕ ಪ್ರಾಧಿಕಾರಗಳು ನಾಗರಿಕರು ಬಯಸಿದ ಮಾಹಿತಿಗಳನ್ನು ನಿಗದಿತ ಅವಧಿಯೊಳಗಾಗಿ ಒದಗಿಸಬೇಕಿದೆ.

ಇತ್ತೀಚೆಗಷ್ಟೇ 18 ವರ್ಷ ತುಂಬಿದ ಮಾಹಿತಿ ಹಕ್ಕು ಕಾಯಿದೆಯು ಇತ್ತೀಚಿನ ವರ್ಷಗಳಲ್ಲಿ ಅನಿಶ್ಚಿತ ಭವಿಷ್ಯವನ್ನು ಎದುರಿಸಿದೆ. ಕಾಯಿದೆಯನ್ನು ಮತ್ತು ಅದರ ಹಿಂದಿರುವ ಆಶಯವನ್ನು ಸತತವಾಗಿ ವ್ಯವಸ್ಥಿತವಾಗಿ ದುರ್ಬಲಗೊಳಿಸಲಾಗುತ್ತಿದೆ. ಮಾಹಿತಿ ಆಯುಕ್ತರ ಹುದ್ದೆಗಳ ಸ್ಥಾನಮಾನಗಳನ್ನು ಕೆಳದರ್ಜೆಗೆ ಇಳಿಸಲು ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಸತರ್ಕ ನಾಗರಿಕ ಸಂಘಟನೆ ಎಂಬ ಸ್ವಯಂಸೇವಾ ಸಂಸ್ಥೆ ನಡೆಸಿದ ಅಧ್ಯಯನದ ಪ್ರಕಾರ ಮಾಹಿತಿ ಹಕ್ಕು ಆಯೋಗಗಳು ದೇಶದ ನಾನಾ ರಾಜ್ಯಗಳಲ್ಲಿ ಬಹುತೇಕ ನಿಷ್ಕ್ರಿಯವಾಗಿ ಹೋಗಿವೆ. ಈ ಕಾಯಿದೆಯ ಅಡಿಯಲ್ಲಿ ದೂರುಗಳು ಮತ್ತು ಮಾಹಿತಿ ಕೋರಿದ ಅಹವಾಲುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ನಡೆದಿದ್ದು ದಾಖಲಾತಿ ಸಂಖ್ಯೆಯನ್ನು ತಲುಪಿವೆ. ಹೀಗೆ ಕುಂಟುತ್ತ ತೆವಳುತ್ತ ಸಾಗಿರುವ ಮಾಹಿತಿ ಹಕ್ಕು ಆಯೋಗಗಳ ಮುಂದೆ 3.21 ಲಕ್ಷ ಅಪೀಲುಗಳು ಬಾಕಿ ಉಳಿದಿವೆ. ಹಾಲಿ ಮಂದಗತಿಯನ್ನು ಪರಿಗಣಿಸಿದರೆ ಪಶ್ಚಿಮ ಬಂಗಾಳದ ಮಾಹಿತಿ ಹಕ್ಕು ಆಯೋಗದ ಮುಂದೆ ಮೂರು ತಿಂಗಳ ಹಿಂದೆ ಸಲ್ಲಿಸಿದ ಅರ್ಜಿಯ ವಿಲೇವಾರಿ ಸರದಿ ಬರಲು 24 ವರ್ಷಗಳೇ ಬೇಕೆಂದು ಲೆಕ್ಕ ಹಾಕಲಾಗಿದೆ.

2023ರ ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ ಕಾಯಿದೆ ಜಾರಿಯ ಪರಿಣಾಮವಾಗಿ ಸಾರ್ವಜನಿಕ ಮಹತ್ವದ ಹುದ್ದೆಯಲ್ಲಿರುವ ವ್ಯಕ್ತಿಯ ವ್ಯಕ್ತಿಗತ ಮಾಹಿತಿಯನ್ನು ಕೋರುವುದೂ ಅಸಾಧ್ಯವಾಗಿ ಪರಿಣಮಿಸಿದೆ.

ಸರ್ಕಾರವು ಆಯೋಗಗಳ ಕಾರ್ಯವ್ಯಾಪ್ತಿಯನ್ನು ಕುಗ್ಗಿಸಿರುವುದೇ ಅಲ್ಲದೆ, ಈ ಕಾಯಿದೆಯ ಉದ್ದೇಶವನ್ನೇ ವಿಫಲಗೊಳಿಸಲು ಇತರೆ ಶಾಸನಗಳನ್ನು ಅದರ ವಿರುದ್ಧ ಹೂಡಿದೆ. ಈ ಕಾಯಿದೆಯ ವಿರುದ್ಧ ಸರ್ಕಾರ ಹೆಚ್ಚು ಹೆಚ್ಚು ನೇತ್ಯಾತ್ಮಕ ಧೋರಣೆ ತಳೆದು, ಹೆಜ್ಜೆ ಹೆಜ್ಜೆಗೆ ನಿರ್ಬಂಧಗಳನ್ನು ಹೇರುತ್ತಿದೆ. ಮಾಹಿತಿ ನೀಡದಿರುವ ಮತ್ತು ತಪ್ಪು ಮಾಹಿತಿ ಒದಗಿಸಿರುವ ಅಧಿಕಾರಿಗಳಿಗೆ ದಂಡಶುಲ್ಕ ವಿಧಿಸದೆ ಇರುವುದು ನಿರ್ಲಕ್ಷ್ಯದ ಪ್ರವೃತ್ತಿಗೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗಿದೆ. ಸರ್ಕಾರದ ಈ ದಮನವನ್ನು ಹಿಮ್ಮೆಟ್ಟಿಸಲು ನ್ಯಾಯಾಲಯದ ಹಸ್ತಕ್ಷೇಪವೊಂದೇ ಅಂತಿಮ ಆಶಾಕಿರಣ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....