ಈ ದಿನ ಸಂಪಾದಕೀಯ | ಕಾಂತರಾಜ್‌ ವರದಿಗೆ ಬಲಿಷ್ಠರ ವಿರೋಧ ಸಾಮಾಜಿಕ ನ್ಯಾಯದ ವಿರೋಧ

Date:

ನಾಡಿನ ಸಂಪತ್ತು, ಸಂಪನ್ಮೂಲ, ಅಧಿಕಾರ, ಅವಕಾಶಗಳ ಸಿಂಹಪಾಲನ್ನು ಇಲ್ಲಿಯವರೆಗೆ ನಿರಂತರ ಅನುಭವಿಸಿಕೊಂಡು ಬಂದಿರುವ ಬಲಿಷ್ಠ ಸಮುದಾಯಗಳಿಗೆ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅಭದ್ರತೆ ಹುಟ್ಟಿಸಿರಬಹುದು. ಅಧಿಕಾರದ ಮೇಲಿನ ಹಿಡಿತ ಸಡಿಲವಾದೀತು ಎಂಬ ಅಳುಕು ಕಾಡಿರಬಹುದು

 

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಸ್‌ ಕಾಂತರಾಜ್‌ ನೇತೃತ್ವದ ಸಮಿತಿ  ಜಾತಿ ಜನಗಣತಿಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿತ್ತು. ಈ ವರದಿ ಮಂಡನೆಗೆ ಮುಂಚೆಯೇ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿ ಪೂರ್ಣಗೊಂಡಿತ್ತು.

ಆ ನಂತರ ಅಧಿಕಾರ ಹಿಡಿದ ಕಾಂಗ್ರೆಸ್ಜೆಡಿಎಸ್‌ ಸಮ್ಮಿಶ್ರ ಸರ್ಕಾರ 14 ತಿಂಗಳಲ್ಲೇ ಉರುಳಿ ಬಿತ್ತು. ಉಳಿದ ಅವಧಿಯನ್ನು ಪೂರೈಸಿದ್ದು ಬಿಜೆಪಿ ಸರ್ಕಾರ. ಈ ಎರಡೂ ಸರ್ಕಾರಗಳು ಜಾತಿಜನಗಣತಿಯ ವರದಿಯನ್ನು ಪಡೆಯುವ ಗೋಜಿಗೆ ಹೋಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಪುನಃ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಕಾಂತರಾಜ್‌ ವರದಿಯನ್ನು ಅಂಗೀಕರಿಸುವುದಾಗಿ ಸಾರಿದೆ. ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ನವೆಂಬರ್‌ ಅಂತ್ಯದೊಳಗೆ ಪರಿಷ್ಕೃತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಪ್ರಕಟಿಸಿದ್ದಾರೆ. ಈ ಮಧ್ಯೆ ಬಿಹಾರದಲ್ಲಿ ಎರಡೇ ವರ್ಷಗಳಲ್ಲಿ ಜಾತಿ ಜನಗಣತಿಯನ್ನು ಪೂರ್ಣಗೊಳಿಸಿ ನಿತೀಶ್ ಕುಮಾರ್ ಸರ್ಕಾರ ಆ ವರದಿಯನ್ನು ಸ್ವೀಕರಿಸಿದ ನಂತರ ಜಾತಿ ಜನಗಣತಿಯ ಕೂಗಿಗೆ ಹೆಚ್ಚಿನ ಬಲ ಸಿಕ್ಕಿದೆ. ಖರ್ಗೆರಾಹುಲ್ಸೋನಿಯಾ ನೇತೃತ್ವದ ಕಾಂಗ್ರೆಸ್ ಪಕ್ಷ ಜಾತಿ ಜನಗಣತಿಯನ್ನು ದೊಡ್ಡ ರೀತಿಯಲ್ಲಿ ಬೆಂಬಲಿಸಿದೆ. ಕರ್ನಾಟಕದಲ್ಲಿಯೂ ಕಾಂತರಾಜ್‌ ವರದಿ ಜಾರಿಗೆ ಒತ್ತಡ ಹೆಚ್ಚಿದೆ. ಆದರೆ, ಕಾಂಗ್ರೆಸ್‌ ಸರ್ಕಾರದಲ್ಲಿರುವ ಬಲಿಷ್ಠ ಸಮುದಾಯಗಳ ನಾಯಕರೇ ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಲಿಂಗಾಯತ, ಒಕ್ಕಲಿಗ ಸಮುದಾದಯಗಳಿಗೆ ಈ ವರದಿ ಬಹಿರಂಗವಾಗುವುದು ಇಷ್ಟವಿಲ್ಲ.

ಗುರುವಾರ‌ (ನವೆಂಬರ್2 ) ರಾಜ್ಯ ಒಕ್ಕಲಿಗರ ಸಂಘ ಆದಿಚುಂಚನಗಿರಿ ಮಠದಲ್ಲಿ ಈ ಕುರಿತು ಸಭೆ ನಡೆಯಿತು. ಮೂರೂ ಮುಖ್ಯ ರಾಜಕೀಯ ಪಕ್ಷಗಳ ಒಕ್ಕಲಿಗ ಶಾಸಕರು ಸೇರಿ ಈ ವರದಿಯನ್ನು ವಿರೋಧಿಸುವ ತೀರ್ಮಾನ ಮಾಡಿದ್ದಾರೆ. ಸಭೆಯಲ್ಲಿ ನಿರ್ಮಲಾನಂದ ಸ್ವಾಮೀಜಿ, ಪಟ್ಟ ನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಜೊತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮತ್ತು ಸಚಿವ ಚಲುವರಾಯ ಸ್ವಾಮಿ ಕೂಡಾ ಹಾಜರಿದ್ದು ಒಪ್ಪಿಗೆ ನೀಡಿರುವುದು ದುರದೃಷ್ಟಕರ ನಡವಳಿಕೆ.

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲು ಒಕ್ಕಲಿಗರ ಮತವಷ್ಟೇ ಕಾರಣವೇ? ಉಳಿದ ಸಮುದಾಯಗಳು ಕಾಂಗ್ರೆಸ್‌ಗೆ ಮತ ಹಾಕಿಲ್ಲವೇರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಬಲಿಷ್ಠವಾಗಿರುವ ಜನಾಂಗಗಳ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಒಂದು ವೇಳೆ ಕಾಂತರಾಜ್‌ ವರದಿಯನ್ನು ತಿರಸ್ಕರಿಸುವ ತೀರ್ಮಾನಕ್ಕೆ ಬಂದರೆ ಅದು ‘ಅಹಿಂದ’ ಜನವರ್ಗಗಳಿಗೆ ಬಗೆಯುವ ಘೋರ ಅನ್ಯಾಯವಾಗಲಿದೆ.

ವರದಿ ಸಿದ್ದಪಡಿಸುವಲ್ಲಿ ಲೋಪವಾಗಿದೆಎಂದು ಸ್ವಾಮೀಜಿಗಳು ಹೇಳಿದ್ದಾರೆ. ವರದಿ ಬಿಡುಗಡೆಯಾಗದೇ ಅದರಲ್ಲಿರುವ ಲೋಪಗಳು ಯಾರಿಗಾದರೂ ಹೇಗೆ ತಿಳಿಯುತ್ತದೆ? ಅಷ್ಟೇ ಅಲ್ಲ ಜಾತಿ ಜನಗಣತಿ ವರದಿಯನ್ನು ಅನುಷ್ಠಾನ ಮಾಡುವ ಮುನ್ನ ನಮ್ಮ ಅಭಿಪ್ರಾಯ ಕೇಳಬೇಕುಎಂದು ನಂಜಾವಧೂತ ಸ್ವಾಮಿಗಳು ಹೇಳಿದ್ದಾರೆ. ಅಷ್ಟಕ್ಕೂ ಸರ್ಕಾರದ ಆಡಳಿತದಲ್ಲಿ ಮೂಗು ತೂರಿಸಲು ಇವರೆಲ್ಲ ಯಾರು? ತಾವು ಧಾರ್ಮಿಕ ಮುಖಂಡರೋ ಅಥವಾ ರಾಜಕೀಯ ಮುಖಂಡರೋ ಎಂಬುದನ್ನು ಸ್ಪಷ್ಟಪಡಿಸಬೇಕು.

ನಾಡಿನ ಸಂಪತ್ತು, ಸಂಪನ್ಮೂಲ, ಅಧಿಕಾರ, ಅವಕಾಶಗಳ ಸಿಂಹಪಾಲನ್ನು ಇಲ್ಲಿಯವರೆಗೆ ನಿರಂತರ ಅನುಭವಿಸಿಕೊಂಡು ಬಂದಿರುವ ಬಲಿಷ್ಠ ಸಮುದಾಯಗಳಿಗೆ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅಭದ್ರತೆ ಹುಟ್ಟಿಸಿರಬಹುದು. ಅಧಿಕಾರದ ಮೇಲಿನ ಹಿಡಿತ ಸಡಿಲವಾದೀತು ಎಂಬ ಅಳುಕು ಕಾಡಿರಬಹುದು. ಆದರೆ ಅಹಿಂದ ವರ್ಗಗಳು ಶತಮಾನಗಳಿಂದ ಎಲ್ಲ ಅವಕಾಶಗಳಿಂದ ವಂಚಿತರಾಗಿರುವವರು. ಬಾಯಿ ಸತ್ತ ಈ ಬಡ ಸಮುದಾಯಗಳಿಗೆ ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಸಾಮಾಜಿಕ ರಾಜಕೀಯ ಆರ್ಥಿಕ ನ್ಯಾಯ ಸಿಗುವುದು ಯಾವ ಕಾಲಕ್ಕೆ?

ದೇಶದ ಅಹಿಂದ ವರ್ಗಗಳು ಈಗಾಗಲೇ ಮನುವಾದಿ ಫ್ಯಾಸಿಸ್ಟರ ಅಟ್ಟಹಾಸದಲ್ಲಿ ನಲುಗಿ ಹೋಗಿವೆ. ಆಳುವವರ ಕುಮ್ಮಕ್ಕಿನಿಂದ ಮೀಸಲಾತಿ ವಿರೋಧಿಗಳ ಪಡೆ ನೂರ್ಮಡಿ ಬೆಳೆಯುತ್ತಿದೆ. ಸಂವಿಧಾನವನ್ನು ಬದಲಾಯಿಸುವ ಬೆದರಿಕೆ ಬಾಗಿಲು ಬಡಿಯುತ್ತಿದೆ. ಈ ತಬ್ಬಲಿ ವರ್ಗಗಳು ದಿಕ್ಕೇ ತೋಚದ ಅಸಹಾಯಕ ಸ್ಥಿತಿ ತಲುಪಿವೆ. ಇಂತಹ ಅಂಧಕಾರದ ಸ್ಥಿತಿಯಲ್ಲಿ ಜಾತಿ ಜನಗಣತಿ ಎಂಬ ಅರೆತೆರೆದ ಆಶಾವಾದದ ಬೆಳಕಿಂಡಿಯನ್ನೂ ಮುಚ್ಚಿಹಾಕುವುದು ಪರಮ ಅನ್ಯಾಯ.

ಕಾಂಗ್ರೆಸ್‌ ಹೈ ಕಮಾಂಡ್‌ ದೇಶದಲ್ಲೆಡೆ ಜಾತಿ ಜನಗಣತಿ ಮಾಡಬೇಕು ಎಂಬ ವಾದವನ್ನು ಬಲವಾಗಿ ಮಂಡಿಸಿದೆ. ಅಧಿಕಾರಕ್ಕೆ ಬಂದರೆ ಈ ಆಶ್ವಾಸನೆಯನ್ನು ಜಾರಿಗೆ ತರುವುದಾಗಿ ರಾಹುಲ್ ಗಾಂಧಿ ವಚನ ನೀಡಿದ್ದಾರೆ. ಕಾಂತರಾಜ್ ವರದಿಯನ್ನು ಅಂಗೀಕರಿಸುವ ಸಿದ್ದರಾಮಯ್ಯ ಧೈರ್ಯದ ಮೂಲ ಇದೇ ಆಗಿದೆ. ಈ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಠದಲ್ಲಿ ನಡೆದ ಸಭೆಯ ನಿರ್ಧಾರವನ್ನು ಸಾಮಾಜಿಕ ನ್ಯಾಯಪರರು ಒಪ್ಪುವುದು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಚಿವರು ಶಾಸಕರು ತಮ್ಮದೇ ಪಕ್ಷದ ಹೈಕಮಾಂಡ್ ವಿರುದ್ಧ ಬಹಿರಂಗ ಬಂಡಾಯ ಸಾರಿರುವುದು ಮಾತ್ರವಲ್ಲ, ಸಾಮಾಜಿಕ ನ್ಯಾಯವನ್ನೂ ಧಿಕ್ಕರಿಸಿದ್ದಾರೆ.

ಈ ಎಲ್ಲಾ ಅಡತಡೆಗಳನ್ನು ಮೀರಿ ಈಗಾಗಲೆ ಸಾರಿರುವ ತಮ್ಮ ನಿಲುವಿಗೆ ಬದ್ಧರಾಗಿ ವರದಿ ಅಂಗೀಕರಿಸಿ ಸಾಮಾಜಿಕ ನ್ಯಾಯ ನೀಡಿಕೆಯ ದಾರಿಯಲ್ಲಿ ಸಾಗುವ ದಿಟ್ಟತನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರಬೇಕು. ಮುಂದೆ ಚುನಾವಣಾ ರಾಜಕೀಯದಿಂದ ವಿಮುಖರಾಗುವ ಬಗ್ಗೆ ಈಗಾಗಲೇ ನಿರ್ಧಾರ ಮಾಡಿರುವ ಅಹಿಂದ ನಾಯಕ ಈ ಐತಿಹಾಸಿಕ ಅವಕಾಶಕ್ಕೆ ಬೆನ್ನು ತಿರುಗಿಸಕೂಡದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....