ಅತಿಥಿ ಉಪನ್ಯಾಸಕರ ನೇಮಕ | ಇಂದಿನಿಂದ ಅರ್ಜಿ ಆಹ್ವಾನ, ಸೆ. 7 ಕಡೆಯ ದಿನ

Date:

ಕಾಲೇಜು ಶಿಕ್ಷಣ ಇಲಾಖೆಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇಂದಿನಿಂದ (ಆ.31) ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸೆ. 7 ಕೊನೆಯ ದಿನ. 15 ವರ್ಷಗಳಿಗೂ ಹೆಚ್ಚು ವರ್ಷ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ ಅನುಭವ, UGC ನಿಗದಿತ ವಿದ್ಯಾರ್ಹತೆ ಹೊಂದಿರುವವರಿಗೆ 40,000 ರೂ. ವರೆಗೆ ವೇತನ ಸಿಗಲಿದೆ.

ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್‌ ಕೌನ್ಸಿಲಿಂಗ್‌ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಕೆಳಕಂಡಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ತಾತ್ಕಾಲಿಕ ಮೆರಿಟ್‌ ಪಟ್ಟಿಯನ್ನು ಸೆ. 8 ರಂದು ಪ್ರಕಟಿಸಲಾಗುತ್ತದೆ. ಏನಾದರೂ ತಿದ್ದುಪಡಿ ಮಾಡುವುದಿದ್ದರೆ ಸೆ. 9 ಮತ್ತು 10ರಂದು ಅವಕಾಶ ನೀಡಲಾಗುತ್ತದೆ. ಕಾರ್ಯಭಾರವನ್ನು ಸೆ. 11ರಂದು ಪ್ರಕಟಿಸಲಾಗುತ್ತದೆ. ಸೆ. 17ರಂದು ಕೌನ್ಸಿಲಿಂಗ್‌ ನಡೆಯಲಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್‌ ತೆರೆಯಿರಿ. www.dce.karnataka.gov.in

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...