ಕನ್ನಡದಲ್ಲೂ ಬರೆಯಬಹುದು ಸಿಎಪಿಎಫ್ ಪರೀಕ್ಷೆ

Date:

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ನಿರ್ಧರಿಸಿದೆ.

ಕನ್ನಡ ಒಳಗೊಂಡಂತೆ 13 ಪ್ರಾದೇಶಿಕ ಭಾಷೇಗಳಲ್ಲಿ ಪರೀಕ್ಷೆ ಬರೆಯಬಹುದು ಎಂದು ಸಚಿವಾಲಯ ಹೇಳಿದೆ. ಈ ಬಗ್ಗೆ, ಕೇಂದ್ರ ಗೃಹ ಸಚಿವ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಿಎಪಿಎಫ್ ಪರೀಕ್ಷೆ ಬರೆಯಲು ಎರಡು ಭಾಷೆಗಳಿಗೆ ಮಾತ್ರ ಅವಕಾಶ ಇತ್ತು. ಈ ಬಗ್ಗೆ ಹಲವು ವಾಗ್ಯುದ್ಧ ಕೇಳಿ ಬರುತ್ತಿತ್ತು. ಈ ಮಧ್ಯೆಯೇ ಎಂಎಚ್‌ಎ ತನ್ನ ನಿರ್ಧಾರವನ್ನು ಬದಲಾಯಿಸಿದ್ದು, ಕಾನ್ಸ್ಟೇಬಲ್ ಹುದ್ದೆಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024 ಜನವರಿ 1ರಿಂದ ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಕನ್ನಡ, ತಮಿಳು, ತೆಲುಗು ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಎಂಎಚ್‌ಎ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ, ಪ್ರಶ್ನೆ ಪತ್ರಿಕೆಯು ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲೂ ಲಭ್ಯವಿರುತ್ತದೆ ಎನ್ನಲಾಗಿದೆ.

ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯುವುದರಿಂದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿ ಪ್ರಯೋಜನವಾಗುತ್ತದೆ. ಅವರು ಮಾತೃಭಾಷೆ ಮತ್ತು ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡುತ್ತದೆ. ಸಿಎಪಿಎಫ್‌ನಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಗೆ ಉತ್ತೇಜನ ನೀಡಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಂಎಚ್‌ಎ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...