ಖಾಸಗಿ ಶಾಲೆಗಳು ಶುಲ್ಕದ ವಿವರ ಪ್ರಕಟಿಸುವುದು ಕಡ್ಡಾಯ

Date:

ಖಾಸಗಿ ಶಾಲೆಗಳು ಹೆಚ್ಚು ಶಾಲಾ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪಗಳ ಕೇಳಿಬರುತ್ತಿರುವ ಹಿನ್ನೆಲೆ, ಖಾಸಗಿ ಶಾಲೆಗಳು ಪ್ರವೇಶಾತಿ ಶುಲ್ಕದ ವಿವರವನ್ನು ಕಡ್ಡಾಯವಾಗಿ ಪ್ರಕಟಣೆ ಮಾಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.

ಮೇ 29ರಿಂದ ಈ ವರ್ಷದ ಶೈಕ್ಷಣಿಕ ವರ್ಷ ಆರಂಭವಾಗುತ್ತಿದೆ. ಈಗಾಗಲೇ ಎಲ್ಲ ಪರೀಕ್ಷೆಗಳು ಪೂರ್ಣಗೊಂಡು ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಲಾಗಿದೆ. ಕೆಲ ಖಾಸಗಿ ಶಾಲೆಗಳು ಪ್ರವೇಶಾತಿ ಪ್ರಕ್ರಿಯೆ ಆರಂಭಿಸಿದ್ದು, ಮನಬಂದಂತೆ ಶುಲ್ಕ ವಿಧಿಸಿ ಪೋಷಕರನ್ನು ಸುಲಿಗೆ ಮಾಡುತ್ತಿವೆ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಖಾಸಗಿ ಶಾಲೆಗಳ ಶುಲ್ಕದ ವಿವರ ಪ್ರಕಟಿಸುವುದು ಕಡ್ಡಾಯ ಎಂದಿದೆ.

ಶುಲ್ಕದ ವಿವರದೊಂದಿಗೆ ಹಲವು ನಿಯಮಗಳನ್ನು ಜಾರಿ ಮಾಡಿದ್ದು, ವಿದ್ಯಾರ್ಥಿ ಹಿಂದೆ ಓದುತ್ತಿದ್ದ ಶಾಲೆ ತೊರೆದು ಬೇರೆ ಶಾಲೆಗೆ ಪ್ರವೇಶ ಪಡೆದ ಸಂದರ್ಭದಲ್ಲಿ ತಕ್ಷಣವೇ ವರ್ಗಾವಣೆ ಪತ್ರ ನೀಡಬೇಕು ಎಂದು ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಬಿಎಸ್‌ಸಿ, ಐಸಿಎಸ್‌ಸಿ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಡೊನೇಷನ್ ಪಡೆಯಬಾರದು ಎಂದು ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಿದೆ. ಮಗುವಿನ ಪ್ರವೇಶಕ್ಕೆ ಪೋಷಕರಿಗೆ ಪ್ರವೇಶ ಪರೀಕ್ಷೆ ನಡೆಸಬಾರದೆಂದು ಸೂಚಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸಿದ ಶಾಲೆಗಳಿಗೆ ಒಂದು ಲಕ್ಷ ರೂಪಾಯಿ ದಂಡ, ಇದು ಪುನರಾವರ್ತನೆ ಆದರೆ ದಿನಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ಕನ್ನಡದಲ್ಲೂ ಬರೆಯಬಹುದು ಸಿಎಪಿಎಫ್ ಪರೀಕ್ಷೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...