ಕನ್ನಡ ಬೆಳೆಯಲು ಸರ್ಕಾರಿ ಶಾಲೆಗಳು ಉಳಿಯಬೇಕು; ಆದರೆ…

Date:

ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳು. ನಮ್ಮ ತಾಯ್ನುಡಿ ಉಳಿದು ಬೆಳೆದು ಹೆಮ್ಮರವಾಗಿ ಕನ್ನಡಿಗರಿಗೆ ನೆರಳಾಗಬೇಕಾದರೆ, ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಆದರೆ ಇಂದು, ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ಗೊತ್ತೇ?;

  1. 6,400 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು!
  2. 50 ಅಥವಾ 50ಕ್ಕಿಂತ ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳ ಸಂಖ್ಯೆ -23,342
  3. 2023-24 ರಲ್ಲಿ 3,363 ಮಕ್ಕಳನ್ನು ಆರ್‌ ಟಿ ಇ ಅಡಿಯಲ್ಲಿ ಖಾಸಗಿ ಶಾಲೆಗೆ ದಾಖಲಿಸಲು ಸರ್ಕಾರ ಖರ್ಚು ಮಾಡಿದ ಹಣ -364 ಕೋಟಿ!
  4. 46473 ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ -42,75,354 –ಅಂದರೆ,ಸರ್ಕಾರಿ ಶಾಲೆಗಳಲ್ಲಿ ಸರಾಸರಿ ಮಕ್ಕಳು -92
  5. 16299 ಖಾಸಗಿ ಶಾಲೆಗಳಲ್ಲಿ ದಾಖಲಾತಿ 46,74,481- ಅಂದರೆ, ಖಾಸಗಿ ಶಾಲೆಗಳಲ್ಲಿ ಸರಾಸರಿ ಮಕ್ಕಳು-287
  6. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ -43,133
  7. ಸರ್ಕಾರಿ ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಹುದ್ದೆ -10,168
  8. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಸಂಖ್ಯೆ-ಸುಮಾರು 40,000
  9. 2028-29 ರ ವೇಳೆಗೆ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತಿ ಹೊಂದುವ ಶಿಕ್ಷಕರ ಸಂಖ್ಯೆ -34,807.
  10. 2028-29 ರ ವೇಳೆಗೆ ಪ್ರೌಢ ಶಾಲೆಯಲ್ಲಿ ನಿವೃತ್ತಿ ಹೊಂದುವ ಶಿಕ್ಷಕರ ಸಂಖ್ಯೆ-4,128

ಮುಂದಿನ 10 ವರ್ಷಗಳಲ್ಲಿ, ನಮ್ಮ ಮಕ್ಕಳು ಕನ್ನಡ ಕಲಿಯುವ ಕನ್ನಡದ ತೊಟ್ಟಿಲುಗಳಾದ ಸರ್ಕಾರಿ ಕನ್ನಡ ಶಾಲೆ ಏನಾಗಬಹುದೆಂದು ಮತ್ತು ಕನ್ನಡ ಹೇಗೆ ಉಳಿದು -ಬೆಳೆಯಬಹುದು ಯೋಚಿಸಿ?

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮತ್ತೊಂದು ಅತ್ಯಂತ ಕಳವಳಕಾರಿ ಸಂಗತಿಯೆಂದರೆ, ಸರ್ಕಾರ ತನ್ನದೇ ಆಯ್ದ ಸರ್ಕಾರೀ ಮತ್ತು ಕೆಪಿಎಸ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತೆರೆದು ಸರ್ಕಾರಿ ಕನ್ನಡ ಶಾಲೆಗಳಲ್ಲಿರುವ‌ ಮಕ್ಕಳನ್ನು ಆಂಗ್ಲ ಮಾಧ್ಯಮಕ್ಕೆ ಸೆಳೆಯುತ್ತಿದೆ . ಸರ್ಕಾರಿ ಕನ್ನಡ ಶಾಲೆಗಳು ತಮ್ಮ‌ ಉಳಿವಿಗಾಗಿ ತಮ್ಮದೇ ಸರ್ಕಾರಿ ಆಂಗ್ಲ ಮಾಧ್ಯಮದ ಶಾಲೆಗಳ ವಿರುದ್ಧವೇ ಹೋರಾಡಬೇಕಾದ ವಿಪರ್ಯಾಸ ಸೃಷ್ಟಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳುವುದು ಅರ್ಥಪೂರ್ಣ ರಾಜ್ಯೋತ್ಸವವಾದೀತು!

ಪೋಸ್ಟ್ ಹಂಚಿಕೊಳ್ಳಿ:

ನಿರಂಜನಾರಾಧ್ಯ ವಿ ಪಿ
ನಿರಂಜನಾರಾಧ್ಯ ವಿ ಪಿ
ಅಭಿವೃದ್ಧಿ ಶಿಕ್ಷಣ ತಜ್ಞ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...