ಚುನಾವಣೆ ಬಳಿಕ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಕೆಎಸ್‌ಇಎಬಿ

Date:

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಣೆ ದಿನದ ಬಗ್ಗೆ ಹಲವೆಡೆ ಗೊಂದಲ ವ್ಯಕ್ತವಾಗಿದ್ದು, ಗೊಂದಲಗಳಿಗೆ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ತೆರೆ ಎಳೆದಿದೆ. ಮೇ.10ರ ರಾಜ್ಯ ವಿಧಾನಸಭಾ ಚುನಾವಣೆ ನಂತರವೇ ಫಲಿತಾಂಶ ಪ್ರಕಟ ಎಂದು ಸ್ಪಷ್ಟ ಪಡಿಸಿದೆ.  

ನೀರಿಕ್ಷೆಗೂ ಮುನ್ನವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದಂತೆ, ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಣೆಯ ದಿನವನ್ನು ವಿದ್ಯಾರ್ಥಿಗಳು ಕಾತುರತೆಯಿಂದ ಕಾಯುತ್ತಿದ್ದಾರೆ. ಫಲಿತಾಂಶ ಪ್ರಕಟಣೆಯ ದಿನದ ಬಗ್ಗೆ ಊಹಾಪೋಹ ಹೆಚ್ಚಾಗಿದೆ. ಹೀಗಾಗಿ, ಕೆಎಸ್‌ಇಎಬಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.

ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಮೌಲ್ಯಮಾಪನದ ನಂತರದ ಕಾರ್ಯ ಪ್ರಗತಿಯಲ್ಲಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಲೆಗಳನ್ನು ಮತಗಟ್ಟೆಗಳಾಗಿ ಗುರುತಿಸಿರುವುದು ಮತ್ತು ಶಿಕ್ಷಕರು ಚುನಾವಣೆ ಕೆಲಸದಲ್ಲಿ ತೊಡಗಿರುವುದರಿಂದ, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕಾಯಬೇಕಾಗಿದೆ. ಫಲಿತಾಂಶ ಸಿದ್ಧವಾಗಿದ್ದರೂ ಚುನಾವಣೆ ಪೂರ್ಣಗೊಳ್ಳುವವರೆಗೂ ಫಲಿತಾಂಶ ಪ್ರಕಟವಾಗುವುದಿಲ್ಲ ಎಂದು ಕೆಎಸ್‌ಇಎಬಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ.10ರಂದು ಮತದಾನ ಮತ್ತು ಮೇ.13ರೊಳಗೆ ಮತ ಎಣಿಕೆ ಪೂರ್ಣಗೊಳ್ಳುತ್ತದೆ. ಈ ಮಧ್ಯೆ ಮೇ.11 ಅಥವಾ 12 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಟವಾಗಬಹುದು. ಮೇ.13ರ ನಂತರವೂ ಪ್ರಕಟವಾಗಬಹುದು ಇನ್ನೂ ಸ್ಪಷ್ಟ ದಿನಾಂಕ ನಿಗದಿಯಾಗಿಲ್ಲ ಎನ್ನಲಾಗಿದೆ.

ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಮಾರ್ಚ್ 31ರಿಂದ ಏ.15ರವರೆಗೆ 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಎಲ್‌ಕೆಜಿ ಪ್ರವೇಶ | ನಾಲ್ಕು ವರ್ಷ ವಯಸ್ಸು ಕಡ್ಡಾಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...