ಒಂದು ನಿಮಿಷದ ಓದು | ಏ.25ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ?

Date:

2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಯಾವುದೇ ಅಡೆ-ತಡೆಯಿಲ್ಲದೆ ನಡೆದಿದೆ. ಈಗಾಗಲೇ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು, ಏ.25ರ ವೇಳೆಗೆ ಪಲಿತಾಂಶ ಪ್ರಕಟಿಸಲಾಗುತ್ತದೆ ಎಂದು ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಏಪ್ರಿಲ್ 5ರಿಂದ ಮೌಲ್ಯಮಾಪನ ಕಾರ್ಯವು ಆರಂಭವಾಗಿದ್ದು, ಮೇ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಈ ಹಿಂದೆ ಹೇಳಿದ್ದರು. ಅದರಂತೆ ಪೂರಕ ತಯಾರಿ ನಡೆಸಲಾಗಿತ್ತು. ಇದೀಗ, ಏಪ್ರಿಲ್ ಮೂರನೇ ವಾರ ಅಂದರೆ, ಇದೇ ತಿಂಗಳ 25 ರಂದು ಫಲಿತಾಂಶ ಪ್ರಕಟಣೆಯಾಗುವ ಸಾಧ್ಯತೆಯಿದೆ.

ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಏಪ್ರಿಲ್ ಮೂರನೇ ವಾರದ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವಿತೀಯ ಪಿಯುಸಿ ಫಲಿತಾಂಶ ಪರಿಶೀಲಿಸಲು www.karresults.nic.in ಅಥವಾ https://kseab.karnataka.gov.in/ ಲಿಂಕ್ ಬಳಸಬಹುದು ಎಂದು ಮಂಡಳಿ ಹೇಳಿದೆ.

ಈ ಬಾರಿಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಾಜ್ಯಾದ್ಯಾಂತ ಸುಮಾರು 7,26,195 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಸುಮಾರು 1,109 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೇ ಮಾಡಿ ಮುಗಿಸಿದೆ.

ಈ ಸುದ್ದಿ ಓದಿದ್ದೀರಾ?:ಒಂದು ನಿಮಿಷದ ಓದು | ಟೊಫೆಲ್ ಪರೀಕ್ಷೆಯ ಅವಧಿ ಕಡಿತ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...