ದ್ವಿತೀಯ PUC ಪರೀಕ್ಷೆ-1 | ಫೇಲ್‌ ಆದ ವಿದ್ಯಾರ್ಥಿಗಳಿಗೂ CET ಬರೆಯಲು ಅವಕಾಶ

Date:

ರಾಜ್ಯದಲ್ಲಿ ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣಕ್ಕಾಗಿನ ಸಿಇಟಿ ಪರೀಕ್ಷೆಗಳು ಕೂಡ ನಡೆದಿವೆ. ಈ ಸಿಇಟಿ ಪರೀಕ್ಷೆಗಳನ್ನು ಬರೆಯಲು ಪಿಯುಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಪಿಯುಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ-2ಅನ್ನು ಬರೆದು ಉತ್ತೀರ್ಣರಾಗಬಹುದು. ಹೀಗಾಗಿ, ಪರೀಕ್ಷೆ-1ರಲ್ಲಿ ಫೇಲ್‌ ಆದ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ. ಸಿಇಟಿಯಲ್ಲಿ ಉತ್ತೀರ್ಣರಾಗಿ, ಪರೀಕ್ಷೆ-2ರಲ್ಲಿ ತೇರ್ಗಡೆ ಹೊಂದಿದವರು ಮುಂದಿನ ಉನ್ನತ ಶಿಕ್ಷಣಕ್ಕೆ ತೆರಳಲು ಸಹಾಯವಾಗುತ್ತದೆ. ಇದರಿಂದ, ಒಂದು ವರ್ಷ ಅವಧಿಯ ಕಾಯುವಿಕೆ ತಪ್ಪುತ್ತದೆ” ಎಂದು ತಿಳಿಸಿದ್ದಾರೆ.

“ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿ, ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳ ಪೈಕಿ 92.4%ರಷ್ಟು ವಿದ್ಯಾರ್ಥಿಗಳು ಸಿಇಟಿ ಬರೆಯಲು ಅರ್ಹರಾಗಿದ್ದಾರೆ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಒಟ್ಟು 1,69,353 ವಿದ್ಯಾರ್ಥಿಗಳು ಈಗ ಎರಡನೇ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ-2 ಏಪ್ರಿಲ್ 24 ರಿಂದ ಮೇ 8ರವರೆಗೆ ನಡೆಯಲಿದೆ. ಈ ಪರೀಕ್ಷೆಯ ಫಲಿತಾಂಶವನ್ನು ಸಿಇಟಿ ಫಲಿತಾಂಶಕ್ಕೂ ಮುನ್ನವೇ ಪ್ರಕಟಿಸಲಾಗುತ್ತದೆ. ಇದರಿಂದ, ವಿದ್ಯಾರ್ಥಿಗಳು ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲೇ ಅರ್ಹತೆ ಪಡೆಯಲು ಸಾಧ್ಯವಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆಗಳು ನಡೆದಿವೆ. ಸಿಇಟಿಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಪೈಕಿ 94.20% ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...