ಆಘಾತಕಾರಿ ಸಂಗತಿ | ದ್ವಿತೀಯ ಪಿಯುಸಿಯಲ್ಲಿ ಫೇಲ್‌; ಐವರು ವಿದ್ಯಾರ್ಥಿಗಳು ಆತ್ಮಹತ್ಯೆ

Date:

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶದಿಂದ ತೃಪ್ತಿ ಇಲ್ಲದವರು ಇನ್ನೂ ಎರಡು ಬಾರಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ಆದಾಗ್ಯೂ, ಪರೀಕ್ಷೆಯಲ್ಲಿ ಫೇಲ್‌ ಆಗಿ, ಮನನೊಂದ ಐವರು ವಿದ್ಯಾರ್ಥಿಗಳು ರಾಜ್ಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೈಸೂರು ಜಿಲ್ಲೆಯ ಐಶ್ವರ್ಯ, ದಾವಣಗೆರೆಯ ಕೃಪಾ, ಹಾವೇರಿಯ ಕಾವ್ಯ ಬಸಪ್ಪ ಲಮಾಣಿ, ಬಳ್ಳಾರಿಯ ವಿಜಯಲಕ್ಷ್ಮಿ ಹಾಗೂ ಬೆಂಗಳೂರಿನ 17 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯ ಒಂಟಿಕೊಪ್ಪಲು ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿನಿ ಐಶ್ವರ್ಯಾ ಅವರು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣಗೆರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕೃಪಾ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವಿಜ್ಞಾನ ಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆದರೆ, ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಅಗಸನೂರು ಎಂಬಲ್ಲಿ ವಿಜಯಲಕ್ಷ್ಮಿ ಸಿರಗುಪ್ಪ ಎಂಬಾಕೆ ಕೂಡ ಫೇಲ್‌ ಆಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿಯ ಹಂಸಬಾವಿ ಪ್ರದೇಶದ ವಿದ್ಯಾರ್ಥಿನಿ ಕಾವ್ಯ ಬಸಪ್ಪ ಲಮಾಣಿ ಕೂಡ ಪರೀಕ್ಷೆಯಲ್ಲಿ ಅನುತ್ತೀರ್ಣದ್ದರು. ಆಕೆಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು, ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ, ಫೇಲ್‌ ಆಗುವ ಭಯದಲ್ಲಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರಂನಲ್ಲಿ ಅಪಾರ್ಟ್‌ಮೆಂಟ್ ಮೇಲಿದ್ದ ಬಿದ್ದು 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳವಾರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದು, ಪ್ರಥಮ ಸ್ಥಾನದಲ್ಲಿದೆ. ಯಥಾಪ್ರಕಾರ, ಯಾದಗಿರಿ ಜಿಲ್ಲೆಯು ಕಡೆಯ ಸ್ಥಾನದಲ್ಲಿದೆ. ಕಲ್ಯಾಣ ಕರ್ನಾಟಕ ಭಾಗದ ಹೆಚ್ಚಿನ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹಿಂದುಳಿದಿದ್ದಾರೆ. ಅವರ ಶಿಕ್ಷಣ ಗುಣಮಟ್ಟವನ್ನು ಸುಧಾರಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾದ ತುರ್ತು ಅಗತ್ಯವಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...