ನಿರುದ್ಯೋಗಿ ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

Date:

  • ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಅವಕಾಶ
  • ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023

2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ಬೆಂಗಳೂರಿನಲ್ಲಿ ಸ್ಟೈಪೆಂಡ್ ಮೂಲಕ ಊಟ -ವಸತಿಯೊಂದಿಗೆ ವಿವಿಧ ಕ್ಷೇತ್ರಗಳ ಕೌಶಲ್ಯಗಳ ತರಬೇತಿಯನ್ನು, ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಗಳನ್ನು ಪಡೆಯಲು ಆಸಕ್ತಿ ಇರುವವರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಈ ತರಬೇತಿಗಳನ್ನು ಪಡೆಯಲು ಅರ್ಹರಾಗಿದ್ದಾರೆ.

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ಅಭ್ಯರ್ಥಿಯ ಕುಟುಂಬ ವಾರ್ಷಿಕ ಆದಾಯವು ರೂ.8.00 ಲಕ್ಷಗಳನ್ನು ಮೀರಿರಬಾರದು.
ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಾಗಿರಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಐಎಎಸ್-ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಇಲಾಖೆಯ https://dom.karnataka.gov.in ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

Minority Dept

ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಅಂಕಪಟ್ಟಿಗಳು, ಆಧಾರ್ ಕಾರ್ಡ್‌, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವೈಯಕ್ತಿಕ ವಿವರಗಳು ಬೇಕಾಗುತ್ತವೆ. ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. ಇತರೆ ಯಾವುದೇ ಮಾರ್ಗದ ಮೂಲಕ ಅರ್ಜಿಗೆ ಅವಕಾಶ ಇಲ್ಲ. ಆದರೆ ಹೆಚ್ಚಿನ ಮಾಹಿತಿಗಳನ್ನು ಆಯಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಛೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...