SSLC | ಪತ್ರಿಕೆ ಮರು ಮೌಲ್ಯಮಾಪನ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

Date:

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಿಂದ ಅಸಮಾಧಾನಗೊಂಡಿದ್ದ ವಿದ್ಯಾರ್ಥಿ ತನ್ನ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದರು. ಇದೀಗ, ಮರು ಮೌಲ್ಯಮಾಪನದ ಫಲಿತಾಂಶ ಬಂದಿದ್ದು, ಪರಿಷ್ಕೃತ ಫಲಿತಾಂಶದೊಂದಿಗೆ ಆತ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ್ದಾರೆ.

ಇತ್ತೀಚೆಗಷ್ಟೇ ಎಸ್‌ಎಸ್‌ಎಸ್‌ಸಿ ಫಲಿತಾಂಶ ಪ್ರಕಟವಾಗಿತ್ತು. 24 ಮಂದಿ 625 ಅಂಕಗಳಲ್ಲಿ 625 ಅಂಕಗಳನ್ನೂ ಗಳಿಸಿದ್ದರು. ಇದೀಗ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಯ ಅಂಕಗಳೂ 625ಕ್ಕೆ ಏರಿಕೆಯಾಗಿವೆ. ಈ ಬಾರಿಯ ಪರೀಕ್ಷೆಯಲ್ಲಿ ‘ಔಟ್‌ ಆಫ್‌ ಔಟ್‌’ ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ 25ಕ್ಕೆ ಏರಿದೆ.

ಮೈಸೂರಿನ ‘ಶ್ರೀ ರಾಮಕೃಷ್ಣ ವಿದ್ಯಾಲಯ’ದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಡಿಕೇರಿಯ ತನ್ಮಯಿ ಎಂ.ಎನ್‌ ಎಂಬ ವಿದ್ಯಾರ್ಥಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಅವರು ಮೂಲ ಫಲಿತಾಂಶದಲ್ಲಿ 622 ಅಂಕಗಳನ್ನು ಗಳಿಸಿದ್ದರು. ಆದರೆ, ಆ ಅಂಕಗಳಿಂದ ಅಸಮಾಧಾನಗೊಂಡಿದ್ದ ತನ್ಮಯಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಅವರ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದೆ. ಅವರ ಅಂಕ 625ಕ್ಕೆ 625 ಬಂದಿದೆ. ಆ ಮೂಲಕ, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ 24 ವಿದ್ಯಾರ್ಥಿಗಳೊಂದಿಗೆ ತನ್ಮಯಿ ಕೂಡ ಸೇರಿಕೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ಪಹಲ್ಗಾಮ್‌ ದಾಳಿಗೆ ಒಂದು ತಿಂಗಳು; ಸಿಂಧೂರ ಅಳಿಸಿದ ಹಂತಕರನ್ನು ಹಿಡಿದರೇ ಮೋದಿ?

ಇನ್ನು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಒಟ್ಟು 8,42,173 ವಿದ್ಯಾರ್ಥಿಗಳು ಬರೆದಿದ್ದರು. ಅವರಲ್ಲಿ, 5,24,984 (64%) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಶೇ.74ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು, ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.

ಮುಖ್ಯವಾಗಿ, ಮೇ 26ರಿಂದ ಜೂನ್ 2ರವರೆಗೆ ಎಸ್​ಎಸ್​ಎಲ್​​ಸಿ ಎರಡನೇ ಪರೀಕ್ಷೆ ನಡೆಯಲಿದೆ. ಒಂದು ವೇಳೆ ಅದರಲ್ಲೂ ಅನುತ್ತೀರ್ಣರಾದವರು ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶವಿದ್ದು, ಮೂರನೇ ಪರೀಕ್ಷೆಯು ಜೂನ್ 23ರಿಂದ 30ರವರೆಗೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...