ಗ್ರಾಮೀಣ ಕರ್ನಾಟಕದ ವಿದ್ಯಾರ್ಥಿಗಳು ಗಣಿತದಲ್ಲಿ ಹಿಂದುಳಿದಿದ್ದಾರೆ: ಸಮೀಕ್ಷೆ

Date:

ಕರ್ನಾಟಕದ ಗ್ರಾಮೀಣ ಭಾಗದ 4, 5 ಮತ್ತು 6ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳು ಗಣಿತದ ಲೆಕ್ಕದಲ್ಲಿ ಹಿಂದುಳಿದಿದ್ದಾರೆ. ಸಂಕಲನ, ವ್ಯವಕಲನ, ಗುಣಾಕಾರ, ಭಾಗಾಕಾರ ಮಾಡಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ.

ಬೆಂಗಳೂರಿನ ಅಕ್ಷರ ಫೌಂಡೇಶನ್‌ ರಾಜ್ಯಾದ್ಯಂತ 2,625 ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ 2022ರ ನವೆಂಬರ್‌ನಿಂದ 2023ರ ಮಾರ್ಚ್‌ವರೆಗೆ ಸಮೀಕ್ಷೆ ನಡೆಸಿದೆ. 4ರಿಂದ 6ನೇ ತರಗತಿ ವರೆಗಿನ 3,12,550 ಮಕ್ಕಳನ್ನು ಸಮೀಕ್ಷೆಗೆ ಒಳಪಡಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಪ್ರಸ್ತುತ ತರಗತಿಗಳಿಗಿಂತ ಹಿಂದಿನ ತರಗತಿಯ ವಿಷಯಗಳ ಮೇಲೆ ಸಮೀಕ್ಷೆ ನಡೆಸಲಾಗಿದೆ. ಆದರೆ, ವಿದ್ಯಾರ್ಥಿಗಳು ಅವುಗಳಲ್ಲಿಯೂ ಹಿಂದುಳಿದಿದ್ದಾರೆ ಎಂಬುದನ್ನು ಸಮೀಕ್ಷೆ ಕಂಡುಕೊಂಡಿದೆ.

“ಕೊರೊನಾ ನಂತರದಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಹೆಚ್ಚುತ್ತಿದ್ದರೂ, ವಿದ್ಯಾರ್ಥಿಗಳ ಕಲಿಕೆಯಲ್ಲಿ ಭಾರೀ ಅತಂರ ಕಂಡುಬರುತ್ತಿದೆ. ಇದು ಗಂಭೀರ ಸಮಸ್ಯೆಯನ್ನು ಎತ್ತಿ ತೋರಿಸಿದೆ. ಚಿತ್ರದುರ್ಗ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳು ಅತ್ಯಂತ ಕಳಪೆ ಪ್ರದರ್ಶನ ನೀಡಿವೆ. ಈ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಸರಾಸರಿ ಅಂಕವನ್ನು ಗಳಿಸಿಲು ವಿಫಲರಾಗಿದ್ದಾರೆ” ಎಂದು ಸಮೀಕ್ಷಾ ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

4ನೇ ತರಗತಿಯಲ್ಲಿ 1,03,962ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಹೊಂದಿಸಲು 3ನೇ ತರಗತಿಯ ಶಾಲಾ ಪಠ್ಯಕ್ರಮವನ್ನು ಬಳಸಲಾಗಿತ್ತು. ಆದಾಗ್ಯೂ, ಆ ಮಕ್ಕಳಲ್ಲಿ ಕೇವಲ 40% ಮಾತ್ರ ಗುಣಾಕಾರ ಮತ್ತು ಭಾಗಾಕಾರ ಲೆಕ್ಕವನ್ನು ಸರಿಪಡಿಸುವ ಸಾಮರ್ಥ್ಯ ಹೊಂದಿದ್ದಾರೆ. 5 ಮತ್ತು 6ನೇ ತರಗತಿಯ ಹೆಚ್ಚಿನ ವಿದ್ಯಾರ್ಥಿಗಳು ಕೂಡ ಗಣಿತದಲ್ಲಿ ಹಿಂದುಳಿದಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಸಮೀಕ್ಷೆಯಲ್ಲಿ ಬೆಳಗಾವಿ, ಮಂಡ್ಯ, ತುಮಕೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಪ್ರದರ್ಶನ ಕಂಡುಬಂದಿದೆ. ಬಳ್ಳಾರಿ, ಚಿತ್ರದುರ್ಗ ಮತ್ತು ಕಲಬುರಗಿ ಜಿಲ್ಲೆಗಳು ಹಿಂದುಳಿದಿವೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ?: ಕನಿಷ್ಠ ಜನರ ಈ ಪ್ರಶ್ನೆಗಳಿಗಾದರೂ ಉತ್ತರ ನೀಡುವರೇ ಪ್ರಧಾನಿ ಮೋದಿ?

ಅಕ್ಷರ ಫೌಂಡೇಶನ್‌ನ ಅಧ್ಯಕ್ಷ ಅಶೋಕ್ ಕಾಮತ್ ಮಾತನಾಡಿ, “ಗಣಿತವು ಪ್ರತಿಯೊಬ್ಬರಿಗೂ ಪ್ರಮುಖ ವಿಶ್ಲೇಷಣಾತ್ಮಕ ಸಾಧನವಾಗಿದೆ. ಗಣಿತ ಗೊತ್ತಿಲ್ಲದ ಮಕ್ಕಳು ಬಹಳಷ್ಟು ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ. ಕಲಿಕೆಯನ್ನು ಸುಲಭಗೊಳಿಸಬಲ್ಲ ಶಾಲಾ ವಾತಾವರಣವನ್ನು ನಿರ್ಮಿಸುವ ಕಡೆಗೆ ನಾವು ಹೆಚ್ಚಿನ ಗಮನ ಕೊಡಬೇಕು. ಫಲಿತಾಂಶದ ಮೇಲೆ ಕೇಂದ್ರೀಕರಿಸಬಾರದು” ಎಂದು ಹೇಳಿದ್ದಾರೆ.

“ಗಣಿತವನ್ನು ಕಲಿಸುವ ಶಿಕ್ಷಕರಿಗೂ ಬಹಳಷ್ಟು ಜನರು ಭಯಪಡುತ್ತಾರೆ. ಪ್ರಸ್ತುತ, ಮಕ್ಕಳಿಗೆ ಪಠ್ಯಪುಸ್ತಕ ಜ್ಞಾನವನ್ನು ವರ್ಗಾಯಿಸಲು ಉತ್ತಮವಾದ ಯಾವುದೇ ಪರಿಣಾಮಕಾರಿ ವಿಧಾನಗಳಿಲ್ಲ. ಗಣಿತವನ್ನು ಉತ್ತಮವಾಗಿ ಕಲಿಸಲು ಪ್ರಾಥಮಿಕವಾಗಿ ನಮಗೆ ಮಣಿಗಳು, ಅಬ್ಯಾಕಸ್, ಬೇಸ್ 10 ಬ್ಲಾಕ್‌ಗಳಂತಹ ಪರಿಣಾಮಕಾರಿ ಸಾಧನಗಳು ಬೇಕಾಗುತ್ತವೆ; ಜೊತೆಗೆ ಮೌಲ್ಯದ ಪಟ್ಟಿಗಳು, ಭಿನ್ನರಾಶಿ ಪಟ್ಟಿಗಳು ಕಲಿಕೆಯನ್ನು ಸುಲಭಗೊಳಿಸುತ್ತವೆ. ಮಾತ್ರವಲ್ಲದೆ, ಮೋಜಿನಿಂದ ಕಲಿಯಲು ನೆರವಾಗುತ್ತವೆ” ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...