ಜೆಇಇ ಮುಖ್ಯ ಪರೀಕ್ಷೆ: ಬೆಂಗಳೂರಿನ ಮೂವರು ವಿದ್ಯಾರ್ಥಿಗಳಿಗೆ ಶೇ.100 ಅಂಕ

Date:

ದೇಶದಾದ್ಯಂತ ನಡೆದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ರಾಜ್ಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.

ಐಐಟಿ ಸೇರಿದಂತೆ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಈ ಪರೀಕ್ಷೆ ನಡೆಸಿತ್ತು. ಜೆಇಇ ಮುಖ್ಯ ಪರೀಕ್ಷೆಯಲ್ಲಿ ಕರ್ನಾಟಕದ ಮೂವರು ವಿದ್ಯಾರ್ಥಿಗಳು ನೂರಕ್ಕೆ ನೂರು (ಶೇ.100) ಅಂಕ ಗಳಿಸಿದ್ದಾರೆ.

ಜಯನಗರದ ಅಲೆನ್ ಕರಿಯರ್ ಇನ್‌ಸ್ಟಿಟ್ಯೂಟ್‌ನ ವಿದ್ಯಾರ್ಥಿಗಳಾದ ತನಿಶ್ ಸಿಂಗ್ ಖುರಾನಾ, ಅಖಿಲ ಎಂಬವರು ಭಾರತದಲ್ಲೇ 22ನೇ ಸ್ಥಾನಗಳಿಸಿದ್ದಾರೆ. ರಿಧಿ ಕಮಲೇಶ್ ಕುಮಾರ್, ಮಹೇಶ್ವರಿ ಹಾಗೂ ನಿವೇದ್ ಅಯಿಲ್ಲಿತ್ ನಂಬಿಯಾರ್ ಎಂಬ ವಿದ್ಯಾರ್ಥಿಗಳು ದೇಶದಲ್ಲೇ 23ನೇ ಸ್ಥಾನ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಇಇ ಮುಖ್ಯ ಪರೀಕ್ಷೆಯ ನಂತರ ನಡೆಯುವ ಜೆಇಇ ಅಡ್ವಾನ್ಸ್ 2023 ಪರೀಕ್ಷೆ ಜೂನ್ 4 ರಂದು ನಡೆಯಲಿದೆ. ಪರೀಕ್ಷೆಯ ನೋಂದಣಿ ಪ್ರಕ್ರಿಯೆಯು ಏಪ್ರಿಲ್ 30 ರಿಂದ ಪ್ರಾರಂಭವಾಗಲಿದೆ ಎಂದು ಐಐಟಿ ಗುವಾಹಟಿ ಈಗಾಗಲೇ ಪ್ರಕಟಿಸಿದೆ. ಪ್ರತಿ ವರ್ಷ ಅಡ್ವಾನ್ಸ್ಡ್ ಬರೆಯಲು ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯು ಮುಖ್ಯ ಶ್ರೇಣಿಯ ಫಲಿತಾಂಶದ ಮರುದಿನದಿಂದ ಪ್ರಾರಂಭವಾಗುತ್ತದೆ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇ.ಡಿ ದಾಳಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...