ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ‘ವೆಬ್‌ ಕಾಸ್ಟಿಂಗ್’; ಪ್ರಯೋಜನವೇನು?

Date:

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುವುದನ್ನು ತಡೆಯಲು ಶಿಕ್ಷಣ ಇಲಾಖೆ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಳೆದ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ‘ವೆಬ್ ಕಾಸ್ಟಿಂಗ್’ ವ್ಯವಸ್ಥೆಯನ್ನು ಬಳಸಲಾಗಿತ್ತು. ಇದೀಗ, ಅದೇ ವ್ಯವಸ್ಥೆಯನ್ನು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಯೂ ಅಳವಡಿಸಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (ಕೆಎಸ್‌ಇಎಬಿ) ನಿರ್ಧರಿಸಿದೆ.

ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡುವುದನ್ನು ತಡೆಯಲು ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆದು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ‘ವೆಬ್‌ ಕಾಸ್ಟಿಂಗ್’ ನೆರವಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಭಾವಿಸಿದೆ. ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ವ್ಯವಸ್ಥೆಯ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಇಲಾಖೆ ಹೇಳಿಕೊಂಡಿದೆ.

‘ವೆಬ್‌ ಕಾಸ್ಟಿಂಗ್‌’ ಅಂದರೆ, ಪರೀಕ್ಷಾ ಕೇಂದ್ರಗಳು ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ ಅಥವಾ ಸಿಟಿಟಿವಿ ಕ್ಯಾಮೆರಾಗಳಿರುವ ಶಾಲಾ-ಕಾಲೇಜುಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗುತ್ತದೆ. ವಿದ್ಯಾರ್ಥಿಗಳು ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ಬರೆಯುತ್ತಾರೆ. ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಗಳ ಚಲನ-ವಲನ, ನಕಲು ಮಾಡುತ್ತಿದ್ದಾರೆಯೇ, ಅವರಿಗೆ ನಕಲು ಮಾಡಲು ಯಾರಾದರೂ ಸಹಾಯ ಮಾಡುತ್ತಿದ್ದಾರೆ ಎಂಬುದನ್ನು ಕ್ಯಾಮೆರಾಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2025ರ ಮಾರ್ಚ್‌-ಏಪ್ರಿಲ್‌ನಲ್ಲಿ ದ್ವಿತೀಯ ಪಿಯುಸಿ ಬೋರ್ಡ್‌ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯಲ್ಲಿ ವೆಬ್‌ ಕಾಸ್ಟಿಂಗ್ ವ್ಯವಸ್ಥೆಯನ್ನು ಇಲಾಖೆ ಅಳವಡಿಸಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳಿಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಹೊಂದಿರುವ ಕಾಲೇಜುಗಳನ್ನು ಗುರುತಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾಗಳು ಇರುವ ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗಿದ್ದು, ಆ ಕಾಲೇಜುಗಳಿಗೆ ಕೆಎಸ್‌ಇಎಬಿ ಪತ್ರ ಬರೆದಿದೆ. ಸಿಸಿಟಿವಿ ಕ್ಯಾಮೆರಾಗಳ ಐಪಿ ಸಂಖ್ಯೆಯನ್ನು ಆಯಾ ಜಿಲ್ಲೆಗಳ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ನೀಡುವಂತೆ ಸೂಚಿಸಲಾಗಿದೆ. ನೇರ ದೃಶ್ಯಾವಳಿಗಳ ಮೂಲಕ ಉಪ ನಿರ್ದೇಶಕರು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿಯೇ ಪರೀಕ್ಷೆಯ ಮೇಲ್ವಿಚಾರಣೆ ಮಾಡಬಹುದು. ಜೊತೆಗೆ, ನಕಲು ಮಾಡುವುದನ್ನು ತಡೆಯಬಹುದು ಎಂದು ಅವರು ತಿಳಿಸಿದ್ದಾರೆ.

ವೆಬ್‌ ಕಾಸ್ಟಿಂಗ್‌ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಆತಂಕಕ್ಕೆ ಒಳಗಾಗಬಹುದು. ಹೀಗಾಗಿ, ವಿದ್ಯಾರ್ಥಿಗಳಿಗೆ ವ್ಯವಸ್ಥೆಯ ಕುರಿತು ಮಾಹಿತಿ ನೀಡಿ, ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ ಕಾಲೇಜುಗಳಿಗೆ ಕೆಎಸ್‌ಇಎಬಿ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...