ರಾಜ್ಯದ 224 ಶಾಸಕರಲ್ಲಿ 122 ಮಂದಿ ಕ್ರಿಮಿನಲ್‌ ಹಿನ್ನೆಲೆ ಉಳ್ಳವರು!

Date:

ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ಮುಖ್ಯಮಂತ್ರಿ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಹಗ್ಗಜಗ್ಗಾಟ ನಡೆಸುತ್ತಿದ್ದರೆ, ಕೆಲವರು ಮಂತ್ರಿಗಿರಿ ತಮಗೇಬೇಕೆಂದು ಹೇಳುತ್ತಾ ಓಡಾಡುತ್ತಿದ್ದಾರೆ. ಇದೆಲ್ಲದರ ನಡುವೆ, ವಿಧಾನಸೌಧ ಪ್ರವೇಶಿಸಿರುವ ಶಾಸಕರಲ್ಲಿ ಕ್ರಿಮಿನಲ್ ಹಿನ್ನೆಲೆಯವರು ಎಷ್ಟು ಮಂದಿಯಿದ್ದಾರೆ ಎಂದು ನೋಡಿದರೆ, ಬರೋಬ್ಬರಿ 55%ರಷ್ಟು ಅಂದರೆ, 122 ಮಂದಿ ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರೆಲ್ಲರೂ ತಮ್ಮ ನಾಮಪತ್ರ ಸಲ್ಲಿಕೆಯ ವೇಳೆ, ಬಹಿರಂಗ ಪಡಿಸಿದ್ದಾರೆ.

ಎಲ್ಲ ಶಾಸಕ ಹಿನ್ನಲೆಗಳ ಕುರಿತು ಅಧ್ಯಯನ ನಡೆಸಿರುವ ಅಸೋಸಿಯೇಷನ್‌ ಫಾರ್‌ ಡೆಮೊಕ್ರಟಿಕ್‌ ರಿಫಾಮ್ಸ್‌ರ್ (ಎಡಿಆರ್‌) ವರದಿ ಬಿಡುಗಡೆ ಮಾಡಿದೆ. “ರಾಜ್ಯದ ಒಟ್ಟು 224 ಶಾಸಕರಲ್ಲಿ 122 ಮಂದಿ ಕ್ರಿಮಿನಲ್‌ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಅವರಲ್ಲಿ, 71 ಮಂದಿ ವಿರುದ್ಧ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಿವೆ ಎಂದು ಹೇಳಿದೆ.

ಒಬ್ಬರು ಕೊಲೆ ಪ್ರಕರಣವನ್ನು ಎದುರಿಸುತ್ತಿದ್ದರೆ, ಮೂವರು ಕೊಲೆ ಯತ್ನ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ ಅಥವಾ ಅಪರಾಧಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಏಳು ಮಂದಿ ಎದುರಿಸುತ್ತಿದ್ದಾರೆ. ಅವರಲ್ಲಿ ಒಬ್ಬರು ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಓದಿದ್ದು ಪಿಯುಸಿ, ವೃತ್ತಿ ಮೆಡಿಕಲ್ ಮೇಷ್ಟ್ರು; ‘ದೈತ್ಯ ಸಂಹಾರಿ’ ಪ್ರದೀಪ್ ಈಶ್ವರ್ ನಿಜಕ್ಕೂ ಎಂಥವರು?

122 ಮಂದಿ ಕ್ರಿಮಿನಲ್‌ ಆರೋಪ ಉಳ್ಳವರ ಪೈಕಿ, 78 ಮಂದಿ ಕಾಂಗ್ರೆಸ್, 34 ಮಂದಿ ಬಿಜೆಪಿ, 9 ಮಂದಿ ಜೆಡಿಎಸ್‌ ಶಾಸಕರಾಗಿದ್ದಾರೆ. ಕೆಆರ್‌ಪಿಪಿಯಿಂದ ಸ್ಪರ್ಧಿಸಿ ಗೆದ್ದಿರುವ ಜನಾರ್ದನ ರೆಡ್ಡಿ ಕೂಡ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಪ್ರಮುಖ ಮೂರು ಪಕ್ಷಗಳ 55%ರಷ್ಟು ಶಾಸಕರು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾರೆ.

2018ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಶಾಕರಿಗೆ ಹೋಲಿಸಿದರೆ, ಈ ವರ್ಷ ಅಧಿಕ ಮಂದಿ ಕ್ರಿಮಿನಲ್‌ ಪ್ರಕರಣವುಳ್ಳವರು ವಿಧಾನಸೌಧಕ್ಕೆ ಪ್ರವೇಶಿಸಿದ್ದಾರೆ. 2018ರಲ್ಲಿ 77 ಮಂದಿ ಶಾಸಕರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದೇವೆಂದು ಘೋಷಿಸಿದ್ದರು. ಅವರಲ್ಲಿ, 54 ಮಂದಿ ಗಂಭೀರ ಸ್ವರೂಪದ ಪ್ರಕರಣಗಳನ್ನು ಉಳ್ಳವರಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...