ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳದ ಭರವಸೆ ನೀಡಿದ ಪ್ರಿಯಾಂಕಾ ಗಾಂಧಿ

Date:

  • ಅಂಗನವಾಡಿ ಕಾರ್ಯಕರ್ತೆಯರ ವೇತನ ₹15,000ಕ್ಕೆ ಹೆಚ್ಚಳ
  • ಬೆಳಗಾವಿಯ ಖಾನಾಪುರದಲ್ಲಿ ಭರವಸೆ ನೀಡಿದ ಪ್ರಿಯಾಂಕ ಗಾಂಧಿ

ಆಶಾ, ಬಿಸಿಯೂಟ, ಮಿನಿ ಅಂಗನವಾಡಿ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವುದಾಗಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಿಯಾಂಕ ಗಾಂಧಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಬೆಳಗಾವಿಯ ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.

“ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹11,500 ದಿಂದ ₹15,000ಕ್ಕೆ, ಸಹಾಯಕಿಯರಿಗೆ ₹7,500 ದಿಂದ ₹10,000 ಕ್ಕೆ ಹೆಚ್ಚಿಸಲಾಗುವುದು” ಎಂದು ಪ್ರಿಯಾಂಕ ಗಾಂಧಿ ವಾದ್ರಾ ವಾಗ್ದಾನ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಶಾ ಕಾರ್ಯಕರ್ತೆಯರ ಗೌರವಧನವನ್ನು ಕಾಂಗ್ರೆಸ್ ₹5,000 ದಿಂದ ₹8,000ಕ್ಕೆ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು ₹3,700 ದಿಂದ ₹5,000ಕ್ಕೆ ಹೆಚ್ಚಿಸಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಜೀವನವಿಡಿ ಕೆಲಸ ಮಾಡಿ ನಿವೃತ್ತಿ ಹೊಂದಿದ ಅಥವಾ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಪರಿಹಾರ ಧನ ಘೋಷಣೆ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ₹3 ಲಕ್ಷ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ₹2 ಲಕ್ಷ ವಿಶೇಷ ಪರಿಹಾರ ಧನ ನೀಡುವ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...