ಹುಟ್ಟೂರಿನಲ್ಲಿ ಕುಟುಂಬಸ್ಥರ ಜೊತೆ ಮತ ಚಲಾಯಿಸಿದ ಡಾಲಿ ಧನಂಜಯ

Date:

ಹುಟ್ಟೂರು ಕಾಳೇನಹಳ್ಳಿಯಲ್ಲಿ ಮತ ಚಲಾಯಿಸಿದ ಧನಂಜಯ

ಮತ ಚಲಾಯಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿದ ನಟ

ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಬೆಳಗ್ಗೆಯಿಂದಲೇ ಆರಂಭಗೊಂಡಿದ್ದು, ಸ್ಯಾಂಡಲ್‌ವುಡ್‌ನ ಹಲವು ನಟ, ನಟಿಯರು ಮತಗಟ್ಟೆಗಳಿಗೆ ತೆರಳಿ ತಮ್ಮ ಮತ ಚಲಾಯಿಸಿದ್ದಾರೆ. ಸ್ಯಾಂಡಲ್‌ವುಡ್‌ ತಾರೆಯರ ಪೈಕಿ ನಟ ಡಾಲಿ ಧನಂಜಯ ಅವರ ಮತಚಲಾವಣೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಧನಂಜಯ ಬಿಡುವು ಮಾಡಿಕೊಂಡು ಅರಸಿಕೆರೆ ತಾಲ್ಲೂಕಿನ ತಮ್ಮ ಹುಟ್ಟೂರು ಕಾಳೇನಹಳ್ಳಿಗೆ ತೆರಳಿ ಕುಟುಂಬಸ್ಥರ ಜೊತೆಗೆ ಮತದಾನ ಮಾಡಿದ್ದಾರೆ. ವಯಸ್ಸಾದ ತಮ್ಮ ಅಜ್ಜಿಯ ಕೈ ಹಿಡಿದುಕೊಂಡು ಮತಗಟ್ಟೆ ಕರೆದುಕೊಂಡು ಹೋಗಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಧನಂಜಯ ಅವರ ವಿಶೇಷ ಚೇತನ ಸಹೋದರಿ ಮತ್ತು ಕುಟುಂಬದ ಉಳಿದವರು ಕೂಡ ಜೊತೆಯಾಗಿದ್ದಾರೆ.

ತಾವು ಕುಟುಂಬದೊಂದಿಗೆ ತೆರಳಿ ಮತದಾನ ಮಾಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಧನಂಜಯ, “ನಾವೆಲ್ಲ ಓಟ್‌ ಮಾಡಿದ್ವಿ, ನೀವು ವೋಡ್‌ ಮಾಡಿ” ಎಂದು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

ಧನಂಜಯ ಮತ ಚಲಾವಣೆಗೆ ಕರೆ ನೀಡಿ ಟ್ವೀಟ್‌ ಮಾಡುತ್ತಲೇ ಹಲವು ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, ತಾವು ಕೂಡ ಮತ ಚಲಾಯಿಸಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...