ಸುದೀಪ್‌ ಅಭಿಮಾನಿಯ ಹುಚ್ಚಾಟಕ್ಕೆ ಆಯತಪ್ಪಿ ಬಿದ್ದ ಸೋಮಣ್ಣ

Date:

  • ಚಾಮರಾಜನಗರ ಕ್ಷೇತ್ರದಲ್ಲಿ ಸೋಮಣ್ಣ ಪರ ಸುದೀಪ್‌ ರೋಡ್‌ ಶೋ
  • ಸುದೀಪ್‌ ಅಭಿಮಾನಿಗಳ ಮೇಲೆ ಮೂರನೇ ಬಾರಿಗೆ ಲಾಠಿ ಪ್ರಹಾರ

ಈ ಬಾರಿಯ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಗೆ ಬೆಂಬಲ ಘೋಷಿಸಿರುವ ನಟ ಕಿಚ್ಚ ಸುದೀಪ್‌ ಶುಕ್ರವಾರ ಚಾಮರಾಜನಗರಕ್ಕೆ ಭೇಟಿ ನೀಡಿದ್ದು, ಸಚಿವ ವಿ ಸೋಮಣ್ಣ ಪರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇದೇ ಪ್ರಚಾರದ ವೇಳೆ ಸುದೀಪ್‌ ಅಭಿಮಾನಿಯೊಬ್ಬ ಆಕಸ್ಮಿಕವಾಗಿ ಸೋಮಣ್ಣ ಅವರನ್ನು ಕಾರಿನ ಮೇಲಿಂದ ಬೀಳಿಸಿರುವ ಘಟನೆ ನಡೆದಿದೆ.

ಚಾಮರಾಜನಗರ ಕ್ಷೇತ್ರದ ಸಂತೇಮರಹಳ್ಳಿಯಲ್ಲಿ ಸುದೀಪ್‌ ಮತ್ತು ಸೋಮಣ್ಣ ಕಾರಿನ ಮೇಲೆ ನಿಂತು ರೋಡ್‌ ಶೋ ನಡೆಸುತ್ತಿದ್ದ ವೇಳೆ ಅಭಿಮಾನಿಯೊಬ್ಬ ಏಕಾಏಕಿಯಾಗಿ ಅವರಿದ್ದ ಕಾರಿನ ಮೇಲೇರಿ ಸುದೀಪ್‌ ಅವರ ಬಳಿ ಬಂದಿದ್ದಾನೆ. ಪಕ್ಕದಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ಕೆಳಕ್ಕಿಳಿಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಆಯತಪ್ಪಿದ ಆತ ಆಸರೆಗಾಗಿ ಸೋಮಣ್ಣನವರನ್ನು ಹಿಡಿದುಕೊಂಡಿದ್ದಾನೆ. ಆತ ಕೆಳಕ್ಕೆ ಬೀಳುತ್ತಲೇ ಸೋಮಣ್ಣ ಅವರು ಕೂಡ ನಿಯಂತ್ರಣ ಸಿಗದೆ ಕಾರಿನ ರೂಫ್ ಮೇಲೆ ಬಿದ್ದಿದ್ದಾರೆ. ಕೊನೆಗೆ ಸುದೀಪ್‌, ಸೋಮಣ್ಣನವರ ಕೈ ಹಿಡಿದು ಮೇಲಕ್ಕೆತ್ತಿದ್ದಾರೆ.

ಹುಚ್ಚಾಟ ಪ್ರದರ್ಶಿಸಿದ ಅಭಿಮಾನಿಯನ್ನು ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿಸದೆ ಅಮಾನುಷವಾಗಿ ಕಾರಿನ ಮೇಲಿಂದ ಕೆಳಕ್ಕೆ ನೂಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಭಿಮಾನಿಯ ಅತಿರೇಕಕ್ಕೆ ಸುದೀಪ್‌ ಸ್ಥಳದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತೇಮರಹಳ್ಳಿಯ ವೃತ್ತದ ಬಳಿ ಈ ಘಟನೆ ನಡೆದಿದ್ದು, ಸುದೀಪ್‌ ಅವರನ್ನು ನೋಡಲು ಮುಗಿಬಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಗುರುವಾರ ರಾಯಚೂರಿನಲ್ಲೂ ಸುದೀಪ್‌ ಅಭಿಮಾನಿಗಳ ಮೇಲೆ ಭದ್ರತಾ ಸಿಬ್ಬಂದಿಯಿಂದ ಲಾಠಿ ಪ್ರಹಾರ ನಡೆದಿತ್ತು. ವಾರದ ಹಿಂದೆ ಕೂಡ್ಲಿಗಿಯಲ್ಲಿ ಸುದೀಪ್‌ ಬಿಜೆಪಿ ಅಭ್ಯರ್ಥಿ ಪರ ರೋಡ್‌ ಶೋ ನಡೆಸಿದ್ದಾಗಲೂ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದರು.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...