ಅರಸೀಕೆರೆ | ಕೈ ತಪ್ಪಿದ ಬಿಜೆಪಿ ಟಿಕೆಟ್‌; ಜೆಡಿಎಸ್‌ನತ್ತ ಎನ್‌ ಆರ್‌ ಸಂತೋಷ್‌

Date:

  • ಜೆಡಿಎಸ್–ಕಾಂಗ್ರೆಸ್‌ ಸರ್ಕಾರ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂತೋಷ್‌
  • ಸಂತೋಷ್‌ ಅವರನ್ನು ಕಣಕ್ಕಿಳಿಸಲು ಒಪ್ಪದ ಎಚ್‌.ಡಿ ಕುಮಾರಸ್ವಾಮಿ

ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಎನ್‌.ಆರ್ ಸಂತೋಷ್‌ ಅವರಿಗೆ ಟಿಕೆಟ್‌ ಕೈತಪ್ಪಿದ್ದು, ಜಿ.ವಿ ಬಸವರಾಜು ಅವರಿಗೆ ಟಿಕೆಟ್‌ ನೀಡಲಾಗಿದೆ. ಕ್ಷೇತ್ರದಾದ್ಯಂತ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿಸಿಕೊಂಡಿದ್ದ ಸಂತೋಷ್‌ಗೆ ತೀವ್ರ ಹಿನ್ನಡೆ ಉಂಟಾಗಿದ್ದು, ಅವರು ಬಿಜೆಪಿ ತೊರೆದು, ಬೇರೆ ಪಕ್ಷಗಳಿಂದ ಸ್ಪರ್ಧಿಸಲು ಮುಂದಾಗಿದ್ದಾರೆ.

ಕಾಂಗ್ರೆಸ್‌ನಿಂದ ಶಿವಲಿಂಗೇಗೌಡರು ಸ್ಪರ್ಧಿಸುವುದು ಈಗಾಗಲೇ ಖಚಿತವಾಗಿದೆ. ಜೆಡಿಎಸ್‌ನಿಂದ ಬಾಣಾವರ ಅಶೋಕ್‌ ಅವರನ್ನು ಕಣಕ್ಕಿಳಿಸಲು ಜೆಡಿಎಸ್‌ ನಿರ್ಧರಿಸಿದೆ. ಈ ಮಧ್ಯೆ ಸಂತೋಷ್‌ಗೆ ಬಿಜೆಪಿ ಟಿಕೆಟ್‌ ಕೈತಪ್ಪಿದ್ದರಿಂದ ಜೆಡಿಎಸ್‌ನಿಂದ ಸ್ಪರ್ಧೆ ಮಾಡಬಹುದು. ಈ ಬಗ್ಗೆ ಈಗಾಗಲೇ ರೇವಣ್ಣ ಹಾಗೂ ದೇವೇಗೌಡರ ಜೊತೆಗೆ ಸಂತೋಷ್‌ ಮಾತನಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎನ್‌.ಆರ್ ಸಂತೋಷ್‌ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದು, ಅರಸೀಕೆರೆ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ಹೆಚ್ಚಾಗಿವೆ. ಹಾಗಾಗಿ, ಸಂತೋಷ್‌ ಅವರಿಗೆ ಟಿಕೆಟ್‌ ನೀಡುವ ನಿಟ್ಟಿನಲ್ಲಿ ಜೆಡಿಎಸ್ ಮುಖಂಡರೂ ಆಸಕ್ತಿ ತೋರಿದ್ದಾರೆ. ಆದರೆ, ಜೆಡಿಎಸ್–ಕಾಂಗ್ರೆಸ್‌ ಮೈತ್ರಿ ಸರ್ಕಾರದ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂತೋಷ್‌ಗೆ ಜೆಡಿಎಸ್‌ನಿಂದ ಟಿಕೆಟ್‌ ನೀಡಲು ಎಚ್‌.ಡಿ ಕುಮಾರಸ್ವಾಮಿ ಒಪ್ಪುತ್ತಿಲ್ಲವೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಎಂ ಬೊಮ್ಮಾಯಿ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇನೆ: ಬಿಜೆಪಿ ಶಾಸಕ ನೆಹರು ಓಲೇಕಾರ್

ರಾಜಕೀಯದಲ್ಲಿ ಏನೂ ಬೇಕಾದರೂ ನಡೆಯಬಹುದು. ಹಾಗಾಗಿ ಸಂತೋಷ್‌ ಜೆಡಿಎಸ್‌ನಿಂದ ಸ್ಪರ್ಧೆಗೆ ಇಳಿದರೂ ಆಶ್ಚರ್ಯವಿಲ್ಲ ಎಂದು ಅರಸೀಕೆರೆ ಕ್ಷೇತ್ರದ ಮತದಾರರು ಹೇಳುತ್ತಿರುವುದು ಕೇಳಿಬಂದಿದೆ.

ಒಂದು ವರ್ಷದಿಂದಲೇ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕ್ಷೇತ್ರದಲ್ಲಿ ಶಿವಲಿಂಗೇಗೌಡರಿಗೆ ಸ್ಪರ್ಧೆ ನೀಡುತ್ತಲೇ ಬಂದಿರುವ ಸಂತೋಷ್‌ಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿದೆ. ಹೀಗಾಗಿ, ಅವರ ಶ್ರಮ ವ್ಯರ್ಥವಾಗುತ್ತದೆ. ಅದಕ್ಕಾಗಿ ಬೇರೆ ಪಕ್ಷ ಅಥವಾ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಅವರು ನಿರ್ಧರಿಸಿರುವುದಾಗಿಯೂ ಅವರು ತಮ್ಮ ಆಪ್ತರ ಬಳಿ ಹೇಳಿಕಕೊಂಡಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಸಿ: ಜಿಲ್ಲಾಧಿಕಾರಿ ವೆಂಕಟೇಶ್, ಅಧಿಕಾರಿಗಳು ಭಾಗಿ

ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ...

ಶಿವಮೊಗ್ಗ | ಸಂಯುಕ್ತ ಮುಸ್ಲಿಂ ಒಕ್ಕೂಟದಿಂದ ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

ಏ 23 ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ...

ರಾಯಚೂರಲ್ಲಿ 2ನೇ ತರಗತಿ ವಿದ್ಯಾರ್ಥಿನಿ & ಹಾಸನದಲ್ಲಿ ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ

ರಾಜ್ಯದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಹೇಯ ಕೃತ್ಯ...