ಚುನಾವಣೆ 2023 : ಮೋದಿ ಸೇರಿದಂತೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Date:

  • 40 ಜನ ಸ್ಟಾರ್ ಪ್ರಚಾರಕರಿಂದ ರಾಜ್ಯ ಚುನಾವಣೆ ಪ್ರಚಾರ
  • ರೋಡ್ ಶೋಗಳು, ಸಾರ್ವಜನಿಕ ರ್‍ಯಾಲಿಗಳ ಆಯೋಜನೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿರುವ ಸ್ಟಾರ್ ನಾಯಕರ ಪಟ್ಟಿಯನ್ನು ಕಮಲ ಪಾಳಯ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಸೇರಿದಂತೆ 40 ಮಂದಿ ಸ್ಟಾರ್ ಪ್ರಚಾರಕರನ್ನು ಬಿಜೆಪಿ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಿದೆ.

ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದ್ದು, ಇದಾದ ಬಳಿಕ ಬಿಜೆಪಿ ಸ್ಟಾರ್ ಪ್ರಚಾರಕರು ರಾಜ್ಯಾದ್ಯಂತ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಬಿಡುಗಡೆ ಮಾಡಿರುವ ಪ್ರಚಾರಕ ಪಟ್ಟಿ ಹೀಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸ್ಮೃತಿ ಇರಾನಿ, ನಿರ್ಮಲಾ ಸೀತಾರಾಮನ್‌ರಂತಹ ರಾಷ್ಟ್ರೀಯ ನಾಯಕರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಟಿ ರವಿ, ಅಣ್ಣಾಮಲೈ, ಸಂಸದ ಜಗ್ಗೇಶ್, ಶೃತಿ, ತಾರಾ ಸೇರಿದಂತೆ ಇನ್ನು ಹಲವರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಚುನಾವಣೆ 2023 | ಪದ್ಮನಾಭನಗರದಲ್ಲಿ ಆರ್ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದಲ್ಲಿ ರೋಡ್ ಶೋಗಳು, ಸಾರ್ವಜನಿಕ ರ್‍ಯಾಲಿಗಳು ಮತ್ತು ಬಿಜೆಪಿ ಕಾರ್ಯಕರ್ತರ ಸಮಾವೇಶಗಳು ಸೇರಿದಂತೆ ಒಟ್ಟು 15-20 ಕಾರ್ಯಕ್ರಮಗಳನ್ನು ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...