ಕೋಗಿಲು ಗೆ ‘ಸರ್ಕಾರಿ ಬೇಲಿ’ : ನಿವಾಸಿಗಳೊಡನೆ ಮಾತಿನ ಚಕಮಕಿ

Date:

ಬೆಂಗಳೂರು ನಗರದ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಇಂದು ಮಧ್ಯಾಹ್ನ 12:30ರ ವೇಳೆಗೆ ಬೇಲಿ ಹಾಕಲು ಹವಣಿಸಿದ್ದಾರೆ.

ಸ್ಥಳಕ್ಕೆ 3 ಜೆಸಿಬಿ ಗಳು, ಇಬ್ಬರು ಪೊಲೀಸ್ ಅಧಿಕಾರಿಗಳು, ಜಿಬಿಎ ಅಧಿಕಾರಿಗಳು ಹಾಗೂ 25-30 ಜಿಬಿಎ ಮಾರ್ಷಲ್ ಗಳು ಬಂದು ಬೇಲಿ ಹಾಕಲು ಗುಂಡಿ ತೋಡಿಸಲು ಮುಂದಾಗಿದ್ದಾರೆ. ಸ್ಥಳೀಯ ನಿವಾಸಿಗಳು ಮತ್ತು ಸಂಘಟನೆಗಳ ಮುಖಂಡರು ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಮಾತಿನ ಚಕಮಕಿ ನಡೆದಿದೆ. ಮಾನವ ಸರಪಳಿ ನಿರ್ಮಿಸಿ ಜಿಬಿಎ ಅಧಿಕಾರಿಗಳಿಗೆ ಮರಳಿ ಹೋಗುವಂತೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : 180 ಮನೆಗಳನ್ನು ನೆಲಸಮಗೊಳಿಸಿದ GBA : ನಿರಾಶ್ರಿತರಿಗೆ ತಕ್ಷಣದ ಪರಿಹಾರ ಸಿಗುವುದೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೆವೆ. ಇದಕ್ಕೆ ಕೃಷ್ಣ ಬೈರೇಗೌಡರೇ ಕಾರಣ”, “ನಮಗೆ ನ್ಯಾಯ ಬೇಕು, ಇಲ್ಲದಿದ್ದರೆ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ಇದಕ್ಕೆ ಸರ್ಕಾರವೇ ಕಾರಣ” ಇವೆಲ್ಲವೂ ಸ್ಥಳದಲ್ಲಿ ನೆರೆದಿದ್ದ ಜನರು ತಮ್ಮ ಕೈಯಲ್ಲಿ ಪ್ಲೇಕಾರ್ಡ್ ಹಿಡಿದು ಕೂಗಿದ ಘೋಷಣೆಗಳು.

WhatsApp Image 2025 12 26 at 6.49.04 PM

ಈ ಕುರಿತು ಅಭಿಪ್ರಾಯ ಪಡೆಯಲು ಘನತ್ಯಾಜ್ಯ ನಿರ್ವಹಣೆ ನಿಯಮಿತ ಸಿಇಒ ಕರೀಗೌಡ, ಐಎಎಸ್ ಅವರನ್ನು ‘ಈದಿನ ಡಾಟ್ ಕಾಮ್’ ಸಂಪರ್ಕಿಸಲು ಪ್ರಯತ್ನಿಸಿತು. ಆದರೆ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕಳೆದ ಶನಿವಾರದಂದು (20/12/2025) ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೋಗಿಲು ಗ್ರಾಮದ ಸರ್ವೆ ನಂ.99ರಲ್ಲಿ ಜಿಬಿಎ ಅಧಿಕಾರಿಗಳು ಸುಮಾರು 180 ಮನೆಗಳನ್ನು ನೆಲಸಮಗೊಳಿಸಿ, 2,500 ಕ್ಕೂ ಹೆಚ್ಚು ನಿವಾಸಿಗಳನ್ನು ಬೀದಿಪಾಲು ಮಾಡಿದ್ದಾರೆ.

ಎರಡು ದಿನ ಸಚಿವ ಮತ್ತು ಬ್ಯಾಟರಾಯನಪುರ ಕ್ಷೇತ್ರದ ಶಾಸಕ ಕೃಷ್ಣ ಬೈರೇಗೌಡ ಅವರ ಮನೆ ಮುಂದೆ ಹಗಲು-ರಾತ್ರಿ ನಿರಂತರ ಧರಣಿಯ ನಂತರ, ಎರಡು ದಿನದ ಬಳಿಕ ಸೋಮವಾರದಂದು (ಡಿ.22) ಸ್ಥಳೀಯರು ಮತ್ತು ಕೆಲವು ಸಂಘಟನೆಗಳ ಮುಖಂಡರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೃಷ್ಣ ಬೈರೇಗೌಡರು, “ಕಂದಾಯ ಇಲಾಖೆಯ ಬಳಿ ಇದ್ದ ಜಾಗವನ್ನು ಜಿಬಿಎ ಅವರಿಗೆ ವರ್ಗಾಯಿಸಲಾಗಿತ್ತು. ಅದರಂತೆ ಜಿಬಿಎ ಘನತ್ಯಾಜ್ಯ ನಿರ್ವಹಣೆ ವಿಭಾಗದವರು ಆ ಜಾಗವನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾಗಿದ್ದಾರೆ. ಅಲ್ಲಿರುವ ಜನರ ಬಗ್ಗೆ ನನಗೆ ತಿಳಿದಿರಲಿಲ್ಲ. ಆ ಜಾಗವನ್ನು ಮರಳಿ ಪಡೆದು, ಅದೇ ಜಾಗದಲ್ಲಿ ಅಲ್ಲಿದ್ದ ಜನರಿಗೆ ಮನೆಯನ್ನು ಇನ್ನು ಮೂರು ತಿಂಗಳಲ್ಲಿ ನಿರ್ಮಿಸಿ ಕೊಡುತ್ತೇವೆ” ಎಂದ ಭರವಸೆ ಕೊಟ್ಟಿದ್ದರು ಎಂದು ದುಡಿಯುವ ಜನರ ವೇದಿಕೆಯ ಸಂಘಟಕರಾದ ನಂದಿನಿ ‘ಈ ದಿನ ಡಾಟ್ ಕಾಮ್’ ಗೆ ತಿಳಿಸಿದ್ದರು.

WhatsApp Image 2025 12 26 at 6.49.04 PM 1

ಎರಡು ದಿನಗಳ ಹಿಂದೆ ಜಿಬಿಎ ಅಧಿಕಾರಿಗಳು ಸ್ಥಳಕ್ಕೆ (ಫಕೀರ್ ಕಾಲೋನಿ) ಬಂದು, ‘ಇಲ್ಲಿಂದ 5 ಕಿ.ಮೀ ದೂರದಲ್ಲಿರುವ ಹೆಗ್ಗಡೆ ನಗರದಲ್ಲಿ ಗಂಜಿ ಕೇಂದ್ರ ನಿರ್ಮಿಸಿದ್ದೇವೆ, ಇಲ್ಲಿರುವ ಎಲ್ಲರೂ ಅಲ್ಲಿಗೆ ಹೋಗಿ’ ಎಂದು ಹೇಳಿದ್ದಾರೆ. ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ‘ಇಲ್ಲೇ ಹತ್ತಿರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಜಾಗ ಮಾಡಿಕೊಡಿ ಎಂದು ಕೇಳಿದ್ದಾರೆ. ಅದಕ್ಕೆ ಜಿಬಿಎ ಅಧಿಕಾರಿಗಳು ಆಗೊಲ್ಲ’ ಎಂದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕೋಗಿಲು ಗ್ರಾಮದಲ್ಲಿ 14 ಎಕರೆ 36 ಗುಂಟೆ ವಿಸ್ತೀರ್ಣದ ಪಾಲಿಕೆ ಜಾಗದಲ್ಲಿ 180 ಮನೆಗಳನ್ನು ಆಕ್ರಮವಾಗಿ ನಿರ್ಮಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ವಿಭಾಗ ಮತ್ತು ಜಿಬಿಎ ಸೇರಿ ಶನಿವಾರದಂದು (ಡಿ.20) ಬೆಳಗ್ಗೆ 6 ಗಂಟೆಗೆ 6 ಜೆಸಿಬಿಗಳು, 300 ಕ್ಕೂ ಹೆಚ್ಚು ಪೊಲೀಸರು ಮತ್ತು ಜಿಬಿಎ ಮಾರ್ಷಲ್ ಗಳನ್ನು ಬಳಸಿಕೊಂಡು 180 ಮನೆಗಳನ್ನು ನೆಲಸಮಗೊಳಿಸಿದ್ದವು. ಮಕ್ಕಳು, ಬಾಣಂತಿಯರು, ವಯಸ್ಸಾದವರು, ಅನಾರೋಗ್ಯಕ್ಕೀಡಾದವರು, ಭಿಕ್ಷೆ ಬೇಡಿ ಬದುಕುತ್ತಿದ್ದ ಜನರೆಲ್ಲರೂ ಬೀದಿಪಾಲಾಗಿದ್ದಾರೆ. ಮಲಗಲು ಸೂರಿಲ್ಲದೆ ಸುಮಾರು 2500 ಕ್ಕೂ ಹೆಚ್ಚು ಜನರ ಬದುಕು ಅತಂತ್ರ ಸ್ಥಿತಿಗೆ ಸಿಲುಕಿದೆ.

Manoj
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...