ಅಭಿವೃದ್ಧಿಯ ಹೆಸರಲ್ಲಿ ಪಶ್ಚಿಮ ಘಟ್ಟಗಳ ಮೇಲೆ ನಡೆಯುತ್ತಿರುವ ದಾಳಿ ಇಂದಿಗೂ ನಿಲ್ಲುತ್ತಿಲ್ಲ  : ಗಿರೀಶ್ ಕಾಸರವಳ್ಳಿ

Date:

ಪರಿಸರಕ್ಕೆ ಎಲ್ಲವನ್ನು ಪೊರೆಯುವ ಶಕ್ತಿ ಇದೆ‌. ಆದರೆ ಅತಿ ಆಸೆಯನ್ನು ಪೊರೆಯುವ ಶಕ್ತಿ ಇಲ್ಲ. ಪಶ್ಚಿಮ ಘಟ್ಟಗಳ ಉಳಿವಿಗಾಗಿ ನಾಲ್ಕು ದಶಕಗಳಿಂದ ಹೋರಾಟಗಳು ನಡೆಯುತ್ತಲೆ ಇದೆ. ಅಭಿವೃದ್ಧಿಯ ಹೆಸರಿನಲ್ಲಿ ಪಶ್ಚಿಮ ಘಟ್ಟಗಳ ಮೇಲೆ ನಡೆಯುತ್ತಿರುವ ದಾಳಿ ಇಂದಿಗೂ ನಿಲ್ಲುತ್ತಿಲ್ಲ. ನಮ್ಮ ಅಭಿವೃದ್ಧಿ ಮಾನದಂಡಗಳಲ್ಲಿ ಬದಲಾವಣೆ ಆಗಬೇಕಿದೆ ಎಂದು ಚಿತ್ರ ನಿರ್ದೇಶ ಗಿರೀಶ್ ಕಾಸರವಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಚಿತ್ರಕಲಾ ಪರಿಷತ್ತಿನಲ್ಲಿ ದಕ್ಷಿಣ ಭಾರತದ ಪಶ್ಚಿಮ ಘಟ್ಟಗಳ ಕುರಿತು ಚಿತ್ರಕಲೆ ಪ್ರದರ್ಶನ ಹಾಗೂ ಪರಿಸರ ತಜ್ಞರ ರಾಷ್ಟ್ರ ಮಟ್ಟದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನು ಓದಿದ್ದೀರಾ? ಬಿಂಬ-ಬಿಂಬನ: ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಆತ್ಮಕತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸುಮಾರು 25-30 ವರ್ಷಗಳ ಹಿಂದೆ ಭಾರತದಲ್ಲಿ ಎರಡನೆ ಅತಿ ಹೆಚ್ಚು ಮಳೆಬಿಳುವ ಜಾಗ ಕಮ್ಮರಡಿ. ಇಂದು ಆ ಊರಿನಲ್ಲಿ ನೀರಿಗೆ ಕ್ಷಾಮ ಇದೆ ಎಂಬುದು ನಂಬಲಾಗುವುದಿಲ್ಲ. ಪಶ್ಚಿಮ ಘಟ್ಟ ಉಳಿಸಿ ಎಂದರೆ ಕೇವಲ ಮರ ಉಳಿಸಿ ಎಂದಲ್ಲ. ಅಲ್ಲಿನ ಜನ, ಮಾನವೀಯ ಇತಿಹಾಸ, ಅಲ್ಲಿನ ಸಂಸ್ಕೃತಿಯನ್ನು ಉಳಿಸಬೇಕು’ ಎಂದರು.

‘ನಾನು ಪಶ್ಚಿಮ ಘಟ್ಟದ ಚಿಕ್ಕ ಹಳ್ಳಿಯಲ್ಲಿ ಹುಟ್ಟಿದ್ದು. ನನ್ನ ಸಂಪೂರ್ಣ ಒಡನಾಟ ಇದ್ದದ್ದಹ ಇಂಬಳ, ಹಾವುಗಳು, ಅನೇಕ ಜೀವಜಂತುಗಳು, ಕೆಲವೊಮ್ಮೆ ಹುಲಿಗಳ ಜೊತೆಗೂ ಬದುಕಿದ್ದೆವೆ’ ಎಂದು ಬಾಲ್ಯವನ್ನು ನೆನೆಪಿಸಿಕೊಂಡರು.

ಕಾರ್ಯಕ್ರಮವನ್ನು ಆಯೋಜಿಸಿದ ಚಿತ್ರಕಲಾವಿದ ಹಾಗೂ ಪರಿಸರವಾದಿ ಸುರೇಶ್ ಹೆಬ್ಳೀಕರ್ ಅವರು ಮಾತನಾಡಿ, ನೂರಕ್ಕೆ ತೊಂಬತ್ತರಷ್ಟು‌ ರೈತರು ಮಳೆಯ ಮೇಲೆ ಅವಲಂಬಿಸಿದ್ದಾರೆ. 65 ಮುಖ್ಯವಾದ ನದಿಗಳು ಪಶ್ಚಿಮ ಘಟ್ಟದಲ್ಲಿ ಹುಟ್ಟುತ್ತವೆ. ಇಂದು ನಾವೆಲ್ಲರು ಪಶ್ಚಿಮ ಘಟ್ಟಗಳನ್ನು ಉಳಿಸಬೇಕಾದ ಪರಿಸ್ಥಿತಿ ಬಂದಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಭಾಗ್ಯ ಅಜಯ್ ಕುಮಾರ್, ಅಗ್ನಿ ಹೋತ್ರಿ, ಪ್ರದೀಪ್ ಕುಮಾರ್ ಸೇರಿ 50‌ ರಿಂದ 60 ಕಲಾವಿದರೆಲ್ಲ ಸೇರಿ ಪಶ್ಚಿಮ ಘಟ್ಟ ಉಳಿಸುವ ಬಗ್ಗೆ ಕಲಾಕೃತಿಗಳನ್ನು ತಯಾರು ಮಾಡಿದ್ದಾರೆ.

ವೇದಿಕೆಯ ಮೇಲೆ ಹಿರಿಯ ಕಲಾವಿದರಾದ ಎಸ್ ಜಿ ವಾಸುದೇವ್, ಲಿಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾದ ಪಸ ಕುಮಾರ್, ಆರ್ಟ್ ಫೌಂಡೇಶನ್ ನ ಭಾಗ್ಯ ಅಜಯ್ ಕುಮಾರ್, ಗೀತಾ ಪ್ರಿಯ (ಕೃಪಾ ನಿಧಿ),  ಕಲಾವಿದರಾದ‌ ಚಂದ್ರನಾಥ ಆಚಾರ್ಯ ಹಾಗೂ ನಿರೂಪಣೆಯಲ್ಲಿ‌ ಪತ್ರಕರ್ತರಾದ ಅಚ್ಯುತ್ತ ಸಂಕೇತಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...