ದಲಿತ ಹೋರಾಟಗಾರ ಲಕ್ಷ್ಮಿನಾರಾಯಣ ನಾಗವಾರ ನಿಧನ

Date:

ಕರ್ನಾಟಕ ದಲಿತ ಚಳವಳಿಯ ಹಿರಿಯ ಮುಖಂಡರಾದ ಲಕ್ಷ್ಮಿನಾರಾಯಣ ನಾಗವಾರ ಅವರು ಇಂದು ನಿಧನರಾಗಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು. 2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ದಲ್ಲಿ ಸಾರ್ವಜನಿಕವಾಗಿ ಭಾಗಿಯಾಗಿದ್ದೇ ಕೊನೆ. ಆನಂತರದಲ್ಲಿ ಹೋರಾಟದಿಂದ ದೂರ ಉಳಿದಿದ್ದರು.

ಲಕ್ಷ್ಮಿನಾರಾಯಣ ಅವರ ಮೃತದೇಹವನ್ನು ಬೆಂಗಳೂರಿನ ಹೆಬ್ಬಾಳದ ಕನಕನಗರದಲ್ಲಿನ ಅವರ ನಿವಾಸದಲ್ಲಿ ಇರಿಸಲಾಗಿದೆ. ನಾಳೆ ಮಧ್ಯಾಹ್ನ ಮೂರು ಗಂಟೆಗೆ ಬೆಂಗಳೂರು ಉತ್ತರ ತಾಲ್ಲೂಕಿನ ನಾಗವಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ಷ್ಮಿನಾರಾಯಣ ಅವರು ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದವರು. ತಮ್ಮ ವಿದ್ಯಾರ್ಥಿ ದಿನಗಳಲ್ಲೇ ದಲಿತ ಹಕ್ಕುಗಳ ಬಗ್ಗೆ ಧ್ವನಿಯನ್ನು ಎತ್ತುತ್ತಾ ಬಂದವರು. ಸಾಹಿತ್ಯ ಮಾತ್ರವಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಅತ್ಯಂತ ಉತ್ಸುಕರಾಗಿ ಭಾಗವಹಿಸುತ್ತಿದ್ದರು. ಕಾಲೇಜು ಜೀವನದಲ್ಲೇ ಸಮಾಜ ವಿಜ್ಞಾನ, ಅರ್ಥಶಾಸ್ತ್ರ ವಿಷಯಗಳ ಅಧ್ಯಾಪಕರಿಗೆ ಪ್ರೀತಿಯ ವಿದ್ಯಾರ್ಥಿಯಾಗಿ ‘ದಲಿತ ವಿದ್ಯಾರ್ಥಿ ಒಕ್ಕೂಟ’ದ ಮುಖಂಡರಾಗಿದ್ದರು.

ದಲಿತ ಹಿರಿಯ ನೇತಾರ ಬಿ. ಬಸವಲಿಂಗ ಅವರು ನಡೆಸಿದ ಬೂಸಾ ಚಳವಳಿಗೆ ಇಪ್ಪತ್ತೈದು ವರ್ಷಗಳಾದ ಸಂದರ್ಭದಲ್ಲಿ ‘ಬಿ. ಬಸವಲಿಂಗಪ್ಪ ಮತ್ತು ಬೂಸಾ ಚಳವಳಿ : ಕಾಲು ಶತಮಾನ’ ಪುಸ್ತಕವನ್ನು ಸಂಪಾದಿಸಿ ದಲಿತ ಚಳವಳಿಯ ಕುರಿತು ಹಲವು ಒಳನೋಟಗಳನ್ನು ಓದುಗರಿಗೆ ಒದಗಿಸಿದ್ದರು.

‘ಈದಿನ.ಕಾಂ’ ಜೊತೆ ಮಾತನಾಡಿದ ಹಿರಿಯ ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್, “ಕಳೆದ ಮೂರು ದಶಕಗಳಿಂದಲೂ ಚಳವಳಿಯಲ್ಲಿ ಸಕ್ರಿಯರಾಗಿದ್ದ ಲಕ್ಷ್ಮಿನಾರಾಯಣ ಅವರ ನಿಧನವು ಚಳವಳಿಗೆ ತುಂಬಲಾಗದ ನಷ್ಟ. ನ್ಯೂರೋ ಸಂಬಂಧಿತ ಕಾಯಿಲೆಗೆ ತುತ್ತಾಗಿದ್ದರು. ಹಾಸಿಗೆ ಹಿಡಿದಿದ್ದ ಅವರು ಚೇತರಿಸಿಕೊಳ್ಳಲಾಗಲಿಲ್ಲ” ಎಂದು ತಿಳಿಸಿದರು.

‘ಬರ್ಮಾ ಬಿಕ್ಕಟ್ಟು: ಆಗ್ನೇಯ ಏಷ್ಯಾದಲ್ಲಿ ಆತಂಕ’, ‘ಭತ್ತದ ಬೆಳದಿಂಗಳು’, ‘ಬತ್ತದ ಹೊನಲು’ ಅವರ ಪ್ರಮುಖ ಕೃತಿಗಳು. 2011ರಲ್ಲಿ ಕರ್ನಾಟಕ ಸರ್ಕಾರವು ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ಬುದ್ಧ – ಬಸವ – ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ದತ್ತಿ ಪ್ರಶಸ್ತಿ, ಬಿ. ಬಸವಲಿಂಗಪ್ಪ ಪ್ರಶಸ್ತಿ, ಟಿಪ್ಪು ಪ್ರಶಸ್ತಿಗಳು ಅವರಿಗೆ ಸಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...