ಕನಕಪುರ ಕಾಂಗ್ರೆಸ್ ಮುಖಂಡ ನಂಜೇಶ್‌ ಹತ್ಯೆ: ಆರೋಪಿ ಶ್ರೀನಿವಾಸ್‌ಗೆ ಪೊಲೀಸ್ ಗುಂಡೇಟು

Date:

ಕನಕಪುರ ತಾಲ್ಲೂಕಿನ ಸಾತನೂರಿನಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ಅಚ್ಚಲು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಹೊಂಗಾಣಿದೊಡ್ಡಿಯ ಎನ್. ನಂಜೇಶ್ (46) ಕೊಲೆ ಪ್ರಕರಣದ ಆರೋಪಿ ಶ್ರೀನಿವಾಸ್‌ ಕಾಲಿಗೆ ಕನಕಪುರ ಟೌನ್ ಇನ್‌ಸ್ಪೆಕ್ಟರ್ ಅನಂತರಾಮು ನೇತೃತ್ವದ ತಂಡ ಸೋಮವಾರ ಬೆಳಿಗ್ಗೆ ಗುಂಡು ಹಾರಿಸಿ ಬಂಧಿಸಿದೆ.

ಘಟನೆಯಲ್ಲಿ ಠಾಣೆಯ ಕಾನ್‌ಸ್ಟೆಬಲ್ ರಮೇಶ್‌ಗೆ ಗಾಯಗೊಂಡಿದ್ದಾರೆ. ಆರೋಪಿ ಶ್ರೀನಿವಾಸ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ದಯಾನಂದ ಸಾಗರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಮೇಶ್ ಅವರನ್ನು ಸಹ ಅದೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ರಾತ್ರಿ ಸಾತನೂರಿನ ಆರ್.ಕೆ. ಡಾಬಾ ಎದುರು ನಂಜೇಶ್ ಅವರನ್ನು ನಾಲ್ವರು ಸಹಚರರೊಂದಿಗೆ ಕೊಲೆ ಮಾಡಿದ್ದ ಶ್ರೀನಿವಾಸ್, ತಾಲ್ಲೂಕಿನ ಗಬ್ಬಾಡಿಯಲ್ಲಿ ತಲೆ ಮರೆಸಿಕೊಂಡಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ, ಅನಂತರಾಮು ನೇತೃತ್ವದ ತಂಡ ಆರೋಪಿಯನ್ನು ಬಂಧಿಸಲು ಬೆಳಿಗ್ಗೆ 6 ಗಂಟೆ ಸುಮಾರಿಗೆ ಸ್ಥಳಕ್ಕೆ ತೆರಳಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

ಈ ವೇಳೆ ಶ್ರೀನಿವಾಸ್ ಕಾನ್‌ಸ್ಟೆಬಲ್ ರಮೇಶ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ. ಎಚ್ಚರಿಕೆ ಲೆಕ್ಕಿಸದೆ ತಪ್ಪಿಸಿಕೊಳ್ಳಲು ಮುಂದಾದಾಗ ಅನಂತರಾಮು ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದರು. ನಂತರ, ಆರೋಪಿಯನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿವಾದಿತ ನಿವೇಶನದ ಕಾರಣಕ್ಕೆ ಹೊಂಗಾಣಿದೊಡ್ಡಿಯಲ್ಲಿ ಮೂರು ದಿನದ ಹಿಂದೆ ಶ್ರೀನಿವಾಸ್ ಮತ್ತು ನಂಜೇಶ್ ನಡುವೆ ಜಗಳವಾಗಿತ್ತು. ಇದೇ ದ್ವೇಷಕ್ಕೆ ಶ್ರೀನಿವಾಸ್ ನಾಲ್ವರು ಯುವಕರೊಂದಿಗೆ ಸೇರಿಕೊಂಡು ನಂಜೇಶ್ ಅವರನ್ನು ಕೊಲೆ ಮಾಡಿದ್ದ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮನಗರ | ಫೆ.4ರಂದು ‘ಜಿಲ್ಲಾಧಿಕಾರಿ ಹಠಾವೋ, ರೈತ ಬಚಾವೋ’ ಆಂದೋಲನ

ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿರುವ ರೈತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯ...

ಹೊಸಕೋಟೆ | ನಾಲ್ವರು ಕಾರ್ಮಿಕರು ಅನುಮಾನಾಸ್ಪದ ಸಾವು

ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ...

ಫೆ.7 ರಂದು ನಗರದ ಜಿಕೆಬಿಎಂಎಸ್ ಶಾಲೆಯಲ್ಲಿ ಮೂರ್ಛೆರೋಗ ತಪಾಸಣಾ ಮತ್ತು ಅರಿವು ಶಿಬಿರ

ಹೊಸಕೋಟೆ :ಹೊಸಕೋಟೆ ರೋಟರಿ ಸೆಂಟ್ರಲ್ ರೋಟರಿ ಬೆಂಗಳೂರು ಐಟಿ ಕಾರಿಡಾರ್, ಆಸ್ಟರ್...

ದೊಡ್ಡಬಳ್ಳಾಪುರ | ಮೂರು ಮದುವೆಯಾಗಿ ಲಕ್ಷಾಂತರ ರೂ ವಂಚನೆ ಆರೋಪ; ಮಹಿಳೆ ವಿರುದ್ಧ ಗಂಡಂದಿರ ದೂರು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹಣಬೆ ಗ್ರಾಮದ ಮಹಿಳೆಯೊಬ್ಬಳ ವಿರುದ್ಧ...