ಬೀದರ್ | ಭ್ರಷ್ಟಾಚಾರ, ಬೆಲೆ ಏರಿಕೆಯೇ ಬಿಜೆಪಿ ಕೊಡುಗೆ : ಡಾ. ಭೀಮಸೇನರಾವ ಶಿಂಧೆ

Date:

15 ವರ್ಷಗಳಿಂದ ಔರಾದ್ ಕ್ಷೇತ್ರದಲ್ಲಿ ಹೇಳಿಕೊಳ್ಳುವ ಅಭಿವೃದ್ಧಿಯಾಗಿಲ್ಲ

ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ನಾನು ಗೆದ್ದಲ್ಲಿ ಅಭಿವೃದ್ಧಿಗೆ ಅನುಕೂಲ

ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರು ಬೇಸತ್ತು ಹೋಗಿದ್ದಾರೆ. ಭ್ರಷ್ಟಾಚಾರ, ಬೆಲೆ ಏರಿಕೆ ಬಿಜೆಪಿ ಕೊಡುಗೆಯಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಭೀಮಸೇನರಾವ್ ಶಿಂಧೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಔರಾದ ತಾಲೂಕಿನ ಅಲ್ಲಾಪೂರ, ತೇಗಂಪೂರ, ಯನಗುಂದಾ, ಖಾಶೇಂಪೂರ, ಬರದಾಪೂರ, ಕೊಳ್ಳುರ್, ಎಕಲಾರ, ತುಳಜಾಪೂರ, ಬೋರಾಳ, ಜೋನ್ನೆಕೇರಿ, ಕಪ್ಪೇಕೇರಿ, ಮಸ್ಕಲ್, ನಾಗೂರ ಗ್ರಾಮದಲ್ಲಿ ಮತಯಾಚಿಸಿ ಅವರು ಮಾತನಾಡಿದರು.

“ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರ್ಕಾರದ್ದು ಸಾರ್ವಕಾಲಿಕ ದಾಖಲೆಯಾಗಿದೆ. ಇನ್ನೂ ಕಳೆದ 15 ವರ್ಷದಿಂದ ಔರಾದ್ ಕ್ಷೇತ್ರದಲ್ಲಿ ಯಾವುದೇ ಹೇಳಿಕೊಳ್ಳುವ ಅಭಿವೃದ್ಧಿಯಾಗಿಲ್ಲ. ಆದ್ದರಿಂದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಬಗ್ಗೆ ಕ್ಷೇತ್ರದ ಜನ ಬೇಸತ್ತಿದ್ದಾರೆ, ಸಾಮಾನ್ಯ ಜನರು ಸ್ವಇಚ್ಛೆಯಿಂದ ನನಗೆ ಬೆಂಬಲಿಸುತ್ತಿದ್ದು, ಕ್ಷೇತ್ರದ ಎಲ್ಲೆಡೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸವರಾಜ ದೇಶಮುಖ ಮಾತನಾಡಿ, “ಇಲ್ಲಿಯವರಿಗೆ ಅವಿದ್ಯಾವಂತರಿಗೆ ಬೆಂಬಲಿಸಿದ್ದು ಸಾಕು. ಈ ಬಾರಿ ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ ಅವರನ್ನು ಸೋಲಿಸಲು ಎಲ್ಲರೂ ಟೊಂಕಕಟ್ಟಿ ನಿಲ್ಲಬೇಕಾಗಿದೆ” ಎಂದು ಕರೆ ನೀಡಿದರು.

“ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ರಾಜಕುಮಾರ ಹಲಬರ್ಗೆ ಮಾತನಾಡಿ, “ಕ್ಷೇತ್ರದ ಎಲ್ಲ ಗ್ರಾಮದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಡಾ. ಭೀಮಸೇನರಾವ ಶಿಂಧೆ ಅವರಿಗೆ ಜನ ಬೆಂಬಲ ನಿರೀಕ್ಷೆಗೂ ಮೀರಿ ಸಿಗುತ್ತಿದೆ. ಈ ಬಾರಿ ಕಾಂಗ್ರೆಸ್ ಬಹುದೊಡ್ಡ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಸಂಘಪರಿವಾರದ ಡಬಲ್‌ ಎಂಜಿನ್‌ ಸರ್ಕಾರವನ್ನು ಕಿತ್ತೊಗೆಯೋಣ : ದೇವನೂರ ಮಹಾದೇವ

ವಕೀಲರ ಬಳಿ ಮತಯಾಚನೆ

ಔರಾದ ಪಟ್ಟಣದದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಭೀಮಸೇನರಾವ ಶಿಂಧೆ ತಮ್ಮ ಬೆಂಬಲಿಗರೊಂದಿಗೆ ಮತಯಾಚನೆ ಮಾಡಿದರು. ಪಟ್ಟಣದಲ್ಲಿ ವಕೀಲರನ್ನು ಭೇಟಿಯಾದ ಅವರು, ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಹಾಕುವಂತೆ ಕೋರಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ನಾನು ಗೆದ್ದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗಲಿದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಿವರಾಜ ದೇಶಮುಖ, ಚನ್ನಪ್ಪ ಉಪ್ಪೆ, ಬಾಬುರಾವ ತಾರೆ, ಡಾ. ಫೈಯಾಜ್ ಅಲೀ, ನೇಹರು ಪಾಟೀಲ್, ಕೆಟಿ ವಿಶ್ವನಾಥ್, ಶರಣಪ್ಪ ಪಾಟೀಲ್, ಸುಧಾಕಾರ ಕೊಳ್ಳುರ್, ಕಾಶಿನಾಥ್ ಜಾಧವ್, ದತ್ತು ಕೊಳ್ಳುರ್, ಶಂಕು ನಿಸ್ಪತೆ ಸೇರಿದಂತೆ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...