ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಕ್ಷಮೆ ಕೇಳಬೇಕು: ಪ್ರಜ್ಞಾವಂತರ ಒತ್ತಾಯ

Date:

‘ಕರ್ನಾಟಕದ ಜನ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು’ ಎಂದಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯದ ಜನರಿಗೆ ಬೆದರಿಕೆ ಹಾಕುತ್ತಿದ್ದಾರೆ. ನಡ್ಡಾ ಅವರ ಮಾತುಗಳು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಅವರು ದೇಶದ ಜನರಲ್ಲಿ ಕ್ಷಮೆ ಕೇಳಬೇಕು ಎಂದು ರಾಜ್ಯದ ಪ್ರಜ್ಞಾವಂತರು ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರಜ್ಞಾವಂತರ ತಂಡ, “ಶಿಗ್ಗಾಂವಿಯಲ್ಲಿ ಭಾಷಣ ಮಾಡಿದ್ದ ನಡ್ಡಾ ಅವರು ʼಕರ್ನಾಟಕದಲ್ಲಿ ಅಭಿವೃದ್ಧಿಯು ನಿರಂತರವಾಗಿ ಹರಿಯಲು ನಿಮಗೆ ಮೋದೀಜಿಯವರ ಆಶೀರ್ವಾದ ಬೇಕು. ಆದ್ದರಿಂದ ರಾಜ್ಯವು ಮೋದಿಜಿ ಅವರ ಆಶೀರ್ವಾದದಿಂದ ದೂರವಿರಬಾರದುʼ ಎಂಬ ಮಾತನ್ನು ಹೇಳಿದ್ದಾರೆ. ಈ ಮಾತಿನ ಮೂಲಕ ನಡ್ಡಾ ಅವರು ʼಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆಯನ್ನು ಮತದಾರರಿಗೆ ಹಾಕುತ್ತಿದ್ದಾರೆ. ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಕರ್ನಾಟಕವೂ ಸೇರಿದಂತೆ ದೇಶದ ಯಾವ ರಾಜ್ಯವಾದರೂ ತನಗೆ ಬೇಕಾದ ಪಕ್ಷವನ್ನು ಚುನಾವಣೆಯ ಮೂಲಕ ಅಧಿಕಾರಕ್ಕೆ ತರುವ ಹಕ್ಕನ್ನು ಸಂವಿಧಾನವು ಮತದಾರರಿಗೆ ನೀಡಿದೆ. ಮತದಾರರ ಆಯ್ಕೆಯನ್ನು ಕೇಂದ್ರ ಸರ್ಕಾರ ಗೌರವಿಸಬೇಕು. ಸಂವಿಧಾನದ ಪರಿಚ್ಛೇದ 11 – ಅಧಿಕಾರವನ್ನು ರಾಜ್ಯ ಮತ್ತು ಕೇಂದ್ರಗಳ ನಡುವೆ ಹಂಚಿಕೊಟ್ಟಿದೆ. ಹಾಗಾಗಿಯೇ, ಭಾರತವು ಒಂದು ಒಕ್ಕೂಟ ರಾಷ್ಟ್ರವಾಗಿದೆ. ಇಲ್ಲಿ ಒಂದು ಇನ್ನೊಂದನ್ನು ದುರ್ಬಲಗೊಳಿಸುವುದಿಲ್ಲ, ಬದಲಾಗಿ ಬಲಗೊಳಿಸುತ್ತದೆ. ಆದರೆ ನಡ್ಡಾ ಅವರ ಮಾತುಗಳು ಒಕ್ಕೂಟ ವ್ಯವಸ್ಥೆಯ ಮೂಲ ತತ್ವಗಳಿಗೆ ವಿರೋಧವಾಗಿದ್ದು, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ‘ಕರ್ನಾಟಕಕ್ಕೆ ಕೇಂದ್ರದ ಮೋಸ’ ಮೋದಿಯ ಆಶೀರ್ವಾದವೇ, ಶಾಪವೇ: ಸಿದ್ದರಾಮಯ್ಯ

“ಕೇಂದ್ರದಲ್ಲಿರುವ ಎನ್‌ಡಿಎ ಸರ್ಕಾರವು ಹಂತ ಹಂತವಾಗಿ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಲೇ ಬರುತ್ತಿದೆ. ಇದಕ್ಕೆ ಪೂರಕವಾಗಿಯೇ ನಡ್ಡಾ ಅವರ ಮಾತುಗಳು ಬಂದಿವೆ. ಇದು ಅಂತಿಮವಾಗಿ ಭಾರತದ ಬಹುತ್ವವನ್ನು ನಾಶ ಮಾಡುತ್ತದೆ. ಕಾರಣ, ಸಂವಿಧಾನ ವಿರೋಧಿ ಮಾತುಗಳನ್ನಾಡಿದ ಜೆ.ಪಿ ನಡ್ಡಾ ಅವರು ಕೂಡಲೇ ಭಾರತದ ಮತದಾರರ ಕ್ಷಮೆಯಾಚಿಸಬೇಕು ಮತ್ತು ತಮ್ಮ ಮುಂದಿನ ಭಾಷಣಗಳಲ್ಲಿ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು” ಎಂದು ಆಗ್ರಹಿಸಿದ್ದಾರೆ.

ನಡ್ಡಾ ಹೇಳಿಕೆ ವಿರೋಧಿಸಿ ನಾಡಿನ ಪ್ರಜ್ಞಾವಂತರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಗೆ ಬೆಂಗಳೂರಿನ ನಿವೃತ್ತ ಪ್ರಾಧ್ಯಾಪಕ ಡಾ. ಕೆ. ಮರುಳಸಿದ್ದಪ್ಪ, ಲೇಖಕಿ ಡಾ. ವಿಜಯಾ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪೂರ್ವಾಧ್ಯಕ್ಷ ಪ್ರೊ. ಎಸ್‌ ಜಿ ಸಿದ್ದರಾಮಯ್ಯ, ಲೇಖಕ ಪ್ರೊ. ಕಾಶೀನಾಥ ಅಂಬಲಗಿ, ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು, ಕಲಾವಿದ ಗಿರಿಧರ ಕಾರ್ಕಳ, ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ, ಅಂಕಣಕಾರ ಶ್ರೀನಿವಾಸ ಕಾರ್ಕಳ ಸಮ್ಮತಿ ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...