ನನ್ನನ್ನು ಸೋಲಿಸಲು ಪಣತೊಟ್ಟಿರುವುದು ಬಿಜೆಪಿಯಲ್ಲ, ಬಿಎಲ್ ಸಂತೋಷ್ : ಸಿದ್ದರಾಮಯ್ಯ

Date:

  • ನಾನು ಸ್ಪರ್ಧಿಸಲು ಹೋದಲೆಲ್ಲ ಬಿ ಎಲ್ ಸಂತೋಷ್ ಬರುತ್ತಾರೆ
  • ವರುಣ ಕ್ಷೇತ್ರದ ಜನ ದ್ವೇಷ ರಾಜಕಾರಣವನ್ನು ಸಹಿಸುವುದಿಲ್ಲ

ನನ್ನನ್ನು ಸೋಲಿಸಲು ಹೊರಟಿರುವುದು ಬಿಜೆಪಿಯಲ್ಲ, ಆರ್‌ಎಸ್‌ಎಸ್‌ನ ಬಿ ಎಲ್ ಸಂತೋಷ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವರುಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ವರುಣಗೆ ಸೋಮಣ್ಣರನ್ನ ಕರೆ ತಂದು ನಿಲ್ಲಿಸಿದ್ದೇ ಬಿ ಎಲ್ ಸಂತೋಷ್. ಸಂತೋಷ್‌ಗೆ ನಾನು ಸೋಲಬೇಕೆಂಬ ಆಸೆ. ಅದಕ್ಕಾಗಿ ನಾನು ಹೋದಲೆಲ್ಲಾ ಬೆನ್ನು ಬೀಳುತ್ತಿದ್ದಾರೆ ಎಂದರು.

ಸಂತೋಷ್ ಪಕ್ಕಾ ಆರ್‌ಎಸ್‌ಎಸ್‌ ನವರು. ನಾನು ಕೋಲಾರದಲ್ಲಿ ಸ್ಪರ್ಧಿಸುತ್ತೇನೆ ಎಂದಾಗ ಅಲ್ಲಿಗೂ ಬಂದಿದ್ದರು. ಈಗ ವರುಣ ಕ್ಷೇತ್ರಕ್ಕೆ ಬಂದು ನನ್ನ ವಿರುದ್ದ ಕೆಲಸ ಮಾಡುತ್ತಿದ್ದಾರೆ. ನನ್ನನ್ನ ಸೋಲಿಸಬೇಕೆಂದು ಕೆಲಸ ಮಾಡುತ್ತಿದ್ದಾರೆಂದು ಸಿದ್ದರಾಮಯ್ಯ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ, ಬಿ ಎಲ್ ಸಂತೋಷ್ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅದರೆ ಇವರು ಯಾರೂ ವರುಣ ಕ್ಷೇತ್ರದ ಮತದಾರರಲ್ಲ. ಇವರ ಮಾತಿಗೆ ನಮ್ಮೂರ ಜನ ಕಿವಿಗೊಡುವುದಿಲ್ಲ.

ಈ ಸುದ್ದಿ ಓದಿದ್ದೀರಾ? :ನಮ್ಮ ಕುಟುಂಬ ಯಾವತ್ತೂ ಪ್ರಚಾರಕ್ಕೆ ಬಂದಿಲ್ಲ, ನಮಗೆ ಸೋಲಿನ ಭಯವಿಲ್ಲ: ಯತೀಂದ್ರ

ನನ್ನನ್ನ ಗೆಲ್ಲಿಸುವುದು ವರುಣ ಕ್ಷೇತ್ರದ ಮತದಾರರು. ನನ್ನ ಕ್ಷೇತ್ರದ ಮತದಾರರು ದ್ವೇಷದ ರಾಜಕಾರಣವನ್ನು ಒಪ್ಪಲ್ಲ ಹಾಗೂ ಮಾಡಲ್ಲ. ಅವರು 1 ಲಕ್ಷಗಳ ಮತಗಳ ಅಂತರದಿಂದ ಗೆಲ್ಲಿಸುತ್ತಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಯಾವನ್ ರೀ ಅವನು ಪ್ರತಾಪ್ ಸಿಂಹ, ಇಲ್ಲಿ ಯಾಕೆ ಬಂದು ಪ್ರಚಾರ ಮಾಡುತ್ತಿದ್ದಾರೆ. ಇದು ಚಾಮರಾಜನಗರ ಲೋಕಸಭಾ ಕ್ಷೇತ್ರ. ಅವನು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯಲ್ಲಿ ಅವನಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಇಲ್ಲಿಗೆ ಬಂದು ಓಡಾಡುತ್ತಿದ್ದಾನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...