ದೆಹಲಿಯತ್ತ ಡಿಕೆಶಿ: ಯಾರಾಗ್ತಾರೆ ಮುಖ್ಯಮಂತ್ರಿ?

Date:

ರಾಜ್ಯ ಮುಖ್ಯಮಂತ್ರಿ ಯಾರು? ಎಂಬ ವಿಚಾರ ಜಟಿಲವಾಗಿದೆ. ಭಾನುವಾರ ಕಾಂಗ್ರೆಸ್‌ ಶಾಸಕರ ಸಭೆ ನಡೆದಿದ್ದು, ಎಲ್ಲರೂ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದಕ್ಕೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೂ, ಮುಖ್ಯಮಂತ್ರಿ ಯಾರು ಎಂಬ ನಿರ್ಣಯವನ್ನು ಹೈಕಮಾಂಡ್‌ಗೆ ಬಿಟ್ಟಿದ್ದಾರೆ.

ಕಾಂಗ್ರೆಸ್‌ ಹೈಕಮಾಂಡ್ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ಗೆ ಸೋಮವಾರ ಬುಲಾವ್ ಹೊರಡಿಸಿತ್ತು. ಸಿದ್ದರಾಮಯ್ಯ ನಿನ್ನೆ ಮಧ್ಯಾಹ್ನವೇ ದೆಹಲಿಗೆ ತೆರಳಿದ್ದಾರೆ. ಅನಾರೋಗ್ಯದ ನೆಪ ಹೇಳಿದ ಡಿ.ಕೆ ಶಿವಕುಮಾರ್ ತಮ್ಮ ದೆಹಲಿ ಪ್ರವಾಸವನ್ನು ರದ್ದು ಮಾಡಿದ್ದರು. ಅವರು ಇಂದು (ಮಂಗಳವಾರ) ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಇದೇ ವೇಳೆ, ಸೋಮವಾರ ಸೋನಿಯಾ ಗಾಂಧಿ ಅವರೂ ಕೂಡ ದೆಹಲಿಯಲ್ಲಿರಲಿಲ್ಲ. ಅವರು ಶಿಮ್ಲಾಗೆ ತೆರಳಿದ್ದರು. ಇಂದು ಅವರೂ ಕೂಡ ದೆಹಲಿಗೆ ಮರಳಲಿದ್ದಾರೆ. ಅವರನ್ನು ಭೇಟಿ ಮಾಡುವ ಉದ್ದೇಶದಿಂದ ಸೋಮವಾರದ ದೆಹಲಿ ಪ್ರಯಾಣವನ್ನು ರದ್ದುಗೊಳಿಸಿದ್ದಾಗಿಯೂ ಶಿವಕುಮಾರ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಚ್ಚು ಶಾಸಕರು ಯಾರಿಗೆ ಬೆಂಬಲ ನೀಡುತ್ತಾರೆ ಎಂಬುದು ಮುಖ್ಯವಲ್ಲ. ನಾನು ಪಕ್ಷದ ಅಧ್ಯಕ್ಷ. ನನ್ನ ಅಧ್ಯಕ್ಷತೆಯಲ್ಲಿ 135 ಶಾಸಕರು ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ನಿರ್ಧಾರದ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದೇವೆ” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕಾಂಗ್ರೆಸ್ ಗೆಲುವಿನಲ್ಲಿದೆ ಮಲ್ಲಿಕಾರ್ಜುನ ಖರ್ಗೆ ಅಪ್ರತಿಮ ಪಾತ್ರ

ಶಿವಕುಮಾರ್ ದೆಹಲಿ ಪ್ರಯಾಣವನ್ನು ನಿನ್ನೆ ರದ್ದುಗೊಳಿಸಿದ್ದರೂ, ಅವರ ಸಹೋದರ ಡಿ.ಕೆ ಸುರೇಶ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ.

ಸಿದ್ದರಾಮಯ್ಯ ಅವರು ದೆಹಲಿಯಲ್ಲಿಯೇ ಉಳಿದಿದ್ದಾರೆ. ಶಿವಕುಮಾರ್ ಇಂದು ದೆಹಲಿಗೆ ತೆರಳಲಿದ್ದಾರೆ. ಆ ವೇಳೆಗೆ ಸೋನಿಯಾ ಗಾಂಧಿ ಅವರೂ ದೆಹಲಿಗೆ ಮರಳಲಿದ್ದು, ಖರ್ಗೆ ಮತ್ತು ಸೋನಿಯಾ ನೇತೃತ್ವದಲ್ಲಿ ಈ ಇಬ್ಬರು ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಯಾರು ಎಂದು ಘೋಷಿಸುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...