ವಿಧ್ಯಾರ್ಥಿಗಳ ಶಿಕ್ಷಣಗುಣಮಟ್ಟವನ್ನು ಸುಧಾರಿಸಲು ಮರು ಸಿಂಚನ ಯೋಜನೆ ಸಹಕಾರಿ

Date:

ಬಾಗೇಪಲ್ಲಿ : ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಮಟ್ಟ ಸುಧಾರಿಸಲು ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯದ 27 ಜಿಲ್ಲೆಗಳಲ್ಲಿ ‘ಮರು ಸಿಂಚನ’ ಕಾರ್ಯಕ್ರಮವನ್ನು ವಿಸ್ತರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದರ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನೊಳಗೊಂಡ ಅಭ್ಯಾಸ ಪುಸ್ತಕಗಳನ್ನು ವಿತರಿಸಲಾಗುತ್ತದೆ ಗುಣಮಟ್ಟವನ್ನು ಸುಧಾರಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಪಿ.ಎಂ.ಶ್ರೀ ಶಾಲೆ ಮುಖ್ಯ ಶಿಕ್ಷಕ ಆರ್.ಹನುಮಂತ ರೆಡ್ಡಿ ಹೇಳಿದರು.

ಪಟ್ಟಣದ ಪಿಎಂ ಶ್ರೀ ಶಾಲೆಗೆ ಮರು ಸಿಂಚನ ತಂಡದ ರಾಜ್ಯ ಮಟ್ಟದ ಅನುಷ್ಠಾನ ಅಧಿಕಾರಗಳು ಭೇಟಿ ನೀಡಿ ಅನುಷ್ಠಾನ ಹೇಗೆ ನಡೆದಿದೆ ಎಂಬುದರ ಬಗ್ಗೆ ಪರಿಶೀಲನೆಯನ್ನು ಮಾಡಿದರು. ಸಕ್ಷೇನ ಮೇಡಂ ರವರ ನೇತೃತ್ವದ ತಂಡ ರಾಜ್ಯಮಟ್ಟದ ನೋಡಲ್ ಅಧಿಕಾರಿಗಳಾದ ಪ್ರತೀಕ್ ಅವರು, ಮತ್ತು ಜಿಲ್ಲಾ ಮಟ್ಟದ ನೋಡಲು ಅಧಿಕಾರಿಗಳಾದ ಡಯಟ್ ನ ಸುರೇಶ್ ರವರು ಭೇಟಿ ನೀಡಿ ಶಾಲೆಯಲ್ಲಿ ಕಳೆದ ವರ್ಷ ಮರು ಸಿಂಚನ ಕಾರ್ಯಕ್ರಮದ ಅನುಷ್ಠಾನದಿಂದ ವಿದ್ಯಾರ್ಥಿಗಳಲ್ಲಾದ ಗಮನಾರ್ಹ ಬದಲಾವಣೆಗಳು ಯಾವುವು ಎಂಬುದರ ಬಗ್ಗೆ ಶಿಕ್ಷಕರಲ್ಲಿ ಚರ್ಚೆ ಮಾಡಿದರು.

ತದನಂತರ ಮಾತನಾಡಿ ಮರು ಸಿಂಚನ ಕಾರ್ಯಕ್ರಮವು ಉತ್ತಮವಾಗಿದ್ದು ವಿದ್ಯಾರ್ಥಿಗಳಲ್ಲಿನ ಕಲಿಕಾ ಕೊರತೆಯನ್ನು ನಿವಾರಿಸಲು ಇದು ಉತ್ತಮವಾದ ಯೋಜನೆಯಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿನ ಓದು ಬರಹ ಮೂಲಭೂತ ಕಲಿಕಾಂಶಗಳು ಮತ್ತು ಗಣಿತದ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದು ತಿಳಿಸಿದರು.
ಮರು ಸಿಂಚನ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಲ್ಲಿನ ಕಲಿಕಾ ಅಂತರವನ್ನು ನಿವಾರಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ. ಈ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ಅಭ್ಯಾಸ ಪುಸ್ತಕಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ನೀಡಲಾಗುತ್ತದೆ.

ಕನ್ನಡ, ಇಂಗ್ಲಿಷ್, ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಗಣಿತದಂತಹ ವಿಷಯಗಳಿಗೆ ಸಂಬಂಧಿಸಿದಂತೆ, ಕಲಿಕೆಯ ಮೂಲಭೂತ ಅಂಶಗಳನ್ನು ಬಲಪಡಿಸಲು ಈ ಪುಸ್ತಕಗಳು ನೆರವಾಗುತ್ತವೆ. ಇದರ ಮೂಲಕ, ವಿದ್ಯಾರ್ಥಿಗಳು ತಮ್ಮ ತರಗತಿಗೆ ಸಂಬಂಧಿಸಿದ ಕಲಿಕಾ ಫಲಿತಾಂಶಗಳನ್ನು ಸಾಧಿಸಲು ನೆರವಾಗಲಿದೆ. ಪ್ರಸ್ತುತ, ರಾಜ್ಯದಲ್ಲಿ 6 ರಿಂದ 10ನೇ ತರಗತಿಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಶೇಕಡಾ 40ರಷ್ಟು ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ.

ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸಲು ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ.
ಇದರಿಂದ, ಅವರು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ವೈಯಕ್ತಿಕವಾಗಿ ಬೆಂಬಲ ನೀಡಲು ಸಾಧ್ಯವಾಗುತ್ತದೆ. ಈ ಕಾರ್ಯಕ್ರಮವು ತರಗತಿಯ ಸಾಮಾನ್ಯ ಅವಧಿಗಳ ಜೊತೆಗೆ ವಿಶೇಷ ತರಗತಿಗಳನ್ನು ಒಳಗೊಂಡಿರುತ್ತದೆ. ಪ್ರತಿ ವರ್ಷ ಪ್ರತಿ ವಿಷಯಕ್ಕೆ ಸುಮಾರು 50 ಗಂಟೆಗಳ ಕಾಲಾವಧಿಯ ತರಗತಿಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳು ಶ್ರೇಣಿ-ಮಟ್ಟದ ಸಾಮರ್ಥ್ಯಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ಇದು ಒಟ್ಟಾರೆ 10ನೇ ತರಗತಿ ಫಲಿತಾಂಶಗಳನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.
ವಿದ್ಯಾರ್ಥಿಗಳ ಓದು ಬರಹ ಲೆಕ್ಕ ಮಾಡುವ ಸಾಮರ್ಥ್ಯದಲ್ಲಿ ಪ್ರಗತಿಯು ಕಂಡುಬಂದಿದ್ದು ಶಾಲೆಯು ಮರು ಸಿಂಚನ ಕಾರ್ಯಕ್ರಮವನ್ನು ಉತ್ತಮವಾಗಿ ಅನುಷ್ಠಾನ ಮಾಡಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ…? ಉನ್ನತ ಶಿಕ್ಷಣ ಇಲಾಖೆಯ 103 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆಗೆ ಆಹ್ವಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಬಿಇಓ ವೆಂಕಟೇಶಪ್ಪ ರವರು ಸಮೂಹ ಸಂಪನ್ಮೂಲ ಕೇಂದ್ರದ ಸಮನ್ವ ಯಾಧಿಕಾರಿಗಳಾದ ವೆಂಕಟರಾಮ್ ಹಾಗೂ ಪಿ.ಎಂ.ಶ್ರೀ ಶಾಲೆಯ ಶಿಕ್ಷಕರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related