ಬಾಗೇಪಲ್ಲಿ:-ಮಕ್ಕಳ ಕಲಿಕಾ ಪ್ರತಿಭೆಗೆ ಹಲವಾರು ಶೈಕ್ಷಣಿಕ ಚಟುವಟಿಕೆ ಒಳಗೊಂಡಿದ್ದು ಮಕ್ಕಳ ಕಲಿಕಾ ಪ್ರೇರಣೆ ಮತ್ತು ಬಲವರ್ಧನೆಗೆ ಕಲಿಕಾ ಹಬ್ಬ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿಕ್ಷಣ ಸಮನ್ವಯಾಧಿಕಾರಿಗಳಾದ ಆರ್.ವೆಂಕಟರಾಮ್ ಹೇಳಿದರು.
ಚಿಕ್ಕಬಳ್ಳಾಪುರ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ ಬಾಗೇಪಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಬಾಗೇಪಲ್ಲಿ ಪಟ್ಟಣದ ಕ್ಲಸ್ಟರ್ ಮಟ್ಟದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎಫ್.ಎಲ್.ಎನ್ ಕಲಿಕಾ ಹಬ್ಬ ( ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ)ಕಲಿಕಾ ಹಬ್ಬ ಕುರಿತು ಏರ್ಪಡಿಸಿದ್ದ ಪಟ್ಟಣದ ಶಾಲೆಯಲ್ಲಿ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲಿಕಾ ಹಬ್ಬವು ಮಕ್ಕಳ ಪ್ರತಿಭೆ ಹೊರ ತರಲು ಹಾಗೂ ಅವರಲ್ಲಿ ಸಂತಸದ ಕಲಿಕೆಯೊಂದಿಗೆ ಅವರ ಪ್ರತಿಭಾನ್ವೇಷಣೆಗೆ ಸಹಕಾರಿಯಾಗಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಸರ್ಕಾರ ಎಫ್‌ಎಲ್‌ಎನ್ ಕಲಿಕಾ ಹಬ್ಬ ಎಂಬ ವಿನೂತನ ಕಾರ್ಯಕ್ರಮ ಜಾರಿ ಮಾಡಿದೆ. ಪ್ರತಿಯೊಂದು ಮಗುವಿನಲ್ಲಿಯೂ ಕಲಿಕೆಯಲ್ಲಿ ವೈಯಕ್ತಿಕವಾದ ಭಿನ್ನತೆಗಳಿದ್ದು ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಸಂತಸದಾಯಕ ಮತ್ತು ಸೃಜನಾತ್ಮಕ ಚಟುವಟಿಕೆ ಮಾಡುವ ಪರಿಕಲ್ಪನೆಯನ್ನು ಮೂಡಿಸುವ ಚಟುವಟಿಕೆ ಕಾರ್ಯಕ್ರಮವಾಗಿದೆ ಎಂದರು.
ಪಿ.ಎಂ.ಶ್ರೀ ಶಾಲೆಯ ಮುಖ್ಯ ಶಿಕ್ಷಕ ಆರ್.ಹನುಮಂತ ರೆಡ್ಡಿ ಮಾತನಾಡಿ ವಿನೂತನ ಚಟುವಟಿಕೆಗಳುಳ್ಳ ಕಲಿಕಾ ಹಬ್ಬವು ಮಕ್ಕಳ ಕಲಿಕೆಗೆ ಹೆಚ್ಚಿನ ಉತ್ತೇಜನ ನೀಡುವುದರೊಂದಿಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಎಂದು ತಿಳಿಸಿದರು ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಗುಣಮಟ್ಟದ ಶಿಕ್ಷಣ ಹಾಗೂ ಮಕ್ಕಳ ಕಲಿಕಾ ಹಬ್ಬದ ಉದ್ದೇಶ ಮತ್ತು ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ಕುಶಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಾವು ಕಲಿತ ಪಾಠಗಳನ್ನೇ ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳ ಮೂಲಕ ಪ್ರದರ್ಶಿಸಿದರೆ, ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗುತ್ತದೆ. ಈ ಹಬ್ಬದಲ್ಲಿ ಮಕ್ಕಳಿಗೆ ಏಳು ವಿವಿಧ ಸ್ಪರ್ಧೆಗಳ ಮೂಲಕ ಅವರಲ್ಲಿ ಕಲಿಕಾ ಪ್ರೇರೇಪಣೆ ಬೆಳೆಸಲಾಗುತ್ತಿದೆ.
ಇದನ್ನು ಓದಿದ್ದೀರಾ..? ಮಾನವೀಯ ಮೌಲ್ಯಗಳನ್ನು ಹರಡಿದರಷ್ಟೇ ಸಮಸಮಾಜ ನಿರ್ಮಾಣ ಸಾಧ್ಯ: ಜಿಲ್ಲಾಧಿಕಾರಿ ಡಾ ಎಂ. ಆರ್ . ರವಿ
ಈ ಸಂದರ್ಭದಲ್ಲಿ ಸಿ.ಆರ್.ಪಿ ಪದ್ಮಾವತಿ, ಮಂಜುನಾಥ್, ನಾರಾಯಣ ಸ್ವಾಮಿ,, ಶಿಕ್ಷಕರಾದ ಪ್ರಭಾವತಿ,ಮುಖ್ಯ ಶಿಕ್ಷಕ ಕೆ.ವಿ.ಆದಿನಾರಾಯಣ,ಶ್ರೀನಿವಾಸ್,ಬೇಬಿ ಮಂತಾಜ್ ,ರಾಮಚಂದ್ರಪ್ಪ,ಜಬೀವುಲ್ಲಾ ವೈ.ಎಸ್.ಪ್ರಮೀಳಾ. ಹಾಗೂ ಎಸ್. ಡಿ.ಎಂ. ಸಿ ಅದ್ಯಕ್ಷೆ ಉಷಾ,ಸದಸ್ಯರಾದ ಶ್ರೀನಿವಾಸ್, ಹಾಗೂ ವಿವಿಧ ಶಾಲೆಯ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು





