ಚಿಕ್ಕಮಗಳೂರು | ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ರಾಜೀನಾಮೆ

Date:

  • ಟಿಕೆಟ್ ನೀಡಬಾರದೆಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದರು
  • ಮೂಡಿಗೆರೆ ಕ್ಷೇತ್ರದಿಂದ ದೀಪಕ್‌ ದೊಡ್ಡಯ್ಯ ಎಂಬುವವರಿಗೆ ಟಿಕೆಟ್‌

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ (ಎಸ್‌ಸಿ) ಮೀಸಲು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಹಾಲಿ ಶಾಸಕ ಮತ್ತು ಮೂರು ಬಾರಿ ಗೆದ್ದಿರುವ ಎಂ ಪಿ ಕುಮಾರಸ್ವಾಮಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಹೈಕಮಾಂಡ್‌ ಮೂಡಿಗೆರೆ ಕ್ಷೇತ್ರದಿಂದ ದೀಪಕ್‌ ದೊಡ್ಡಯ್ಯ ಎಂಬುವವರಿಗೆ ಟಿಕೆಟ್‌ ಘೋಷಣೆ ಮಾಡಿದೆ. ಎಂ ಪಿ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸ್ಪೀಕರ್ ಕಾಗೇರಿ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಎಂ ಪಿ ಕುಮಾರಸ್ವಾಮಿ

ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅದರ ಪರಿಣಾಮ ಬಿಜೆಪಿ ಹೈಕಮಾಂಡ್‌ ಈ ಬಾರಿ ಎಂ ಪಿ ಕುಮಾರಸ್ವಾಮಿಗೆ ಟಿಕೆಟ್‌ ನೀಡಲು ನಿರಾಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಎಂ ಪಿ ಕುಮಾರಸ್ವಾಮಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಗರಿಗೆ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. “ಆತ್ಮೀಯ ಕ್ಷೇತ್ರದ ಮತದಾರ ಬಂಧುಗಳೇ, ನಾನೆಂದು ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಕ್ಷೇತ್ರದ ಎಲ್ಲ ಜಾತಿ, ಧರ್ಮದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಂಡಿದ್ದು, ಹೈಕಮಾಂಡ್ ಗೇ ತಪ್ಪಾಗಿ ಕಂಡಿದ್ದು ಪರಮಾಶ್ಚರ್ಯ” ಎಂದಿದ್ದಾರೆ.

“ಸರ್ವೇ ಆಧರಿಸಿ ಟಿಕೆಟ್‌ ನೀಡುವ ಪಕ್ಷ ಪ್ರತಿ ಸರ್ವೇಯಲ್ಲಿ ಮುನ್ನಡೆಯಿದ್ದರು, ಟಿಕೆಟ್‌ ನಿರಾಕರಿಸಿದ್ದು ನೋವಿನ ವಿಚಾರ. ಮಳೆಯಿಂದಾಗಿ ಬೆಳೆ ಕಳೆದುಕೊಂಡ ಕ್ಷೇತ್ರದ ರೈತ ಭಾಂದವರಿಗೋಸ್ಕರ ವಿಧಾನಸೌಧದ ಗಾಂಧಿಪ್ರತಿಮೆ ಮುಂದೆ ಏಕಾಂಗಿಯಾಗಿ ಧರಣಿ ಕುಳಿತಿದ್ದು ಹೈ ಕಮಾಂಡ್‌ಗೆ ತಪ್ಪು ಅನ್ನಿಸಿದ್ದು ಇನ್ನೂ ಪರಮಾಶ್ಚರ್ಯ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಚೋದನಕಾರಿ ಭಾಷಣ : ನಟಿ ಶೃತಿ ವಿರುದ್ಧ ಪ್ರಕರಣ ದಾಖಲು

“ನಿಮಗೆಲ್ಲಾ ತಿಳಿದಿರುವಂತೆ ಶತ್ರುಗಳಿಗೂ ಕೂಡ ಕೇಡು ಬಯಸದೇ ಎಲ್ಲರನ್ನು ಸದಾ ಗೌರವಿಸುತ್ತಾ ಪ್ರೀತಿಯಿಂದ ಕಾಣುತ್ತಲೇ ಬಂದೆ. ಪಕ್ಷದ ಕಾರ್ಯಕರ್ತರನ್ನು ಬೆಳೆಸಿದ್ದೇನೆ ಹೊರತು ನನ್ನ ಮನೆಯವರನ್ನಲ್ಲ. ಯೋಚಿಸುವ ಶಕ್ತಿ ನಿಮ್ಮಲ್ಲಿದೆ. ನನಗೆ ಶಕ್ತಿ ತುಂಬುವ ಕೈಗಳು ನೀವು. ಇನ್ನು ಮುಂದೆಯೂ ನಿಮ್ಮೊಂದಿಗೆ ಸದಾ ಜೊತೆಯಲ್ಲಿರುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಸದಾ ನನ್ನ ಮೇಲಿರುತ್ತದೆ ಎಂಬ ನಂಬಿಕೆ ನನಗಿದೆ” ಎಂದು ಭಾವನಾತ್ಮಕ ಸಂದೇಶ ಬರೆದುಕೊಂಡಿದ್ದಾರೆ.

ಟಿಕೆಟ್ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಎಂ ಪಿ ಕುಮಾರಸ್ವಾಮಿ ಇಂದು ಕಾರ್ಯಕರ್ತರು ಮತ್ತು ಬೆಂಬಲಿಗರ ಸಭೆ ಕರೆದಿದ್ದಾರೆ. ಈ ಸಭೆ ಬಳಿಕ ಜೆಡಿಎಸ್  ಸೇರುವ ಸಾಧ್ಯತೆಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...