ಖರ್ಗೆ ವಿರುದ್ಧ ಅಂದು ತೊಡೆ ತಟ್ಟಿದ್ದ ಚಿಂಚನಸೂರ್; ಇಂದು ಅವರನ್ನೇ ಅಪ್ಪ ಎಂದರು

Date:

  • ‘ಚಿತ್ತಾಪುರದಲ್ಲಿ ಬಿಜೆಪಿ ಹೇಳ ಹೆಸರಿಲ್ಲದಂತಾಗಲಿದೆ’
  • ನಾನು ಡಿ ಕೆ ಶಿವಕುಮಾರ್ ಋಣ ತೀರಿಸಬೇಕಾಗಿದೆ

ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿ ತೊರೆದು ಬುಧವಾರ ಮತ್ತೆ ತಮ್ಮ ಮಾತೃ ಪಕ್ಷ ಕಾಂಗ್ರೆಸ್‌ಗೆ ಮರಳಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿರುವ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಾಡಿ ಹೊಗಳಿಸಿದ್ದಾರೆ.

ಬಾಬುರಾವ್ ಚಿಂಚನಸೂರ್ ಅವರು ತಲಾ ಎರಡು ಬಾರಿ ಚಿತ್ತಾಪುರ ಮತ್ತು ಗುರುಮಠಕಲ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದವರು. 2018ರ ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಂಡಾಯ ಸಾರಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದವರು ಚಿಂಚನಸೂರ್. 

ಬಾಬುರಾವ್ ಚಿಂಚನಸೂರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಶತಾಗತಾಯ ಸೋಲಿಸಲೇ ಬೇಕೆಂದು ಕಾಂಗ್ರೆಸ್ ನಾಯಕ ಉಮೇಶ್ ಜಾದವ್ ಅವರನ್ನು ಸಹ ಬಿಜೆಪಿಗೆ ಕರೆ ತರುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ಇದರ ಪರಿಣಾಮ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಉಮೇಶ್ ಜಾದವ್ ವಿರುದ್ಧ ತಮ್ಮ ರಾಜಕೀಯ ಜೀವನದ ಮೊದಲ ಸೋಲು ಅನುಭವಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭಾ ಚುನಾವಣೆಗೂ ಮೊದಲು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿಯೇ ಸಿದ್ಧ ಎಂದಿದ್ದ ಬಾಬುರಾವ್ ಚಿಂಚನಸೂರ್ ಕಳೆದ ತಿಂಗಳಷ್ಟೇ ಪ್ರಿಯಾಂಕ್ ಖರ್ಗೆ ಅವರನ್ನು ಚಿತ್ತಾಪುರ ಕ್ಷೇತ್ರದಲ್ಲಿ ಸೋಲಿಸುವುದಾಗಿ ತೊಡೆ ತಟ್ಟಿದ್ದರು.  ಆದರೆ, ಬಾಬುರಾವ್ ಚಿಂಚನಸೂರ್ ಅವರಿಗೆ ಬಿಜೆಪಿ ಟಿಕೆಟ್ ಕೊಡಲು ನಿರಾಕರಿಸಿದ ಕಾರಣ ಕಮಲ ಪಡೆ ಬಿಟ್ಟು ಮತ್ತೆ ಕೈ ಹಿಡಿದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಹಳೆಯ ಮಾತುಗಳಿಗೆ ತಿರುಗೇಟು ಎಂಬಂತೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಾಡಿಹೊಗಳಿದ್ದಾರೆ.

“ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ನಾಯಕರಾಗಿ ಬೆಳೆದಿದ್ದಾರೆ. ಡಿ ಕೆ ಶಿವಕುಮಾರ್‌ ಅವರು ಎಸ್ ಎಂ ಕೃಷ್ಣ ಸರ್ಕಾರದಲ್ಲಿ ನನಗೆ ಏಳು ಖಾತೆ ಕೊಡಿಸಿದ ಧೀಮಂತ ನಾಯಕ. ಏಳು ಜನ್ಮ ಬಂದರೂ ಶಿವಕುಮಾರ್ ಋಣ ತೀರಿಸಲು ಸಾಧ್ಯವಿಲ್ಲ. ಖರ್ಗೆ ನೇತೃತ್ವದಲ್ಲಿ ಹೈದರಾಬಾದ್ ಕರ್ನಾಟಕದಲ್ಲಿ ಜಯಭೇರಿ ಬಾರಿಸುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿತ್ತಾಪುರದಲ್ಲಿ ಕಾಂಗ್ರೆಸ್‌ ಅನ್ನು ಸೋಲಿಸುವ ಶಪಥ ಮಾಡಿದ್ದ ಚಿಂಚನಸೂರ್ ಇದೀಗ ಉಲ್ಟಾ ಹೊಡೆದು, “ಇಂದಿಗೆ ಬಿಜೆಪಿ ಮುಗಿದ ಅಧ್ಯಾಯ. ಚಿತ್ತಾಪುರದಲ್ಲಿ ಬಿಜೆಪಿ ಹೇಳ ಹೆಸರಿಲ್ಲದಂತಾಗಿದೆ. ನಾನು ಡಿ ಕೆ ಶಿವಕುಮಾರ್ ಬಗ್ಗೆ ಎಲ್ಲೂ ಚಕಾರ ಎತ್ತಿಲ್ಲ. ನಾನು ಶಿವಕುಮಾರ್ ಋಣ ತೀರಿಸಬೇಕಾಗಿದೆ. ನನಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ” ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗಿನ ಜಗಳದ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಜೊತೆಗಿನ ಭಿನ್ನಾಭಿಪ್ರಾಯ ವಿಚಾರವಾಗಿ ನಮ್ಮದು ಮತ್ತು ಖರ್ಗೆ ನಡುವೆ ತಂದೆ ಮಗನ ಜಗಳ. ತಂದೆ ಮಕ್ಕಳ ಭಿನ್ನಾಭಿಪ್ರಾಯ ಈಗ ಮುಗಿದಿದೆ” ಎಂದು ಸಮಜಾಯಿಷಿ ನೀಡಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...