ರೈತರ ಹಕ್ಕೊತ್ತಾಯ ಈಡೇರಿಸುವುದಾಗಿ ಘೋಷಣೆ: ಪ್ರಮಾಣ ಪತ್ರಕ್ಕೆ ಸಹಿ ಹಾಕಿದ ಕಾಂಗ್ರೆಸ್ ಮತ್ತು ಜೆಡಿಎಸ್

Date:

“ಬಿಜೆಪಿ ಸರ್ಕಾರ ರೈತರನ್ನು ನಾಶಮಾಡುವಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನವೇ, ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಘೋಷಿಸಿದ್ದಾರೆ.

ಬೆಂಗಳೂರಿನ ಗಾಂಧಿಭವನದಲ್ಲಿ ಬುಧವಾರ, ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಬಸವರಾಜಪ್ಪ ಬಣ), ಭಾರತೀಯ ಕೃಷಿಕ ಸಮಾಜ, ರೈತ ಕೂಲಿ ಸಂಘ, ಭೂಮಿ ಮತ್ತು ವಸತಿ ಹಕ್ಕು, ವಂಚಿತರ ಹೋರಾಟ ಸಮಿತಿ, ಗಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹಾಗೂ ಕರ್ನಾಟಕ ಜನಶಕ್ತಿ ಸೇರಿದಂತೆ ಒಟ್ಟು 15 ಸಂಘಟನೆಗಳು ಸೇರಿ ರಾಜಕೀಯ ಪಕ್ಷಗಳ ಮುಂದೆ ರೈತ ಪ್ರಣಾಳಿಕೆಯನ್ನು ಮಂಡಿಸಿದವು. ರೈತ ಸಮುದಾಯದ 15 ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಪ್ಪಿ ಸಹಿ ಮಾಡಿವೆ.

ಈ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್‌, “ನಾವು ಭಿನ್ನವಾದ ಆಡಳಿತ ನಡೆಸಲು ಬಯಸುತ್ತೇವೆ. ರೈತರ ಋಣ ನಮ್ಮ ಮೇಲಿದೆ. ಜಾನುವಾರು ಹತ್ಯೆ ನಿಯಂತ್ರಣ ಕಾಯ್ದೆ ಹೆಸರಲ್ಲಿ ರೈತರಿಗೆ ಕಿರುಕುಳ ನೀಡಲಾಗುತ್ತಿದೆ. ಹಾಗಾಗಿ, ಆ ಕಾಯ್ದೆಯ ಜೊತೆಗೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಬಹುಮುಖ್ಯವಾಗಿ ವಿದ್ಯುತ್‌ ಖಾಸಗೀಕರಣ ಕಾಯ್ದೆಯನ್ನು ಕಿತ್ತುಹಾಕುತ್ತೇವೆ” ಎಂದು ತಮ್ಮ ಪಕ್ಷದ ನಿಲುವನ್ನು ದೃಢಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಜನತಾ ದಳ ಪಕ್ಷದ ವಿಧಾನ ಪರಿಷತ್‌ ಸದಸ್ಯರು ಹಾಗೂ ಪಕ್ಷದ ಪ್ರಣಾಳಿಕೆ ಸಮಿತಿಯ ಸದಸ್ಯ ತಿಪ್ಪೇಸ್ವಾಮಿ ಮಾತನಾಡಿ, “ರಾಜ್ಯದೊಳಗೆ ನಂದಿನಿ ಜಾಗಕ್ಕೆ ಅಮೂಲ್‌ ಪ್ರವೇಶಕ್ಕೆ ಯಾವುದೇ ಅವಕಾಶ ಇಲ್ಲ. ಬದಲಾಗಿ ಕೆಎಂಎಫ್‌ ಅಡಿಯಲ್ಲಿ ಬರುವ 18 ಜಿಲ್ಲಾ ಹಾಲು ಒಕ್ಕೂಟಗಳಿಗೆ ಉತ್ತೇಜನ ನೀಡುವ ಯೋಜನೆಗಳನ್ನು ಅನುಷ್ಠಾನ ಮಾಡುತ್ತೇವೆ” ಎಂಬ ನಿಲುವನ್ನು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಯಶವಂತಪುರ ಕ್ಷೇತ್ರ | ತೆನೆ ಪಕ್ಷದ ಅನುಕಂಪದ ಅಲೆಯಲ್ಲಿ ಕೊಚ್ಚಿ ಹೋಗುವುದೇ ಕಮಲ!

“ರೈತರ ಪರ ನಮ್ಮ ಪಕ್ಷ ಕೂಡ ಪ್ರಣಾಳಿಕೆ ಸಿದ್ದಪಡಿಸಿದೆ. ರೈತರ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ₹2 ಲಕ್ಷ ಸಹಾಯಧನ ಸೌಲಭ್ಯ, ಮುಳುಗಡೆ ಪ್ರದೇಶದ ಜನರಿಗೆ ಪುನರ್ವಸತಿಯಂತಹ ಮಹತ್ವದ ಯೋಜನೆಗಳನ್ನು ತರುವ ತೀರ್ಮಾನ ಮಾಡಲಾಗಿದೆ. ಅಲ್ಲದೆ, ರೈತ ಸಮುದಾಯದ ಎಲ್ಲ ಹಕ್ಕೊತ್ತಾಯಗಳನ್ನು ಒಪ್ಪಿದ್ದು, ಪಕ್ಷದ ನಾಯಕರೊಂದಿಗೆ ಚರ್ಚಿಸಿ ಅಳವಡಿಸಿಕೊಂಡು ನಮ್ಮ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ” ಎಂದರು.

ಈ ಸಂಧರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ರಾಜೀವ್‌ ಶುಕ್ಲಾ, ರಘುನಂದನ್, ರೈತ ನಾಯಕರಾದ ಬಡಗಲಪುರ ನಾಗೇಂದ್ರ, ಬಯ್ಯಾರೆಡ್ಡಿ, ಟಿ ಯಶವಂತ, ಆರ್ಥಿಕ ತಜ್ಞರಾದ ಪ್ರಕಾಶ್ ಕಮ್ಮರಡಿ,‌ ಹನಾನ್ ಮುಲ್ಲಾ, ಮಂಜುನಾಥ್, ಕಾರ್ಮಿಕ ಸಂಘಟನೆಯ ನಿಂಗಮ್ಮ, ಮರಿಯಪ್ಪ, ಡಿಎಸ್ ಪೂಜಾರ್ ಹಾಗೂ ರೈತ ಮತ್ತು ಕಾರ್ಮಿಕ ಸಂಘಟನೆಯ ಎಲ್ಲ ಪ್ರಮುಖ ನಾಯಕರು ಚರ್ಚೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...